By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹಿಂದೂ ಮಹಾಗಣಪತಿ ಶೊಭಾಯಾತ್ರೆ
    ಹಿಂದೂ ಮಹಾಗಣಪತಿ ಅದ್ದೂರಿ ಶೊಭಾಯಾತ್ರೆ | ಹೈಕೋರ್ಟ್ ನ್ಯಾಯವಾದಿ ಅರುಣ್ ಶ್ಯಾಮ್ ಚಾಲನೆ
    8 hours ago
    ನಾಳೆ ಚಿತ್ರದುರ್ಗಕ್ಕೆ ಕೇಂದ್ರ ಬರ ಅಧ್ಯಯನ ತಂಡ | ಬೆಳೆ ಹಾನಿ ಪರಿಶೀಲನೆ
    10 hours ago
    Dr.Yuvaraj
    ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
    21 hours ago
    Training Workshop on Tuberculosis Detection in Children
    2030ರೊಳಗೆ ಕ್ಷಯ ಮುಕ್ತ ಭಾರತ | ಮೊದಲು ಚಿತ್ರದುರ್ಗ ಕ್ಷಯ ಮುಕ್ತಗೊಳಿಸಲು ಕರೆ
    1 day ago
    Mahatma Gandhiji and Lal Bahadur Shastriji's Birth Anniversaries at SJM Polytechnic College
    ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    22 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    6 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    5 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    9 hours ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    20 hours ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    21 hours ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    2 days ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
    2 days ago
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    3 days ago
Reading: ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ

News Desk Chitradurga News
Last updated: 15 August 2026 19:03
News Desk Chitradurga News
2 months ago
Share
ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
SHARE

CHITRADURGA NEWS | 15 AUGUST 2026

ಚಿತ್ರದುರ್ಗ: ವಿವಿಧ ಇಲಾಖೆಗಳಿಂದ ಜಿಲ್ಲೆಯಾದ್ಯಂತ ನಿರ್ಮಿಸಲಾಗಿರುವ ಸಮುದಾಯ ಭವನಗಳ ಸರಿಯಾದ ನಿರ್ವಹಣೆಗೆ, ಜಿಲ್ಲಾಧಿಕಾರಿಗಳು ಶೀಘ್ರವೇ ಮಾರ್ಗಸೂಚಿ ರಚಿಸಿ ಹೊಸದೊಂದು ಸುತ್ತೋಲೆ ಹೊರಡಿಸುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಸೂಚಿಸಿದರು.

ಇದನ್ನೂ ಓದಿ: ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ

ಶನಿವಾರ ನಗರದ ನವೀಕೃತ ತ.ರಾ.ಸು ರಂಗಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸೇರಿದಂತೆ ವಿವಿದ ಇಲಾಖೆಗಳ ಅಡಿ ಸಮುದಾಯಗಳ ಅನುಕೂಲಕ್ಕಾಗಿ ಭವನಗಳನ್ನು ನಿರ್ಮಿಸಲಾಗಿದೆ. ಆದರೆ ಈ ಭವನಗಳು ಸೂಕ್ತ ನಿರ್ವಹಣೆ ಇಲ್ಲದೆ ದುರಸ್ತಿ ಹಂತಕ್ಕೆ ತಲುಪುತ್ತಿರುವುದಕ್ಕೆ ಕಳವಳಕಾರಿ ಸಂಗತಿಯಾಗಿದೆ.

ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಅಂಬೇಡ್ಕರ್, ಜಗಜೀವನ್ ರಾಮ್, ವಾಲ್ಮೀಕಿ ಸೇರಿದಂತೆ ವಿವಿಧ ನಾಯಕರ ಹೆಸರಿನಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ಸರ್ಕಾರದಿಂದ ನಿರ್ಮಿಸಲಾಗುವ ಪ್ರತಿಯೊಂದು ಕಟ್ಟಡವೂ ನಿರಂತರವಾಗಿ ಸಾರ್ವಜನಿಕರ ಬಳಕೆಗೆ ಲಭ್ಯವಿರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.ಗ್ರಾಮೀಣ ಭಾಗದಲ್ಲಿ ನಿರ್ಮಿಸುವ ಸಮುದಾಯ ಭವನಗಳ ನಿರ್ವಹಣೆಯ ಹೊಣೆಯನ್ನು ಆಯಾ ಗ್ರಾಮಸ್ಥರು ಮತ್ತು ಸ್ಥಳೀಯ ಸಮುದಾಯಗಳಿಗೆ ನೀಡಬೇಕು. 

ಇದನ್ನೂ ಓದಿ: ಎಸ್.ಜೆ.ಎಂ. ಕ್ಯಾಂಪಸ್‌ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಅದೇ ರೀತಿ ತಾಲೂಕು ಮಟ್ಟದಲ್ಲಿರುವ ಭವನಗಳ ನಿರ್ವಹಣೆ ಟ್ರಸ್ಟ್‍ಗಳನ್ನು ರಚನೆ ಮಾಡುವುದು ಅಗತ್ಯವಾಗಿದೆ. ಸಂಬಂಧಪಟ್ಟ ಇಲಾಖೆಗಳು ಭವನಗಳ ಸುಸ್ಥಿತಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣಗೊಳ್ಳುವ ಆಸ್ತಿ ಪಾಸ್ತಿಗಳು ದುರ್ಬಳಕೆಯಾಗದಂತೆ ಅಥವಾ ಹಾಳಾಗದಂತೆ ತಡೆಯುವುದು ಪ್ರತಿಯೊಬ್ಬರ ಕರ್ತವ್ಯ ಸಚಿವ ಟಿ. ರಘುಮೂರ್ತಿ ಹೇಳಿದರು.

ಸಾಹಿತ್ಯ-ಇತಿಹಾಸದ ಸಮ್ಮಿಳನ:

ಕಲ್ಲಿನ ಕೋಟೆಯ ಐತಿಹಾಸಿಕ ಹಿನ್ನೆಲೆ ಹಾಗೂ ಸಾಹಿತ್ಯ ಲೋಕದ ದಿಗ್ಗಜ ತ.ರಾ.ಸು. ಅವರ ಕಾದಂಬರಿಗಳ ವೈಭವವನ್ನು ಪ್ರತಿಯೊಬ್ಬರಿಗೂ ನೆನಪಿಸುವಂತೆ ನಗರದ ನವೀಕೃತ ತ.ರಾ.ಸು. ರಂಗಮಂದಿರವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಸಚಿವ ಟಿ. ರಘುಮೂರ್ತಿ ಹೇಳಿದರು.

ಸಾಹಿತಿ ತ.ರಾ.ಸು. ಅವರ ಬರವಣಿಗೆಗಳು ಸಮಾಜವನ್ನು ತಿದ್ದುವ ಕೆಲಸ ಮಾಡಿವೆ. ಅವರ ಕಾದಂಬರಿ ಆಧಾರಿತ ಚಂದನದ ಗೊಂಬೆ, ಬೆಂಕಿಯ ಬಲೆ, ಚಂದವಳ್ಳಿಯ ತೋಟ, ತಿರುಗುಬಾಣ, ಗಾಳಿಮಾತು ಹಾಗೂ ನಾಗರಹಾವು ಸಿನಿಮಾಗಳು ರಾಜ್ಯದಾದ್ಯಂತ ಅಪಾರ ಜನಪ್ರಿಯತೆ ಗಳಿಸಿವೆ. ವಿಶೇಷವಾಗಿ ‘ನಾಗರಹಾವು’ ಚಿತ್ರವು ಚಿತ್ರದುರ್ಗ ಜಿಲ್ಲೆಯ ಇತಿಹಾಸ, ಕಲ್ಲಿನ ಕೋಟೆಯ ಹಿನ್ನೆಲೆ ಮತ್ತು ವೀರ ವನಿತೆ ಒನಕೆ ಓಬವ್ವಳ ಶೌರ್ಯವನ್ನು ಇಡೀ ನಾಡಿಗೆ ಪರಿಚಯಿಸಿದೆ ಎಂದು ಸ್ಮರಿಸಿದರು.

ಇದನ್ನೂ ಓದಿ: ತುರವನೂರಿನಲ್ಲಿ ಸ್ವಾತಂತ್ರ್ಯ ಇತಿಹಾಸ ಬಿಂಬಿಸುವ ಉದ್ಯಾನವ ನಿರ್ಮಾಣ | ಟಿ.ರಘುಮೂರ್ತಿ 

2006ರಲ್ಲಿ ಉದ್ಘಾಟನೆಗೊಂಡಿದ್ದ ಈ ರಂಗಮಂದಿರ, 2017ರಲ್ಲಿ ಸಣ್ಣಪುಟ್ಟ ರಿಪೇರಿ ಕಂಡಿತ್ತಾದರೂ, 2025ರ ವೇಳೆಗೆ ಸಾಕಷ್ಟು ಅವ್ಯವಸ್ಥೆಯಿಂದ ಕೂಡಿತ್ತು. ಇದನ್ನು ಮನಗಂಡು, ಡಿಎಂಎಫ್ ಅನುದಾನದಡಿ ಸೂಕ್ತ ಯೋಜನೆ ರೂಪಿಸಿ, ಇಂದು ಅತ್ಯಾಧುನಿಕ ಹಾಗೂ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ನವೀಕರಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲೇ ಈ ರಂಗಮಂದಿರ ಲೋಕಾರ್ಪಣೆಗೊಂಡಿರುವುದು ವಿಶೇಷವಾಗಿದೆ. ಇದು ಕೇವಲ ಕಲಾವಿದರಿಗೆ ಮಾತ್ರವಲ್ಲದೆ, ವಿವಿಧ ರಂಗದ ಸಾಂಸ್ಕøತಿಕ ಕಾರ್ಯಕ್ರಮಗಳು, ಜಯಂತಿಗಳು ಹಾಗೂ ಶಾಲಾ ಮಕ್ಕಳ ಕಾರ್ಯಕ್ರಮಗಳಿಗೆ ಪೂರಕವಾದ ವೇದಿಕೆಯಾಗಲಿದೆ ಎಂದರು.  

ಶೌಚಾಲಯ ಮತ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಸೂಚನೆ:

ರೂ.2.70 ಕೋಟಿ ವೆಚ್ಚದಲ್ಲಿ ನವೀಕರಣಗೊಂಡಿರುವ ಈ ರಂಗಮಂದಿರದಲ್ಲಿ ಸಾರ್ವಜನಿಕರಿಗೆ ಸೂಕ್ತ ಸೌಲಭ್ಯ ಕಲ್ಪಿಸುವುದು ಅತ್ಯಗತ್ಯ. ಕಟ್ಟಡ ನಿರ್ಮಿಸುವುದು ಮಾತ್ರವಲ್ಲ, ಅದರ ಕಾಲಕಾಲಕ್ಕೆ ಸರಿಯಾದ ನಿರ್ವಹಣೆ ಬಹಳ ಮುಖ್ಯ ಎಂದು ಸಚಿವ ಟಿ.ರಘುಮೂರ್ತಿ ಪ್ರತಿಪಾದಿಸಿದರು.

 ಯಾವುದೇ ಕಟ್ಟಡಕ್ಕೆ ತೆರಳಿದಾಗ ಮೊದಲು ಶೌಚಾಲಯಗಳ ವ್ಯವಸ್ಥೆ ಸರಿಯಾಗಿದೆಯೇ ಎಂದು ಪರಿಶೀಲಿಸುವುದು ಮುಖ್ಯ. ಇಲ್ಲಿ ಶೌಚಾಲಯದ ಕಾಮಗಾರಿ ಮತ್ತು ಪೇಂಟಿಂಗ್ ಇನ್ನೂ ಪೂರ್ಣ ಪ್ರಮಾಣದಲ್ಲಿ ತೃಪ್ತಿಕರವಾಗಿಲ್ಲ. ಈ ನ್ಯೂನತೆಗಳನ್ನು ಗುತ್ತಿಗೆದಾರರು ತಕ್ಷಣವೇ ಸರಿಪಡಿಸಬೇಕು ಎಂದು ಎಚ್ಚರಿಸಿದರು. ಹೆಚ್ಚಿನ ಕಲಾವಿದರಿಗೆ ಅನುಕೂಲವಾಗುವಂತೆ ರಂಗಮಂದಿರದಲ್ಲಿರುವ ಲಾಕರ್ ಕೊಠಡಿಯನ್ನು ವಿಭಾಗಿಸಿ ಮಾರ್ಪಡಿಸಲು ಸೂಚಿಸಿದರು.

ಮಲ್ಟಿಪ್ಲೆಕ್ಸ್ ಮಾದರಿಯಲ್ಲಿ ತ.ರಾ.ಸು. ರಂಗಮಂದಿರಕ್ಕೆ ಕಾಯಕಲ್ಪ:

ಡಾಲ್ಬಿ ಸೌಂಡ್ ಸಿಸ್ಟಮ್, ಅತ್ಯಾಧುನಿಕ ಲೈಟಿಂಗ್, ವೇದಿಕೆಯಲ್ಲಿ ಎಲ್‍ಇಡಿ ಸ್ಕ್ರೀನ್, ಹವಾನಿಯಂತ್ರಿತ ವ್ಯವಸ್ಥೆ ಅಳವಡಿಸಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಮಾದರಿಯಲ್ಲಿ ತ.ರಾ.ಸು ರಂಗಮಂದಿರವನ್ನು ನವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಮೈಗ್ರೇನ್ ಸಮಸ್ಯೆ ಇರುವವರು ಈ ಯೋಗಾಸನ ಮಾಡಿ

ಸುಮಾರು 20 ವರ್ಷಗಳ ಹಳೆಯದಾದ ತ.ರಾ.ಸು ರಂಗಮಂದಿರದ ಕಟ್ಟಡವನ್ನು ಎಂಟು ವರ್ಷಗಳ ಹಿಂದೆ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿತ್ತು. ಆದರೆ, ಅಕೌಸ್ಟಿಕ್ ವ್ಯವಸ್ಥೆ ಸರಿಯಿಲ್ಲದೆ ಧ್ವನಿ ಕರ್ಕಶವಾಗಿ ಕೇಳಿಸುತ್ತಿತ್ತು. ಈ ಬಾರಿ ರೂ.2.70 ಕೋಟಿ ವೆಚ್ಚದಲ್ಲಿ ಸಂಪೂರ್ಣ ವೈಜ್ಞಾನಿಕ ಅಕೌಸ್ಟಿಕ್ ಮಾದರಿಯಲ್ಲಿ ರಂಗಮಂದಿರವನ್ನು ಸಜ್ಜುಗೊಳಿಸಲಾಗಿದೆ.

ರಂಗಮಂದಿರ ನವೀಕರಣ ಕಾಮಗಾರಿಗಾಗಿ ಸುಮಾರು 100ಕ್ಕೂ ಹೆಚ್ಚು ಕಾರ್ಮಿಕರು 1 ವರ್ಷ 4 ತಿಂಗಳ ಕಾಲ ನಿರಂತರವಾಗಿ ಶ್ರಮಿಸಿದ್ದಾರೆ. ನಿರ್ಮಿತಿ ಕೇಂದ್ರದ ಮೂಲಕ ಬೆಂಗಳೂರಿನ ಖಾಸಗಿ ಏಜೆನ್ಸಿ ಸಹಯೋಗದೊಂದಿಗೆ ಈ ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ರಂಗಮಂದಿರದಲ್ಲಿ ಕೇವಲ ಮುಖ್ಯ ವೇದಿಕೆ ಮಾತ್ರವಲ್ಲದೆ, ಹೊರಾಂಗಣ, ಕಲಾವಿದರ ಗ್ರೀನ್ ರೂಮ್ ಸೇರಿದಂತೆ ಪ್ರತಿಯೊಂದು ವಿಭಾಗವನ್ನು ಆಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ನಾಟಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕೆ ಅಗತ್ಯವಿರುವ ಎಲ್ಲಾ ಸುಸಜ್ಜಿತ ವ್ಯವಸ್ಥೆಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.

ಡಿ.ಸುಧಾಕರ್ ಓಡನಾಟ ನೆನೆದು ಭಾವುಕರಾದ ಜಿಲ್ಲಾಧಿಕಾರಿ:

ಪ್ರಾಸ್ತಾವಿಕವಾಗಿ ಮಾತು ಆರಂಭಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ದಿವಗಂತ ಮಾಜಿ ಸಚಿವ ಡಿ.ಸುಧಾಕರ್ ಅವರ ಓಡನಾಟ ನೆನೆದು ಕ್ಷಣಕಾಲ ಭಾವುಕರಾದರು. ವೇದಿಕೆಯ ಮೇಲೆಯೇ ಜಿಲ್ಲಾಧಿಕಾರಿಗಳ ಕಣ್ಣುಗಳು ತೇವವಾದವು.

ಇದನ್ನೂ ಓದಿ: ಕುಂದುಕೊರತೆ ಪರಿಹಾರಕ್ಕೆ ಪ್ರಜಾ ಸೇವಾ ಶಾಖೆ | 2,747 ಕರೆಗಳಿಗೆ ಸ್ಪಂದನೆ

ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ರಂಗಮಂದಿರದ ಸ್ಥಿತಿ ಅತ್ಯಂತ ಶೋಚನೀಯವಾಗಿತ್ತು. ಸೌಂಡ್, ಬೆಳಕು ಹಾಗೂ ಮೂಲಸೌಕರ್ಯಗಳ ಕೊರತೆಯಿತ್ತು. ಈ ವೇಳೆ ಸಚಿವರಾಗಿದ್ದ ಡಿ.ಸುಧಾಕರ್ ಅವರು ರಂಗಮಂದಿರಕ್ಕೆ ಕಾಯಕಲ್ಪ ನೀಡಬೇಕು ಎಂಬ ಆಶಯ ವ್ಯಕ್ತಪಡಿಸಿ, ತಮ್ಮ ಶಾಸಕರ ಅನುದಾನದಿಂದ ಅಗತ್ಯ ಹಣ ಒದಗಿಸುವುದಾಗಿ ಭರವಸೆ ನೀಡಿದ್ದರು. ಅವರ ನಿರಂತರ ಬೆಂಬಲ ಹಾಗೂ ಆಸಕ್ತಿಯಿಂದಾಗಿ ಇಂದು ಈ ಆಧುನಿಕ ರಂಗಮಂದಿರ ರೂಪುಗೊಂಡಿದೆ ಎಂದು ಸ್ಮರಿಸಿದರು.

ರಂಗಮಂದಿರದ ನಿರ್ವಹಣೆ ಮುಖ್ಯವಾಗಿದ್ದು, ಇದಕ್ಕಾಗಿ ಅಪರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿಯೊಂದನ್ನು ರಚಿಸಲಾಗಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಕಡಿಮೆ ಸಿಬ್ಬಂದಿ ಇದ್ದು, ಇಷ್ಟು ದೊಡ್ಡ ರಂಗಮಂದಿರದ ನಿರ್ವಹಣೆ ಕಷ್ಟಕರವಾಗಲಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ರಂಗಮಂದಿರದ ಸುಸ್ಥಿರ ನಿರ್ವಹಣೆಗೆ ಸಾರ್ವಜನಿಕರು ಹಾಗೂ ಸಂಘಟಕರಿಂದ ಕನಿಷ್ಠ ಶುಲ್ಕ ನಿಗದಿಪಡಿಸಿ, ಆ ಮೊತ್ತದಿಂದಲೇ ಕಟ್ಟಡದ ರಕ್ಷಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದನ್ನೂ ಓದಿ: ಆಗಾಗ್ಗೆ ಮಲಬದ್ಧತೆ ಉಂಟಾಗಲು ಈ ಕಾಯಿಲೆಗಳೇ ಕಾರಣವಂತೆ

ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂಸದ ಗೋವಿಂದ ಎಂ ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರಿದ ಅಧ್ಯಕ್ಷ ಆರ್.ಶಿವಣ್ಣ, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಎಂ.ಜೆ.ಮಹೇಶ್, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಹರೀಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಉಪಸ್ಥಿರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsT.R.A.S.U. Theatreಚಿತ್ರದುರ್ಗಚಿತ್ರದುರ್ಗ ನ್ಯೂಸ್ತ.ರಾ.ಸು ರಂಗಮಂದಿರ
Share This Article
Facebook Email Print
Previous Article ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
Next Article ಜಿಲ್ಲಾ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಶಾಖೆಗೆ ಸಚಿವ ಟಿ.ರಘುಮೂರ್ತಿ ಚಾಲನೆ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಶಾಖೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
Leave a Comment

Leave a Reply Cancel reply

Your email address will not be published. Required fields are marked *

ಹಿಂದೂ ಮಹಾಗಣಪತಿ ಶೊಭಾಯಾತ್ರೆ
ಹಿಂದೂ ಮಹಾಗಣಪತಿ ಅದ್ದೂರಿ ಶೊಭಾಯಾತ್ರೆ | ಹೈಕೋರ್ಟ್ ನ್ಯಾಯವಾದಿ ಅರುಣ್ ಶ್ಯಾಮ್ ಚಾಲನೆ
ಮುಖ್ಯ ಸುದ್ದಿ
ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
ಹಿರಿಯೂರು
ನಾಳೆ ಚಿತ್ರದುರ್ಗಕ್ಕೆ ಕೇಂದ್ರ ಬರ ಅಧ್ಯಯನ ತಂಡ | ಬೆಳೆ ಹಾನಿ ಪರಿಶೀಲನೆ
ಮುಖ್ಯ ಸುದ್ದಿ
turmeric to your hair
ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up