CHITRADURGA NEWS | 15 MAY 2025
ಚಿತ್ರದುರ್ಗ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮೇ.17 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
Also Read: ಚಿತ್ರದುರ್ಗಕ್ಕೆ ಮತ್ತೊಂದು ರೈಲು ಮಾರ್ಗ | ಮಲೆನಾಡಿನಿಂದ ಅರೆ ಮಲೆನಾಡು ಸಂಪರ್ಕ | 1825 ಕೋಟಿ ವೆಚ್ಚ
ಸಚಿವ ವಿ. ಸೋಮಣ್ಣ ಅವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತುಮಕೂರು-ಚಿತ್ರದುರ್ಗ-ದಾವಣಗೆರೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯ ಪ್ರಗತಿ ಕುರಿತಂತೆ ಪರಿಶೀಲನಾ ಸಭೆ ನಡೆಸುವರು.
ನಂತರ ರೈಲ್ವೆ ಯೋಜನೆ ಕುರಿತಂತೆ ಸ್ಥಳ ಪರಿವೀಕ್ಷಣೆ ನಡೆಸುವರು. ಮಧ್ಯಾಹ್ನ 02 ಗಂಟೆಗೆ ಸಚಿವರು ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸುವರು ಎಂದು ರೈಲ್ವೆ ಖಾತೆ ರಾಜ್ಯ ಸಚಿವರ ಕಾರ್ಯಾಲಯದ ಸೆಕ್ಷನ್ ಅಧಿಕಾರಿಗಳು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
