CHITRADURGA NEWS | 14 OCTOBER 2026
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೋಕ್ಸೋ) ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗದಲ್ಲೇ ಅತಿ ಹೆಚ್ಚು ಮತದಾರರು | ಡಿಸಿ ರಮ್ಯಾ
ಹೊಳಲ್ಕೆರೆ ತಾಲೂಕಿನ ಮಂಜುನಾಥ.ಎಸ್ (33) ಶಿಕ್ಷೆಗೆ ಗುರಿಯಾದ ಆರೋಪಿ.
2024ರ ಜನವರಿ 15ರಂದು ಮಧ್ಯಾಹ್ನ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬಲವಂತವಾಗಿ ಅಪಹರಿಸಿಕೊಂಡು ಹೋಗಿದ್ದ ಆರೋಪಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದನು ಎಂದು ಪ್ರಕರಣದ ವಿವರ ತಿಳಿಸಿದೆ.
ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ. ಚಿಕ್ಕಣ್ಣನವರ್ ಅವರು ತನಿಖೆ ನಡೆಸಿ, ಆರೋಪಿಯ ವಿರುದ್ಧ ಐಪಿಸಿ ಕಲಂ 363, 506, 376 ಹಾಗೂ ಪೋಕ್ಸೋ ಕಾಯ್ದೆಯ ಕಲಂ 4ರ ಅಡಿಯಲ್ಲಿ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇದನ್ನೂ ಓದಿ: ಕೆ.ಎಂ. ಸುರೇಶ್ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ | ಎಂ.ಸಿ.ರಘುಚಂದನ್
ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ಅವರು, 2026ರ ಅಕ್ಟೋಬರ್ 13ರಂದು ತೀರ್ಪು ಪ್ರಕಟಿಸಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.
ನೊಂದ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹೆಚ್.ಆರ್. ಜಗದೀಶ್ ಅವರು ವಾದ ಮಂಡಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

