CHITRADURGA NEWS | 23 AUGUST 2026
ಚಿತ್ರದುರ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯವರಿಗೆ ಅಂದರೆ ಮುಸಲ್ಮಾನರು, ಜೈನ್ಸ್, ಆಂಗ್ಲೋ ಇಂಡಿಯನ್ಸ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬದ ದಿನ ಸಿಕ್ಕ ಚಿನ್ನಾಭರಣ ಮರಳಿಸಿದ ಶಿಕ್ಷಕ
ಆಸಕ್ತರು ವೆಬ್ಸೈಟ್ www.kmdconline.karnataka.gov.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು ಹಾಗೂ 18 ರಿಂದ 55 ವರ್ಷ ವಯೋಮಿತಿಯೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಯೋಜನೆಗೆ ತಕ್ಕಂತೆ ರೂ.6 ಲಕ್ಷದೊಳಗಿರಬೇಕು (ಶ್ರಮಶಕ್ತಿ ಯೋಜನೆಗೆ ರೂ.3.50 ಲಕ್ಷ, ಸಾಂತ್ವನ ಯೋಜನೆಗೆ ರೂ.8.00 ಲಕ್ಷ, ವೃತ್ತಿ ಪ್ರೊತ್ಸಾಹ ಯೋಜನೆಗೆ ನಗರ ಪ್ರದೇಶದಲ್ಲಿ ರೂ.1,03,000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.81,000) ಇರಬೇಕು.
ಅರ್ಜಿದಾರರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸಸ್ಥಳ ದೃಢೀಕರಣ ಪತ್ರ, ಪಡಿತರ ಚೀಟಿ ಹಾಗೂ ಐಎಸ್ಎಸ್ಸಿ ಕೋಡ್ ಹೊಂದಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಅರ್ಜಿದಾರರ ಕುಟುಂಬದ ಸದಸ್ಯರು ಸರ್ಕಾರಿ ನೌಕರರಾಗಿರಬಾರದು ಹಾಗೂ ಈ ಹಿಂದೆ ನಿಗಮದಿಂದ ಸಾಲ ಸೌಲಭ್ಯ ಪಡೆದಿರಬಾರದು.
ಇದನ್ನೂ ಓದಿ: PMFME ಯೋಜನೆಯಡಿ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.50ರಷ್ಟು ಸಹಾಯಕ್ಕೆ ಅರ್ಜಿ
ಅರ್ಜಿದಾರರು ಆನ್ಲೈನ್ ಅರ್ಜಿಯ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

