ಹೊಳಲ್ಕೆರೆ
M.Chandrappa: ಆಸ್ಪತ್ರೆ, ವಸತಿಗೃಹ ನಿರ್ಮಾಣಕ್ಕೆ ಶಾಸಕ ಚಂದ್ರಪ್ಪ ಅಡಿಗಲ್ಲು
CHITRADURGA NEWS | 04 DECEMBER 2O24
ಹೊಳಲ್ಕೆರೆ: ತಾಲ್ಲೂಕಿನ ಚಿಕ್ಕಜಾಜೂರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ವೈದ್ಯರ, ದಾದಿಯರ ಮತ್ತು ಡಿ.ಗ್ರೂಪ್ ನೌಕರರ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಎಂ.ಚಂದ್ರಪ್ಪ(M.Chandrappa) ಭೂಮಿ ಪೂಜೆ ನೆರವೇರಿಸಿದರು.
ಕ್ಲಿಕ್ ಮಾಡಿ ಓದಿ: ಮನೆಬಾಗಿಲಿಗೆ ಸಂಚಾರಿ ಆರೋಗ್ಯ ಘಟಕ | ಉಚಿತ ಚಿಕಿತ್ಸೆ ಪಡೆಯಿರಿ
ನಂತರ ಮಾತನಾಡಿದ ಶಾಸಕರು, ಹಳ್ಳಿಗಾಡಿನ ಬಡ ರೋಗಿಗಳಿಗೂ ಉತ್ತಮವಾದ ಚಿಕಿತ್ಸೆ ಸಿಗಲಿ ಎನ್ನುವ ಉದ್ದೇಶದಿಂದ ಗುಣಮಟ್ಟದ ಆಸ್ಪತ್ರೆ, ಸಿಬ್ಬಂದಿಗೆ ವಸತಿ ಗೃಹಗಳನ್ನು ಕಟ್ಟಿಸಲಾಗುತ್ತಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಎಲ್ಲರೂ ಬೆಂಗಳೂರು, ದಾವಣಗೆರೆ, ಮಣಿಪಾಲ್‍ಗೆ ಹೋಗಿ ಚಿಕಿತ್ಸೆ ಪಡೆಯಲು ಆಗುವುದಿಲ್ಲ. ವೈದ್ಯರು ದಿನದ 24 ಗಂಟೆಯೂ ರೋಗಿಗಳಿಗೆ ಕೈಗೆ ಸಿಗುವಂತಾಗಬೇಕು. ಅದಕ್ಕಾಗಿಯೇ ವಸತಿ ಗೃಹಗಳನ್ನು ನಿರ್ಮಿಸುತ್ತಿದ್ದು, ಇನ್ನು ಆರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿರುವ ಎಲ್ಲಾ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲಾಗುವುದೆಂದು ಭರವಸೆ ನೀಡಿದರು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಶೇಂಗಾ, ತೊಗರಿಬೆಳೆ ರೇಟ್ ಎಷ್ಟಿದೆ?
ಕ್ಷೇತ್ರದ್ಯಂತ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತರಲು 367 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗುಂಜಿಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ದಾಸಪ್ಪ, ಉಪಾಧ್ಯಕ್ಷ ನವೀನ್‍ಕುಮಾರ್, ಮಾಜಿ ಅಧ್ಯಕ್ಷ ಡಿ.ಸಿ.ಮೋಹನ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ
ಪಿ.ಎಸ್.ಮೂರ್ತಿ, ಗಂಗಣ್ಣ, ಆನಂದಪ್ಪ, ಜಗದೀಶ್, ಗುರುಸ್ವಾಮಿ, ಗೋವಿಂದಪ್ಪ, ಓಂಕಾರಪ್ಪ, ಖಲೀಲ್, ರುದ್ರಣ್ಣ, ಡಾ.ಪ್ರದೀಪ್, ಆರೋಗ್ಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.