
CHITRADURGA NEWS | 10 AUGUST 2025
ಹೊಳಲ್ಕೆರೆ: ತಾಲ್ಲೂಕಿನ ದುಮ್ಮಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಾರ್ಯಾಲಯವನ್ನು ಶಾಸಕ ಎಂ.ಚಂದ್ರಪ್ಪ ಉದ್ಘಾಟಿಸಿದರು.
ಇದನ್ನೂ ಓದಿ: ಹೊಳಲ್ಕೆರೆ | ಜಂಗಮೇಶ್ವರಸ್ವಾಮಿಯ ಪುನರ್ ನಿರ್ಮಾಣ ಕಟ್ಟಡ ಲೋಕಾರ್ಪಣೆ
ನಂತರ ಮಾತನಾಡಿದ ಶಾಸಕರು, ಇನ್ನು ಮೂರು ತಿಂಗಳೊಳಗೆ ತಾಲ್ಲೂಕಿನ ಎಲ್ಲಾ 37 ಕೆರೆಗಳಲ್ಲಿ ನೀರು ತುಂಬಲಿದೆ. 120 ಮೀಟರ್ ಚಾನಲ್ ಕಾಮಗಾರಿ ಮುಗಿದರೆ ನೀರು ಹರಿಯುತ್ತದೆ. ಆಗ ರೈತರು ನೆಮ್ಮದಿಯಿಂದಿರಬಹುದೆಂದು ಹೇಳಿದರು.
ಯಾವ ಊರಿಗೆ ಏನು ಮಾಡಿದರೆ ಒಳ್ಳೆಯದು ಎನ್ನುವ ಆಲೋಚನೆಯಿಟ್ಟುಕೊಂಡು ದಿನನಿತ್ಯವೂ ಒಂದಲ್ಲ ಒಂದು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದೇನೆಂದರು.
ಇದನ್ನೂ ಓದಿ: ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವ | ಗಣ್ಯರು, ಮಠಾಧೀಶರು ಭಾಗೀ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ವಿಶ್ವನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ಹೆಚ್.ಸವಿತಾ ಅನಿಲ್‍ಕುಮಾರ್, ಉಪಾಧ್ಯಕ್ಷ ರಾಜಪ್ಪ, ಸದಸ್ಯರುಗಳು, ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
