CHITRADURGA NEWS | 30 JULY 2025
ಚಿತ್ರದುರ್ಗ: ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬುಧವಾರ ಲೋಕಾರ್ಪಣೆಗೊಳಿಸಿದರು.
ಇದನ್ನೂ ಓದಿ: ರೋಟರಿ ಟ್ರಸ್ಟ್ನಿಂದ ಯುವಜನರಿಗಾಗಿ ಕೆರಿಯರ್ ಕನೆಕ್ಟ್ ತರಬೇತಿ | ಆಗಸ್ಟ್ 5 ರಿಂದ ಪ್ರಾರಂಭ
ಕೋಟೆ ಮುಂಭಾಗದ ಮಯೂರ ಹೋಟೆಲ್ ಪಕ್ಕದಲ್ಲಿ 2018-19ನೇ ಸಾಲಿನ ಬಂಡವಾಳ ವೆಚ್ಚ ಯೋಜನೆಯಡಿ ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಮಹಿಳಾ ಮತ್ತು ಪುರುಷ ಸ್ನಾನಗೃಹ ಹಾಗೂ ಶೌಚಾಲಯಗಳನ್ನು ನಿರ್ಮಿಸಲಾಗಿದೆ.
ಈ ವೇಳೆ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಪ್ರವಾಸೋದ್ಯಮ ಇಲಾಖೆಯಿಂದ ಕಾಮಗಾರಿಗಳು ಪೂರ್ಣಗೊಂಡು ಬಹಳ ದಿನಗಳು ಆಗಿದ್ದವು. ಕೆಲ ದಿನಗಳ ಹಿಂದೆ ಇಲ್ಲಿ ವೀಕ್ಷಣೆಗೆ ಆಗಮಿಸಿದ ವೇಳೆ, ಕಟ್ಟಡಗಳು ಪೂರ್ಣಗೊಂಡಿದ್ದು ಕಂಡು ಬಂದಿತು.
ಶೀಘ್ರವೇ ಉದ್ಘಾಟನೆ ನೆರವೇರಿಸಿ ಬರುವ ಪ್ರವಾಸಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೆ, ಅದರಂತೆ ಇಂದು ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ಲೋಕಾರ್ಪಣೆಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
ಈ ಎಲ್ಲಾ ಸೌಲಭ್ಯಗಳು ಒಂದೇ ಆವರಣದ ಒಳಗಡೆ ಇದ್ದು, ರಕ್ಷಣೆಗಾಗಿ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗಿದೆ. ಐತಿಹಾಸಿಕ ಕೋಟೆ ವೀಕ್ಷಣೆಗೆ ಸಂಜೆಯವರೆಗೆ ಮಾತ್ರ ಅವಕಾಶವಿದ್ದು ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಪೌರಾಯುಕ್ತೆ ಎಂ.ರೇಣುಕಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಡಾ.ನಾಗವೇಣಿ, ಕೆಆರ್ಐಡಿಎಲ್ ಕಾರ್ಯಪಾಲಕ ಅಭಿಯಂತರ ಟಿ.ಎನ್.ವಿನಾಯಕ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

