CHITRADURGA NEWS | 29 APRIL 2026
ಚಿತ್ರದುರ್ಗ: ತಾಲ್ಲೂಕಿನ ಮಠದ ಕುರುಬರಹಟ್ಟಿ ಕೆರೆ, ಕಾಟಿಹಳ್ಳಿ ಕೆರೆ, ಸಿದ್ದಾಪುರ ಕೆರೆ, ಮಾನಂಗಿ ಕೆರೆ, ಹುಲ್ಲೂರು ಕೆರೆ, ತಿಮ್ಮಣ್ಣನಾಯಕನ ಕೆರೆ, ನಂದೀಪುರ ಕೆರೆ ಮತ್ತು ಅನ್ನೇಹಾಳು ಕೆರೆಗಳನ್ನ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಸೇರ್ಪಡೆ ಮಾಡಿ, ಕೆರೆಗಳನ್ನ ತುಂಬಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮನವಿ ಮಾಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 29 ಏಪ್ರಿಲ್ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
ಬೆಂಗಳೂರಿನ ಕೃಷ್ಣ ನಿವಾಸದಲ್ಲಿ ಮುಖ್ಯ ಮಂತ್ರಿಗಳನ್ನ ಬುಧವಾರ ಭೇಟಿ ಮಾಡಿ, ಕೆರೆಗಳನ್ನ ತುಂಬಿಸುವ ಯೋಜನೆ ಬಗ್ಗೆ ಚರ್ಚಿಸಿದ್ದಾರೆ. ಭದ್ರ ಮೇಲ್ದಂಡೆ ಯೋಜನೆಯಲ್ಲಿರು ಚಿತ್ರದುರ್ಗ ತಾಲ್ಲೂಕಿನ ಒಟ್ಟು 28966 ಹೆಚ್ಚುವರಿ ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಮುಖಾಂತರ ನೀರಾವರಿ ಸೌಲಭ್ಯ ಕಲ್ಪಿಸಿ 09 ಕೆರೆಗಳನ್ನು ಮಾತ್ರ ತುಂಬಿಸಲು ಡಿ.ಪಿ.ಆರ್ ನಲ್ಲಿ ಯೋಜಿಸಲಾಗಿರುತ್ತದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ಬರುವ 03 ಕೆರೆಗಳಾದ ಕಾತ್ರಾಳು ಕೆರೆ, ಮುದ್ದಾಪುರ ಕೆರೆ ಮತ್ತು ಯಳಗೋಡು ಕೆರೆಗಳಿಗೆ ಒಟ್ಟು 0.147 ಟಿ.ಎಂ.ಸಿ ನೀರನ್ನು ತುಂಬಿಸಲು ಜಗಳೂರು ಶಾಖಾ ಕಾಲುವೆ-2 (ಚಿತ್ರದುರ್ಗ ಬ್ಲಾಕ್) ಕಾಮಗಾರಿಯಲ್ಲಿ ಯೋಚಿಸಲಾಗಿರುತ್ತದೆ.
ಆದರೆ ಈ ಮೂರು ಕರೆಗಳು ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಕೈಗೊಳ್ಳಲಾಗಿರುವ ಭರಮಸಾಗರ ಏತ ನೀರಾವರಿ ಯೋಜನೆಯಲ್ಲಿ ಸೇರ್ಪಡೆಗೊಂಡಿದ್ದು, ಕೆರೆಗಳಿಗೆ ಈಗಾಗಲೇ ಪೈಪ್ ಅಳವಡಿಕೆ ಕಾಮಗಾರಿಯೂ ಕೂಡ ಪೂರ್ಣಗೊಂಡಿರುತ್ತದೆ. ಪ್ರಸ್ತುತ ಈ ಮೂರು ಕೆರೆಗಳನ್ನು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಕೈಗೆತ್ತಿಕೊಳ್ಳುವುದರಿಂದ ಕೈಬಿಡಲು ಈಗಾಗಲೇ ಅನುಮೋದನೆ ದೊರೆತಿರುತ್ತದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಠದ ಕುರುಬರಹಟ್ಟಿ ಕೆರೆ, ಕಾಟಿಹಳ್ಳಿ ಕೆರೆ, ಸಿದ್ದಾಪುರ ಕೆರೆ, ಮಾನಂಗಿ ಕೆರೆ, ಹುಲ್ಲೂರು ಕೆರೆ, ತಿಮ್ಮಣ್ಣನಾಯಕನ ಕೆರೆ, ನಂದೀಪುರ ಕೆರೆ ಮತ್ತು ಅನ್ನೇಹಾಳು ಕೆರೆ ಒಟ್ಟು ಎಂಟು ಕೆರೆಗಳು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಸೇರ್ಪಡೆಯಾಗದೇ ಇರುವುದರಿಂದ ಈ ಭಾಗದ ರೈತರುಗಳು ಹಾಗೂ ಗ್ರಾಮಸ್ಥರು ಮೂಲಭೂತ ಸೌಲಭ್ಯದಿಂದ ವಂಚಿತರಾಗಿರುತ್ತಾರೆ.
ಈ ಭಾಗದ ಗ್ರಾಮಗಳು. ಬರಗಾಲ ಪೀಡಿತ ಪ್ರದೇಶವಾಗಿದ್ದು, ಈ ಎಂಟು ಕೆರೆಗಳನ್ನು ತುಂಬಿಸುವುದರಿಂದ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಅಂರ್ತಜಲ ಮಟ್ಟ ಹೆಚ್ಚಾಗುವುದಲ್ಲದೇ ಜನ ಜಾನುವಾರುಗಳಿಗೆ ಕೂಡ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ರವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

