CHITRADURGA NEWS | 17 MAY 2026
ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗೆ ಬರುವಂತವರೆಲ್ಲರೂ ಸಹ ಬಡವರಾಗಿರುತ್ತಾರೆ ಅವರಿಗೆ ಸರ್ಕಾರಿ ದೊರೆಯುವಂತಹ ಉಚಿತ ಆರೋಗ್ಯ ಸೇವೆ ಒದಗಿಸುವುದು ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯವಾಗಿದೆ ಎಂದು ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ತಿಳಿಸಿದರು.
ಇದನ್ನೂ ಓದಿ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಅಹ್ವಾನ
ನಗರದ ಜಿಲ್ಲಾ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿ ಆಸ್ಪತ್ರೆಯ ಒಳ ರೋಗಿಗಳ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ, ಆಸ್ಪತ್ರೆಯ ವ್ಯವಸ್ಥೆ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳಿಗೆ ಸೂಚನೆಗಳನ್ನು ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಜಿಲ್ಲಾಸ್ಪತ್ರೆಗೆ ವಿವಿಧ ತಾಲೂಕುಗಳಿಂದ ಸಾಕಷ್ಟು ರೋಗಿಗಳು ಉತ್ತಮ ಚಿಕಿತ್ಸೆ ಪಡೆಯುವುದಕ್ಕಾಗಿ ಬರುತ್ತಿದ್ದಾರೆ ಆದರೆ ಅವರುಗಳಿಗೆ ಸರಿಯಾದ ಚಿಕಿತ್ಸೆ ನೀಡುವುದು ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ವೈದ್ಯಾಧಿಕಾರಿಗಳ ಆದ್ಯ ಕರ್ತವ್ಯವಾಗಿದೆ, ಚಿಕಿತ್ಸೆ ನೀಡುವುದರಲ್ಲಿ ಯಾವುದಾದರೂ ಲೋಪದೋಷಗಳು ಕಂಡು ಬಂದಲ್ಲಿ ಅವರ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಸ್ಪತ್ರೆಯ ಔಷಧಿ ಕೇಂದ್ರ ಐಸಿಯು ಹಾಗೂ ಡೈಲಿಸಿಸ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ರೋಗಿಗಳ ಆರೋಗ್ಯವನ್ನು ವಿಚಾರಿಸಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಅಷ್ಟೇ ಅಲ್ಲದೆ ಹೊರಗಿನ ಬಂದಂತಹ ರೋಗಿಗಳಿಗೆ ಉತ್ತಮ ಚಿಕಿತ್ಸೆ ಕೊಡಬೇಕು ರೋಗಿಗಳನ್ನ ಬೇರೆ ಕಡೆಗೆ ಸ್ಥಳಾಂತರ ಸರ್ಕಾರಿ ಆಸ್ಪತ್ರೆಯಲ್ಲಿ ಇರುವಂತಹ ಉಚಿತ ಸೇವೆಗಳನ್ನ ರೋಗಿಗಳಿಗೆ ನೀಡಬೇಕೆಂದು ತಿಳಿಸಿದರು.
ಇದನ್ನೂ ಓದಿ: ಮುರುಘಾ ಮಠದಲ್ಲಿ ಶಿವಶರಣರಾದ ತುರುಗಾಹಿ ರಾಮಣ್ಣ, ಕುರುಬ(ವೀರ)ಗೊಲ್ಲಾಳೇಶ್ವರ ಜಯಂತಿ ಆಚರಣೆ
ಜಿಲ್ಲಾಸ್ಪತ್ರೆ ಹಿಂಭಾಗದಲ್ಲಿ ಮೆಡಿಕಲ್ ಕಾಲೇಜು ಕಾಮಗಾರಿಯನ್ನು ವೈದ್ಯಾಧಿಕಾರಿಗಳ ಜೊತೆಗೆ ವೀಕ್ಷಿಸಿ, ಗುಣಮಟ್ಟದ ರೀತಿಯಲ್ಲಿ ಆಸ್ಪತ್ರೆಯ ಕಟ್ಟಡವನ್ನು ನಿರ್ಮಾಣ ಮಾಡಬೇಕು ಎನ್ನುವುದು ಚಿತ್ರದುರ್ಗದ ಅದೆಷ್ಟೋ ಹೋರಾಟಗಾರರ ಬಹುದಿನಗಳ ಕನಸು. ಅದರಂತೆ ಕಟ್ಟಡದ ಕಾಮಗಾರಿಯ ಗುಣಮಟ್ಟ ಕಾಪಾಡುವುದು ಕಟ್ಟಡದ ಗುತ್ತಿಗೆದಾರರು ಹಾಗೂ ವೈದ್ಯಾಧಿಕಾರಿಗಳ ಮೇಲಿದೆ.
ಸಾಧ್ಯವಾದಷ್ಟು ಕಡಿಮೆ ಅವಧಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಮುಗಿಸಿ, ವಿದ್ಯಾರ್ಥಿಗಳ ಹಾಗೂ ರೋಗಿಗಳ ಅನುಕೂಲಕ್ಕೆ ಮಾಡಿಕೊಡಬೇಕಿದೆ ಎಂದು ತಿಳಿಸಿದರು.
ಸರ್ಕಾರಿ ಮೆಡಿಕಲ್ ಕಾಲೇಜಿನ ಯುವಕ-ಯುವತಿಯರ ಹಾಸ್ಟೆಲ್ ಗಳಿಗೆ ಭೇಟಿ ನೀಡಿ, ಹೊರಗಿನಿಂದ ಬಂದಂತಹ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದೆ ಉತ್ತಮವಾದ ಕಟ್ಟಡದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಸಂಬಂಧಪಟ್ಟಂತಹ ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಸಹಕಾರ ನೀಡಬೇಕೆಂದು ತಿಳಿಸಿದರು.
ಇದನ್ನೂ ಓದಿ: HPV ಲಸಿಕೆ ಅಭಿಯಾನ ಯಶಸ್ಸಿಗೊಳಿಸಲು ಶಿಕ್ಷಕರು ಮತ್ತು ಪೋಷಕರು ಕೈಜೋಡಿಸಿ
ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಡಿ.ಎಸ್ ರವೀಂದ್ರ, ಮೆಡಿಕಲ್ ಕಾಲೇಜ್ ಡೀನ್ ಯುವರಾಜ್, ಡಾ.ಮೇಘ, ಇಂಜಿನಿಯರ್ ಗಣೇಶ್, ಉಮೇಶ್, ಮೆಡಿಕಲ್ ಕಾಲೇಜ್ ಕಟ್ಟಡದ ಮ್ಯಾನೇಜರ್ ಸುದೀರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

