
CHITRADURGA NEWS | 08 SEPTEMBER 2025
ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ಹಾಗೂ ಹಣ ವರ್ಗಾವಣೆ ವಿಚಾರವಾಗಿ ಜಾರಿ ನಿರ್ದೇಶನಾಲಯದ(ED) ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮನೆ ಮೇಲೆ ED ಅಧಿಕಾರಿಗಳ ದಾಳಿ
ಇಡಿ ಅವಧಿ ಇಂದು (ಸೋಮವಾರ) ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಸೆಪ್ಟಂಬರ್ 22 ರವರೆಗೆ ಅಂದರೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಬೆಟ್ಟಿಂಗ್ ಕಂಪನಿಗಳಿಗೆ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಆಗಸ್ಟ್ 22 ರಂದು ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ವೀರೇಂದ್ರ(ಪಪ್ಪಿ) ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಇ.ಡಿ.ವಶಕ್ಕೆ
ಮನೆ ಮೇಲಿನ ದಾಳಿ ವೇಳೆ 12 ಕೋಟಿ ರೂ. ನಗದು, 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಸುಮಾರು 10 KG ಬೆಳ್ಳಿ ಆಭರಣ, ಶಾಸಕರ ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.
ಆನಂತರ ಚಳ್ಳಕೆರೆಯ ವಿವಿಧ ಬ್ಯಾಂಕುಗಳಲ್ಲಿದ್ದ ಲಾಕರ್‌ಗಳನ್ನು ತಪಾಸಣೆ ನಡೆಸಿದ ಇಡಿ ಅಧಿಕಾರಿಗಳು ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
