
CHITRADURGA NEWS | 09 AUGUST 2025
ಚಿತ್ರದುರ್ಗ: ತಾಲೂಕಿನ ಕೊಡಗವಳ್ಳಿ ಗ್ರಾಮದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಮ್ಮೂರು-ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಕೆರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಬಾಗಿನ ಅರ್ಪಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 09 | ಹತ್ತಿ ರೇಟ್ ಎಷ್ಟಿದೆ?
ನಂತರ ಮಾತನಾಡಿದ ಶಾಸಕರು, ಸರ್ಕಾರ ಮಾಡುವಂತಹ ಕೆಲಸಗಳನ್ನು ಸರ್ಕಾರದ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಧರ್ಮಸ್ಥಳ ಸಂಸ್ಥೆಯು ಮಾಡುತ್ತಿರುವುದು ಅತ್ಯಂತ ಸಂತಸದ ವಿಚಾರ ಎಂದು ತಿಳಿಸಿದರು.
ಧರ್ಮಸ್ಥಳ ಸಂಸ್ಥೆ ವತಿಯಿಂದ 872 ಕೆರೆಗಳಿಗೆ ಪುನರ್ ಜೀವನವನ್ನು ಕಲ್ಪಿಸಿದ್ದಾರೆ, ಇಂತಹ ಮಹತ್ವದ ಕಾರ್ಯಕ್ಕೆ ಧರ್ಮಸ್ಥಳ ಸಂಸ್ಥೆಗೆ ಅಭಿನಂದನೆ.
ಧರ್ಮಸ್ಥಳ ಸಂಸ್ಥೆಯು ಮಹಿಳೆಯರನ್ನ ಆರ್ಥಿಕವಾಗಿ ಸದೃಢರನ್ನಾಗಿಸಿ, ಸ್ವಾವಲಂಬಿ ಮಾಡಲು ವಿವಿಧ ಯೋಜನೆಗಳ ಕಾರ್ಯಕ್ರಮಗಳನ್ನು ರೂಪಿಸಿ ಜನರಿಗೆ ಅನುಕೂಲ ಮಾಡಿಕೊಟ್ಟಿದೆ.
ಇದನ್ನೂ ಓದಿ: ರಾಶಿ ಅಡಿಕೆ ರೇಟ್ ಭರ್ಜರಿ ಏರಿಕೆ | ಬೆಳೆಗಾರ ಖುಷ್
ಕೆರೆ ಬಳಕೆಯ ಸಮಿತಿಯವರು ಕೆರೆಗಳ ಅಂದವನ್ನು ಕಾಪಾಡಿಕೊಳ್ಳಬೇಕು ಹಾಗೂ ಕೆರೆಗಳಿಗೆ ಘನ ತ್ಯಾಜ್ಯ ವಿಲೇವಾರಿ ಮಾಡದಂತೆ ನೋಡಿಕೊಳ್ಳಬೇಕು ಸಮಿತಿ ಅವರಿಗೆ ತಿಳಿಸಿದರು.
ಕೊಡಗವಳ್ಳಿ ಗ್ರಾಮದ ಮುಖ್ಯ ರಸ್ತೆ ಗೆ ಡಕ್ ಮತ್ತು ಸಿಸಿ ರಸ್ತೆ ನಿರ್ಮಾಣ ಮಾಡಲು 40 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ, ಪಂಚಾಯಿತಿ ವ್ಯಾಪ್ತಿಗೆ 130 ವಸತಿ ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಧರ್ಮಸ್ಥಳ ಸಂಸ್ಥೆ ಯೋಜನಾ ನಿರ್ದೇಶಕಿ ಕಮಲಾಕ್ಷ ಮಾತನಾಡಿದರು.
ಇದನ್ನೂ ಓದಿ: KSRTC ಬಸ್ – ಲಾರಿ ನಡುವೆ ಡಿಕ್ಕಿ | 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಓ ರವಿಕುಮಾರ್, ಕಂದಾಯ ನಿರೀಕ್ಷಕರು ಮೋಹನ್ ಕುಮಾರ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವನಜಾಕ್ಷಿ, ಕೆಡಿಪಿ ಸದಸ್ಯರಾದ ನಾಗರಾಜ್,
ಹಿರೇಗುಂಟನೂರು ಗ್ರಾಮ್ ಪಂಚಾಯ್ತಿ ಅಧ್ಯಕ್ಷ ಮೋಹನ್ ಮೂರ್ತಿ, ಧರ್ಮಸ್ಥಳ ಯೋಜನಾಧಿಕಾರಿ ರವಿಚಂದ್ರ, ಮೌನೇಶ್, ಹಾಲೇಶ್, ಸಾಕಮ್ಮ ಗ್ರಾಮಸ್ಥರಾದ ಚಂದ್ರಶೇಖರ್ ನಿಂಗಪ್ಪ ಶರಣಪ್ಪ ಮಹಾಲಕ್ಷ್ಮಿ ನಿಂಗರಾಜ್ ನಾಯಕ್ ಮಲ್ಲೇಶ್ ನಾಗರಾಜ್, ಮಹಾಲಿಂಗಮ್ಮ, ನೇತ್ರಾವತಿ, ರೇಖಾ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
