
CHITRADURGA NEWS | 29 JULY 2025
ಚಿತ್ರದುರ್ಗ: ಮಳೆ ಹಾನಿಯಿಂದ ಮನೆ ಕಳೆದುಕೊಂಡ ಕುಟುಂಬಸ್ಥರನ್ನು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಭೇಟಿ ಮಾಡಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ, ಸರ್ಕಾರದಿಂದ ಮನೆಗಳನ್ನು ಮಂಜೂರು ಮಾಡಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಕ್ಷಯ ರೋಗಕ್ಕೆ ಭಯ ಬೇಡ, ಚಿಕಿತ್ಸೆ ಲಭ್ಯವಿದೆ | ಡಾ.ವಿನಯ್ ಸಜ್ಜನ್

ತಾಲೂಕಿನ ಓಬಣ್ಣನಹಳ್ಳಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಮಳೆ ಹಾನಿಯಿಂದಾಗಿ ಮನೆಯನ್ನು ಕಳೆದುಕೊಂಡಂತಹ ತಿಮ್ಮಯ್ಯ, ತಿಮ್ಮಕ್ಕ ಎಂಬುವರ ಮನೆಯು ಕುಸಿದಿದ್ದು ಅದೃಷ್ಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಮನೆಯನ್ನ ಕಳೆದುಕೊಂಡು ಕಂಗಲಾಗಿದ್ದ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ದಾವಿಸಿ ಆರ್ಥಿಕ ಸಹಾಯ ಮಾಡಿದ್ದಾರೆ.
ಕ್ಷೇತ್ರದ ಅಭಿವೃದ್ಧಿಗೋಸ್ಕರ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಭೇಟಿ ಮಾಡಿ ಅನುದಾನಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡುವೆ, ಈಗಾಗಲೇ ಶಾಸಕರ ಅನುದಾನದ ಅಡಿಯಲ್ಲಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ, ಚೆಕ್ ಡ್ಯಾಂಗಳು, ಅಂಗನವಾಡಿ ಕೇಂದ್ರಗಳು ಇತರೆ ಅಭಿವೃದ್ಧಿ ಕಾರ್ಯಗಳ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ, ಮುಂದಿನ ದಿನಗಳಲ್ಲಿ ಉಳಿದಂತಹ ಕ್ಷೇತ್ರಗಳ ಹಳ್ಳಿಗಳಲ್ಲಿಯೂ ಸಹ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಗ್ರಾಮದಲ್ಲಿ ಸಿಸಿ ರಸ್ತೆಗಳು ಬಾಕ್ಸ್ ಚರಂಡಿ ಇಲ್ಲದೆ ಇರುವುದರಿಂದ ಸಾಕಷ್ಟು ಸಮಸ್ಯೆಗಳನ್ನ ಎದುರಿಸುತ್ತಿದ್ದೇವೆ ಎಂದು ಶಾಸಕರಿಗೆ ಗ್ರಾಮಸ್ಥರು ಮನವಿ ಮಾಡಿದರು ಮನವಿಗೆ ಸ್ಪಂದಿಸಿದ ಶಾಸಕರು ಗ್ರಾಮಕ್ಕೆ ಸಿಸಿ ರಸ್ತೆ ಹಾಗೂ ಬಾಕ್ಸ್ ಚರಂಡಿಗಳನ್ನ ನಿರ್ಮಾಣ ಮಾಡಿಕೊಡುವುದಕ್ಕೆ ಅತಿ ಶೀಘ್ರದಲ್ಲೇ ಭೂಮಿ ಪೂಜೆಯನ್ನು ಮಾಡಲಾಗುವುದು ಎಂದು ಗ್ರಾಮಸ್ಥರಿಗೆ ಸ್ಥಳದಲ್ಲೇ ಭರವಸೆ ನೀಡಿದರು.
ಇದನ್ನೂ ಓದಿ: ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಜಿಪಂ ನೂತನ ಸಿಇಓ ಡಾ.ಆಕಾಶ್ | ಜೆಜೆಎಂ ಕಾಮಗಾರಿ ಮುಗಿಸಲು ಸೂಚನೆ
ಗ್ರಾಮದಲ್ಲಿರುವಂತಹ ಈಶ್ವರ ದೇವಾಲಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ 5 ಲಕ್ಷ ಹಣವನ್ನು ಸ್ಥಳದಲ್ಲೇ ದೇವಾಲಯದ ಕಮಿಟಿಯವರಿಗೆ ಚೆಕ್ ವಿತರಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಟಿ ಸಮಿತಿ ಅಧ್ಯಕ್ಷ ಶಿವಣ್ಣ, ಓಬಣ್ಣನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಓಬಳೇಶ್, ಚಿತ್ರದುರ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್, ಗ್ರಾಮಸ್ಥರಾದ ವೆಂಕಟೇಶ್, ಹನುಮಂತಪ್ಪ, ತಿಮ್ಮಯ್ಯ, ರುದ್ರಪ್ಪ, ಚಂದ್ರಪ್ಪ, ರಮೇಶ್, ಈಶ್ವರ್, ಜಯಣ್ಣ, ಹನುಮಂತಪ್ಪ, ತಿಮ್ಮಪ್ಪ ನಾಗರಾಜ್, ಮಂಜುನಾಥ್ ಹಾಗೂ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
