
CHITRADURGA NEWS | 03 MAY 2024
ಚಿತ್ರದುರ್ಗ: ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.
ಇದನ್ನೂ ಓದಿ : ಹೆಚ್ಚುತ್ತಿರುವ ಬಿಸಿಲು | ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯ ಇಲ್ಲಿದೆ ನೋಡಿ

ಶಾಸಕರಾಗಿ ಇದೇ ಪ್ರಥಮ ಬಾರಿಗೆ ಬಿ.ಎಲ್.ವೇಣು ಅವರ ನಿವಾಸಕ್ಕೆ ಆಗಮಿಸಿದ ವೀರೇಂದ್ರ ಪಪ್ಪಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಕೋಟೆ ಅಭಿವೃದ್ಧಿ, ಕೋಟೆಯಲ್ಲಿ ಪ್ರವಾಸಿಗರಿಗೆ ಅನುಕೂಲಕರವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಬಗ್ಗೆ ಬಿ.ಎಲ್.ವೇಣು ಅವರು ಶಾಸಕರಿಗೆ ಸಲಹೆ ನೀಡಿದರು.
ಭದ್ರ ಮೇಲ್ದಂಡೆ ಯೋಜನೆ ಕಾಮಗಾರಿಯ ಬಗ್ಗೆ ಕೂಲಂಕುಷವಾಗಿ ಶಾಸಕರೊಂದಿಗೆ ಚರ್ಚಿಸಿದ ವೇಣು ಅವರು, ಜನತೆಗೆ ಅತೀ ಶೀಘ್ರದಲ್ಲೇ ಈ ಯೋಜನೆ ತಲುಪಬೇಕೆಂದು ತಾಕೀತು ಮಾಡಿದರು.
ಇದನ್ನೂ ಓದಿ : ಮಕ್ಕಳ ಕವಿಗೋಷ್ಠಿಗೆ ಕವನಗಳ ಅಹ್ವಾನ | ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಆಯೋಜನೆ
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಯೋಜನೆ ತ್ವರಿತ ಜಾರಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಟ್ಟಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು.
ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಬಗ್ಗೆಯೂ ಪ್ರಸ್ಥಾಪಿಸಿದ ವೇಣು ಅವರು, ಈ ನಿಟ್ಟಿನಲ್ಲಿ ಕಾರ್ಯ ವಿಳಂಭ ಮಾಡದೇ, ತುರ್ತು ಕೆಲಸಗಳು ಮಾಡುವುದು ಅಗತ್ಯವಿದೆ ಎಂದು ವಿವರಿಸಿದರು.
ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳು ಮಾಡುವುದರೊಂದಿಗೆ ಜನಮನ್ನಣೆ ಗಳಿಸಬೇಕೆಂದು ಬಿ.ಎಲ್.ವೇಣು ಅವರು ಶಾಸಕರಿಗೆ ಸೂಚನೆಗಳನ್ನು ನೀಡಿದರು.
ಇದನ್ನೂ ಓದಿ : ಚಿತ್ರದುರ್ಗ ಜಿಲ್ಲೆಗೆ ಎಲ್ಲೋ ಅಲರ್ಟ್ | ತೀವ್ರ ಬಿಸಿಲು, ಬಿಸಿಗಾಳಿಯ ಎಚ್ಚರಿಕೆ | ಸುರಕ್ಷಿತವಾಗಿರಲು ಇಲ್ಲಿವೆ ಸೂಕ್ತ ಸಲಹೆ
ಕ್ಷೇತ್ರದ ಅಭಿವೃದ್ಧಿ ದೃಷ್ಠಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ. ಜನರ ನಿರೀಕ್ಷೆಗಳನ್ನು ಯಶಸ್ಸುಗೊಳಿಸುತ್ತೇನೆಂದು ಇದೇ ಸಂದರ್ಭದಲ್ಲಿ ಶಾಸಕರು ಭರವಸೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
