ಮುಖ್ಯ ಸುದ್ದಿ
Ambulance: ಶಾಸಕ ಎಂ.ಚಂದ್ರಪ್ಪ ಅನುದಾನದಲ್ಲಿ ಅಂಬ್ಯುಲೆನ್ಸ್ ಕೊಡುಗೆ | ಜಿಲ್ಲಾಸ್ಪತ್ರೆಗೆ ಹಸ್ತಾಂತರ

CHITRADURGA NEWS | 03 DECEMBER 2024
ಚಿತ್ರದುರ್ಗ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಂಗಳವಾರ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರು ಅಂಬ್ಯುಲೆನ್(Ambulance) ಸೇವೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಕ್ಲಿಕ್ ಮಾಡಿ ಓದಿ: ವಕೀಲರ ದಿನಾಚರಣೆ | ಸಾರ್ಥಕ ಸೇವೆ ಸಲ್ಲಿಸಿದ ನ್ಯಾಯವಾದಿಗಳಿಗೆ ಸನ್ಮಾನ

ಹೊಳಲ್ಕೆರೆ ಶಾಸಕರಾದ ಎಂ.ಚಂದ್ರಪ್ಪ ಅವರು ಶಾಸಕರ ನಿಧಿಯಿಂದ ರೂ.30 ಲಕ್ಷ ವೆಚ್ಚದ ಒಂದು ಅಂಬ್ಯುಲೆನ್ಸ್‍ನ್ನು ಜಿಲ್ಲಾಸ್ಪತ್ರೆಗೆ ನೀಡಿದ್ದು, ಅಂಬ್ಯುಲೆನ್ಸ್‍ನ್ನು ವಾಹನವನ್ನು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರಿಗೆ ಶಾಸಕ ಎಂ.ಚಂದ್ರಪ್ಪ ಅವರು ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ 40 ಹಾಸಿಗೆಗಳ ವಾರ್ಡ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕ್ಲಿಕ್ ಮಾಡಿ ಓದಿ: PDO ನೇಮಕಾತಿಗೆ ಪರೀಕ್ಷೆ | ಅಗತ್ಯ ಸಿದ್ಧತೆ ಪೊಲೀಸರ ನಿಯೋಜನೆಗೆ ಸೂಚನೆ
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಸೇರಿದಂತೆ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
