
CHITRADURGA NEWS | 24 AUGUST 2025
ಹೊಳಲ್ಕೆರೆ: ತಾಲ್ಲೂಕಿನ ಬಂಡೆಹಟ್ಟಿ ಗ್ರಾಮದಲ್ಲಿ ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಭಾನುವಾರ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
ಇದನ್ನೂ ಓದಿ: ವಿವಿ ಸಾಗರಕ್ಕೆ ಒಳಹರಿವು ಹೆಚ್ಚಳ | ಇಂದಿನ ಜಲಾಶಯ ಮಟ್ಟ ?

ಈ ವೇಳೆ ಶಾಸಕರು ಮಾತನಾಡಿ, ಚುನಾವಣೆಯಲ್ಲಿ ಮತ ನೀಡಿ ಗೆಲ್ಲಿಸಿದ ನಿಮ್ಮಗಳ ಋಣ ತೀರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಕ್ಷೇತ್ರದ 493 ಹಳ್ಳಿಗಳಲ್ಲಿ ಯಾರಿಂದ ಏನನ್ನು ಹೇಳಿಸಿಕೊಂಡಿಲ್ಲ. ಯಾವ ಊರಿಗೆ ಏನು ಕೆಲಸ ಮಾಡಿದರೆ ಜನರಿಗೆ ಒಳ್ಳೆಯದಾಗುತ್ತದೆನ್ನುವ ಚಿಂತನೆಯಿಟ್ಟುಕೊಂಡು ಅಭಿವೃದ್ದಿಗೆ ಹಗಲಿರುಳು ದುಡಿಯುತ್ತಿದ್ದೇನೆ ಎಂದರು.
ಬಡವರ ಗುಡಿಸಲುಗಳನ್ನು ತೆಗೆಸಿ ಮನೆಗಳನ್ನು ನೀಡುತ್ತೇನೆ. ಕುಡಿಯುವ ನೀರು ಮತ್ತು ರೈತರ ತೋಟಗಳಿಗೆ ತೊಂದರೆಯಾಗಬಾರದೆಂದು ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದ್ದೇನೆ.
ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣ ಕೊಡಿಸಿ ಅದುವೆ ನಿಜವಾದ ಸಂಪತ್ತು. ಸರ್ಕಾರಿ ಶಾಲೆಗೆ ಬರುವ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಉಚಿತವಾಗಿ ಬಸ್‍ಗಳನ್ನು ಬಿಟ್ಟಿದ್ದೇನೆ. ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣವಂತರಾಗುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಹೇಳಿದರು.
ಇದನ್ನೂ ಓದಿ: ಮಕ್ಕಳಲ್ಲಿ ಹಾಲಿನ ಹಲ್ಲುಗಳು ಕಾಣಿಸಿಕೊಳ್ಳಲು ತಡವಾಗಲು ಕಾರಣವೇನು ಗೊತ್ತಾ?
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಆರ್.ಎ.ಅಶೋಕ್, ಸದಸ್ಯ ಪಿ.ಹೆಚ್.ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಿವಣ್ಣ, ಮಂಜಣ್ಣ, ಶಿವಮೂರ್ತಿ, ಓಬಣ್ಣ, ಜಯಪ್ಪ, ಚಂದ್ರಪ್ಪ, ಕಾಟಪ್ಪ, ನಾಗರಾಜ್, ದಾಸಯ್ಯನಹಟ್ಟಿ ರಮೇಶ್ ಹಾಗೂ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
