
CHITRADURGA NEWS | 18 JANUARY 2026
ಹೊಳಲ್ಕೆರೆ: ಸಾರ್ವಜನಿಕರ ಬದುಕು ಹಸನು ಮಾಡಬೇಕೆಂದು ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ 660 ಕೋಟಿ ರೂ.ಗಳನ್ನು ಮಂಜೂರು ಮಾಡಿಸಿಕೊಂಡು ಕೆರೆ ಕಟ್ಟೆಗಳನ್ನು ತುಂಬಿಸಿದ ಪರಿಣಾಮವಾಗಿ ನೀರು ತುಳುಕಾಡುತ್ತಿದೆ. ಎಲ್ಲೆಲ್ಲಿ ಕೆರೆಗಳಿಲ್ಲವೋ ಅಂತಹ ಕಡೆ ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ | ಆನ್‍ಲೈನ್ ಮೂಲಕ ನೊಂದಣಿಗೆ ಅವಕಾಶ

ಲಿಂಗವ್ವನಾಗತಿಹಳ್ಳಿ ಗ್ರಾಮದಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ಹರಿಯುವ ಹಳ್ಳಕ್ಕೆ ನೂತನ ಚೆಕ್‍ಡ್ಯಾಂ ಬ್ರಿಡ್ಜ್‍ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.
ರೈತರು ಅಡಿಕೆ ತೋಟಗಳನ್ನು ಮಾಡಿಕೊಂಡು ಸುಖವಾಗಿರಬೇಕೆಂಬುದು ನನ್ನ ಆಸೆ. ಈ ಭಾಗದಲ್ಲಿ 43 ಕೆರೆಗಳನ್ನು ಕಟ್ಟಿಸಿದ್ದೇನೆ. ಅಜ್ಜಪ್ಪನಹಳ್ಳಿ ಬಳಿ ವಿದ್ಯುತ್ ಪವರ್‍ಸ್ಟೇಷನ್ ಕಟ್ಟಿಸುತ್ತಿದ್ದೇನೆ. ಇದರಿಂದ ರೈತರಿಗೆ ಕರೆಂಟ್ ಅಭಾವವಾಗುವುದಿಲ್ಲವೆಂದು ಹೇಳಿದರು.
ತಾಲ್ಲೂಕಿನಾದ್ಯಂತ ಶಾಲಾ-ಕಾಲೇಜು, ಚೆಕ್‍ಡ್ಯಾಂ, ಸಿ.ಸಿ.ರಸ್ತೆಗಳ ನಿರ್ಮಾಣವಾಗಿದೆ. ಇನ್ನು ಎರಡು ತಿಂಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಿಂದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುತ್ತೇನೆ. ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತರಲಾಗುವುದು.
ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಶೂ, ಸಾಕ್ಸ್‍ಗಳನ್ನು ನೀಡುವುದರ ಜೊತೆಗೆ ಹಳ್ಳಿಗಾಡಿನ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಉಚಿತವಾಗಿ ಬಸ್‍ಗಳನ್ನು ಬಿಟ್ಟಿದ್ದೇನೆ ಎಂದರು.
ಇದನ್ನೂ ಓದಿ: ರೈತರಿಗೆ ವೈಜ್ಞಾನಿಕ ಹೈನುಗಾರಿಕೆ ಸಾಕಾಣಿಕೆ ತರಬೇತಿ
ಈ ಸಂದರ್ಭದಲ್ಲಿ ತೀರ್ಥಣ್ಣ ಮಾತನಾಡಿದರು.
ಈ ವೇಳೆ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಶೈಲೇಶ್‍ಕುಮಾರ್, ತಿಪ್ಪೇಸ್ವಾಮಿ, ಮೋಹನ್‍ಕುಮಾರ್, ಪ್ರಕಾಶ್, ರಾಜಣ್ಣ, ಹರೀಶ್, ಕುಬೇರಪ್ಪ, ತಿಪ್ಪಣ್ಣ, ಮೌನೇಶ್, ಬಸಣ್ಣ, ಕಣುಮಪ್ಪ, ಗುತ್ತಿಗೆದಾರ ಹೆಚ್.ಜಗದೀಶ್ ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
