
CHITRADURGA NEWS | 02 JULY 2025
ಹೊಳಲ್ಕೆರೆ: ತಾಲ್ಲೂಕಿನ ಕಲ್ಲವ್ವನಾಗತಿಹಳ್ಳಿ ಗ್ರಾಮದಲ್ಲಿ 3.50 ಕೋಟಿ ರೂ.ವೆಚ್ಚದಲ್ಲಿ 2 ನೂತನ ಚೆಕ್‍ಡ್ಯಾಂ ಮತ್ತು ಸಿ.ಸಿ.ರಸ್ತೆ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
Also Read: ಡಿಸೆಂಬರ್ 31ರವರೆಗೆ ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ SSS ಹುಬ್ಬಳ್ಳಿ ರೈಲು ಸೇವೆ ರದ್ದು
ನಂತರ ಮಾತನಾಡಿದ ಶಾಸಕರು, ಪ್ರೌಢಶಾಲೆ, ಪಿ.ಯು. ಡಿಗ್ರಿ ಕಾಲೇಜು, ಐಟಿಐ. ಪಾಲಿಟೆಕ್ನಿಕ್, ವಸತಿ ಶಾಲೆಗಳ ನಿರ್ಮಾಣವಾಗಿದೆ. ಬಡವರಿಗೆ ಸುಲಭವಾಗಿ ಚಿಕಿತ್ಸೆ ಸಿಗಲಿ ಎನ್ನುವ ಉದ್ದೇಶದಿಂದ ಹೈಟೆಕ್ ಆಸ್ಪತ್ರೆಗಳನ್ನು ಕಟ್ಟಿಸಿದ್ದೇನೆ.
ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತರುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ.
ರೈತರ ತೋಟಗಳು ಒಣಗಬಾರದೆಂದು ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಇಷ್ಟು ಸಾಲದೆಂಬಂತೆ ಚಿಕ್ಕಜಾಜೂರಿನ ಕೋಟೆಹಾಳ್ ಬಳಿ ಹದಿಮೂರುವರೆ ಎಕರೆ ಜಾಗದಲ್ಲಿ ಐದುನೂರು ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗಲಿದೆ.
Also Read: ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ | ಅರ್ಜಿ ಅಹ್ವಾನ
ಜೋಗ್‍ಫಾಲ್ಸ್‍ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಪೂರೈಕೆಯಾಗಲಿದ್ದು, ಇದರಿಂದ ರೈತರಿಗೆ ಇನ್ನು ನೂರು ವರ್ಷಗಳ ಕಾಲ ಕರೆಂಟ್‍ನ ಅಭಾವವಿರುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತ ಮಹಾದೇವಪ್ಪ, ಸದಸ್ಯರುಗಳಾದ ದೇವರಾಜ್, ಪರಮೇಶ್ವರ್‍ನಾಯ್ಕ, ಇ.ಸಿ.ಓ. ಬಸವರಾಜಪ್ಪ, ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ರಾಜು, ರುದ್ರೆಗೌಡ್ರು, ಸಿದ್ದಪ್ಪ, ಕುಮಾರಸ್ವಾಮಿ, ಮಹೇಶ್, ಶಿವಮೂರ್ತಿ, ಸತೀಶ್, ರಾಜು, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‍ಗಳಾದ ಆನಂದಪ್ಪ, ನವೀನ್ ಹಾಗೂ ಗ್ರಾಮದ ಮುಖಂಡರುಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

