
CHITRADURGA NEWS | 10 JUNE 2026
ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ತಮ್ಮ 64ನೇ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಅದ್ದೂರಿಯಾಗಿ ಆಚರಿಸಿಕೊಂಡರು.

ಇದನ್ನೂ ಓದಿ: ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
ಶಾಸಕ ಟಿ.ರಘುಮೂರ್ತಿ ಅವರು ಬರುತ್ತಿದಂತೆ ಅಭಿಮಾನಿಗಳು ಪಟಾಕಿ ಸಿಡಿಸಿ, ಸಂಭ್ರಮಿಸಿದರು. ಟಿ.ರಘುಮೂರ್ತಿ ಅವರು ಅಭಿಮಾನಿ ಜೊತೆ ಕೇಕ್ ಕತ್ತರಿಸಿ, ಶುಭ ಹಾರೈಸಿದ ಎಲ್ಲರೂ ಧನ್ಯವಾದ ತಿಳಿಸಿದರು.
ಇದೇ ವೇಳೆ ಬಂದಿದ್ದ ಅಭಿಮಾನಿಗಳು, ರೈತ ಸಂಘದವರು ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ನಂತರ ಅಭಿಮಾನಿಗಳು ಟಿ.ರಘುಮೂರ್ತಿ ಅವರನ್ನು ಸನ್ಮಾನಿಸಿ, ಫೋಟೋ ಕ್ಲಿಕಿಸಿಕೊಂಡರು.
ಈ ವೇಳೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಜಿಲ್ಲೆಯ ಎಲ್ಲಾ ಶಾಸಕರು ಜೊತೆಗೂಡಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.
ಇದನ್ನೂ ಓದಿ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು
ಮೂರು ಬಾರಿ ಶಾಸಕನಾಗಿ ಚಳ್ಳಕೆರೆ ಅಭಿವೃದ್ದಿಗೆ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದೇವೆ. ಮಾಜಿ ಸಚಿವ ಹೆಚ್.ಆಂಜನೇಯರವರು ನಮೆಗೆಲ್ಲಾ ಶಕ್ತಿಯಿದ್ದಂತೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ಜಿಲ್ಲೆಗೆ ನೀರು ಹರಿಯುವ ಕಾಲ ಸನ್ನಿಹಿತವಾಗಿದೆ.
ಈಗಾಗಲೆ 11 ಸಾವಿರ ಕೋಟಿ ರೂ.ಗಳ ಖರ್ಚಾಗಿಗೆ. 23 ಸಾವಿರ ಕೋಟಿ ರೂ.ಗಳ ಯೋಜನೆ ಇದಾಗಿದ್ದು, ಗೋನೂರುವರೆಗೂ ನೀರು ತರುತ್ತೇವೆ. ಚಳ್ಳಕೆರೆ, ಪಾವಗಡ, ಮೊಳಕಾಲ್ಮುರುವಿಗೂ ನೀರು ತೆಗೆದುಕೊಂಡು ಹೋಗಬೇಕೆಂಬುದು ನಮ್ಮ ಆಸೆ.
ಈ ಸಂಬಂಧ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿರವರ ಜೊತೆ ಚರ್ಚಿಸಿದ್ದೇವೆ. ಜಿಲ್ಲೆ, ಜಾತಿವಾರು ಹಾಗೂ ನನ್ನ ಅಭಿವೃದ್ದಿ ಕೆಲಸವನ್ನು ಪರಿಗಣಿಸಿ ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‍ರವರ ಮಂತ್ರಿ ಮಂಡಲದಲ್ಲಿ ನನಗೆ ಸಚಿವ ಸ್ಥಾನ ಸಿಗಬಹುದೆಂಬ ನಂಬಿಕೆಯಿದೆ. ಜಿಲ್ಲೆಯ ಜನರ ಹಾಗೂ ರೈತರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದರು.
ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ
ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷನಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ರೈತರಿಗೆ ಸರ್ಕಾರದಿಂದ ಏನೇನು ನೆರವು ಕೊಡಿಸಬಹುದೋ ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದರು.
ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಮಾತನಾಡಿ, ಚಳ್ಳಕೆರೆಯ ಭಗೀರಥ ಶಾಸಕ ಟಿ.ರಘುಮೂರ್ತಿಗೆ ಈ ಬಾರಿ ಸಚಿವ ಸ್ಥಾನ ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದೇವೆ. ಚಳ್ಳಕೆರೆಯಲ್ಲಿ ವಿಶಾಲವಾದ ರಸ್ತೆಗಳಾಗಿವೆ. ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಸಣ್ಣ ನೀರಾವರಿ ಯೋಜನೆ ಸಚಿವರಾದರೆ ಜಿಲ್ಲೆಯ ರೈತರ ಬದುಕು ಹಸನಾಗುತ್ತದೆ ಎಂದರು.
ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಅಹೋಬಲ TVS MD ಪಿ.ವಿ.ಅರುಣ್ ಪೂಜಾರ್, ಪತ್ರಕರ್ತ ದರ್ಶನ್ ಇಂಗಳದಾಳ್, ಮುಖಂಡರಾದ ಡಿ.ಗೋಪಾಲಸ್ವಾಮಿ ನಾಯಕ, ಬಸ್ತಿಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕಾಟಿಹಳ್ಳಿ ಕರಿಯಣ್ಣ ಸೇರಿದಂತೆ ಹಲವು ಮುಖಂಡರು, ಅಭಿಮಾನಿಗಳು, ಅಧಿಕಾರಿಗಳು ಶುಭ ಕೋರಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
