
CHITRADURGA NEWS | 29 MAY 2026
ಚಿತ್ರದುರ್ಗ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(DCC) ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
ಸಚಿವ ಡಿ.ಸುಧಾಕರ್ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಸುಧಾಕರ್ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಮೇ.29 ರಂದು ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ರಘುಮೂರ್ತಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವರ ಆಯ್ಕೆಯನ್ನು ಅವಿರೋಧ ಎಂದು ಘೋಷಿಸಲಾಯಿತು.ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಹೊಸದುರ್ಗದ ಮಂಜುನಾಥ್ ಮುಂದುವರೆದಿದ್ದಾರೆ.
ವಿದೇಶ ಪ್ರವಾಸದಲ್ಲಿರುವ ರಘುರಾಮರೆಡ್ಡಿ ಅವರನ್ನು ಹೊರತುಪಡಿಸಿ ಡಿಸಿಸಿ ಬ್ಯಾಂಕಿನ ಎಲ್ಲ ನಿರ್ದೇಶಕರು ಹಾಜರಿದ್ದರು.
ಇದನ್ನೂ ಓದಿ: ವಿಶ್ವ ಪರಿಸರ ದಿನದ ಅಂಗವಾಗಿ ಮುರುಘಾ ಮಠದಿಂದ ಮೇ.30 ರಿಂದ ಜೂನ್ 5ರವರೆಗೆ ಸಸಿ ನೆಡುವ ಸಪ್ತಾಹ
ಚುನಾವಣಾಧಿಕಾರಿಯಾಗಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾಷರೀಫ್ ಕಾರ್ಯನಿರ್ವಹಿಸಿದರು.
ಟಿ.ರಘುಮೂರ್ತಿ ಅವರ ಅವಧಿ ಇನ್ನೂ ಮೂರು ವರ್ಷ ನಾಲ್ಕು ತಿಂಗಳು ಅಂದರೆ 2029 ಸೆಪ್ಟಂಬರ್ ವರೆಗೆ ಇದೆ.
ಅಧ್ಯಕ್ಷರಾದ ಬಳಿಕ ಟಿ.ರಘುಮೂರ್ತಿ ಹೇಳಿಕೆ:
ಈ ವೇಳೆ ಮಾತನಾಡಿದ ಟಿ.ರಘುಮೂರ್ತಿ ಅವರು, ಎಲ್ಲ ನಿರ್ದೇಶಕರು ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ.
ಡಿ.ಸುಧಾಕರ್ ಅವರು ಆಕಸ್ಮಿಕವಾಗಿ ನಿಧನರಾದ ಕಾರಣ ಈಚುನಾವಣೆ ನಡೆದಿದೆ. 70 ವರ್ಷಗಳ ಕಾಲ ಬ್ಯಾಂಕ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಇದನ್ನೂ ಓದಿ: ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
ಜಿಲ್ಲೆಯ ಆರು ತಾಲೂಕುಗಳಲ್ಲಿ 22 ಶಾಖೆ ಇದೆ. 150 ಸಿಬ್ಬಂಧಿ ಇದ್ದಾರೆ ಎಂದು ವಿವರಿಸಿದರು. ಈ ವರ್ಷ ಅಲ್ಪಾವಧಿ ಸಾಲವಾಗಿ ರೈತರಿಗೆ 550 ಕೋಟಿ ನೀಡುವ ಗುರಿ ಹೊಂದಲಾಗಿದೆ ಎಂದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
