
CHITRADURGA NEWS | 05 July 2025
ಚಿತ್ರದುರ್ಗ: ತುರುವನೂರು(Turuvanoor) ಹೋಬಳಿಯ ಸಮಗ್ರ ಅಭಿವೃದ್ಧಿಗೆ ಹಂತ ಹಂತವಾಗಿ ಮಾಡುತ್ತಿದ್ದು, ಸುಮಾರು 3 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಮಾಡಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ(T. Raghumurthy) ಹೇಳಿದರು.
Also Read: ಎಸ್.ನಿಜಲಿಂಗಪ್ಪ ಸ್ಮಾರಕಕ್ಕೆ ಶ್ರೀಶೈಲ ಜಗದ್ಗುರುಗಳ ಭೇಟಿ

ತಾಲೂಕಿನ ತುರುವನೂರು ಹೋಬಳಿ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮತ್ತು ಭವನ, ಸಿ.ಸಿ.ರಸ್ತೆ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
ತುರುವನೂರು(Turuvanoor) ಹೋಬಳಿಯ ಸಮಗ್ರ ಅಭಿವೃದ್ಧಿ ನನ್ನ ಚಿಂತನೆಯಾಗಿದ್ದ, ಎಲ್ಲಾ ಕಾಮಗಾರಿಗಳು ಸಹ ಚಾಲ್ತಿಯಲ್ಲಿದ್ದು ಮುಂದಿನ ದಿನದಲ್ಲಿ ಹೋಬಳಿಯ ಸಂಪೂರ್ಣ ಚಿತ್ರಣ ಬದಲಾಗಲಿದೆ ಎಂದರು.
ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ವಿಶೇಷ ಪ್ರದೇಶಾಭಿವೃದ್ದಿ ಯೋಜನೆಯಡಿ ಸುಮಾರು 2 ಕೋಟಿ ವೆಚ್ಚದಲ್ಲಿ ಚಿಕ್ಕಗೊಂಡನಹಳ್ಳಿ ಗ್ರಾಮದಿಂದ ಚಿಕ್ಕಪ್ಪನಹಳ್ಳಿ ಗ್ರಾಮದವರೆಗೆ ಸಂಪರ್ಕ ರಸ್ತೆಯ ಡಾಂಬರೀಕರಣ ಮಾಡಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಲು ಇಂಜಿನಿಯರ್ ಗೆ ಮತ್ತು ಗುತ್ತಿಗೆದಾರನಿಗೆ ಸೂಚನೆ ನೀಡಿದ್ದೇನೆ.
Also Read: UPSC, KAS, RRB ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ
ಚಿಕ್ಕಗೊಂಡನಹಳ್ಳಿ ಬೆಸ್ತರ ಕಾಲೋನಿಯಲ್ಲಿ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ ನಿರ್ಮಿಸಲಾಗಿದ್ದ ಶುದ್ಧ ನೀರಿನ ಘಟಕ ಉದ್ಘಾಟನೆ ಮಾಡಿದ್ದು, ಉತ್ತಮವಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಗ್ರಾಮ ಪಂಚಾಯತಿ ಅವರಿಗೆ ತಿಳಿಸಿದ್ದೇನೆ ಎಂದರು.
ಚಕ್ಕಗೊ0ಡನಹಳ್ಳಿ ಗ್ರಾಮದ ಬೆಸ್ತರ ಕಾಲೋನಿಯಲ್ಲಿ ಸುಮಾರು 10 ಲಕ್ಷ. ರೂಗಳ ವೆಚ್ಚದಲ್ಲಿ ಸಮುದಾಯ ಭವನ, ಎಸ್.ಸಿ ಕಾಲೋನಿಯಲ್ಲಿ 10 ಲಕ್ಷ ರೂಗಳ ವೆಚ್ಚದಲ್ಲಿ ಕೊಲ್ಲಾಪುರದಮ್ಮ ದೇವಸ್ಥಾನ ಕಟ್ಟಡ, ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿ 65 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ, 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಕಾಮಗಾರಿಗಳ ಭೂಮಿ ಪೂಜೆ ನೇರವೇರಿಸಿದ್ದು ತುರ್ತಾಗಿ ಅಚ್ಚುಕಟ್ಟಾಗಿ ಕಾಮಗಾರಿ ಮಾಡಲಾಗುತ್ತದೆ.
ತುರುವನೂರು(Turuvanoor) ಗ್ರಾಮದಲ್ಲಿ ರಸ್ತೆ ಅಗಲೀಕರಣ, ಗಾಂಧಿ ಪಾರ್ಕ್, ಮುರಾರ್ಜಿ ಶಾಲೆಗಳ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು.
Also Read: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ ಕೇಸ್ | ಆರೋಪಿಗೆ 20 ವರ್ಷ ಜೈಲು
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಮಹಾಂತಮ್ಮ, ಉಪಾಧ್ಯಕ್ಷ ಗಂಗಾಧರ, ಜಿಲ್ಲಾ ಗ್ಯಾರೆಂಟಿ ಸಮಿತಿ ಉಪಾಧ್ಯಕ್ಷ ಬಾಬುರೆಡ್ಡಿ, ಜಿಲ್ಲಾ ಗ್ಯಾರೆಂಟಿ ಸಮಿತಿಯ ಉಪಾಧ್ಯಕ್ಷರಾದ ಜಿ.ಟಿ.ಬಾಬುರೆಡ್ಡಿ,ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯರಾದ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಮುಖಂಡರಾದ ಗಟ್ಟಿ ಓಬಯ್ಯ , ತಿಪ್ಪೇಸ್ವಾಮಿ,ದಾಸಪ್ಪ, ರಾಘವೇಂದ್ರ, ನಾಗರಾಜ, ಚಿದಾನಂದಮೂರ್ತಿ, ಮಲ್ಲಿಕಾರ್ಜುನ, ರವಿ, ಹರೀಶ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
