ಮುಖ್ಯ ಸುದ್ದಿ
ರೋಗಿಗಳಿಗೆ ಸಿಹಿ ಸುದ್ದಿ ನೀಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ | ಶೀಘ್ರ ಸಂಚಾರಿ ಡಯಾಲಿಸಿಸ್ ಘಟಕ ಪ್ರಾರಂಭ
CHITRADURGA NEWS | 08 MARCH 2024
ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಡಯಾಲಿಸಿಸ್ ಕೇಂದ್ರ ಘಟಕಗಳ ಕೊರತೆಗೆ ಸಿಲುಕಿದೆ. ಈ ಕೇಂದ್ರದಲ್ಲಿ ನಿತ್ಯ ಮೂರು ಪಾಳಿಯಲ್ಲಿ 27 ರೋಗಿಗಳು ಡಯಾಲಿಸಿಸ್‌ಗೆ ಒಳಗಾಗುತ್ತಾರೆ.
ಕ್ಲಿಕ್ ಮಾಡಿ ಓದಿ: https://chitradurganews.com/inauguration-of-mother-and-child-hospital/
ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ, ಮೊಳಕಾಲ್ಮುರು, ಹೊಸದುರ್ಗ, ದಾವಣಗೆರೆ ಜಿಲ್ಲೆಯ ಜಗಳೂರು ಸೇರಿದಂತೆ ವಿವಿಧೆಡೆಯಿಂದ ನಿತ್ಯ ರೋಗಿಗಳು ಬರುತ್ತಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಗೆ ದುಬಾರಿ ಹಣ ಪಾವತಿಸಬೇಕು ಎಂಬ ಕಾರಣಕ್ಕೆ ಈ ಕೇಂದ್ರದ ಮೇಲೆ ಹೆಚ್ಚು ಅವಲಂಬಿತವಾಗಿದ್ದಾರೆ.
ಸದ್ಯಕ್ಕೆ 9 ಘಟಕಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಈ ಸಮಸ್ಯೆಯನ್ನು ಅರಿತ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಘಟಕಗಳನ್ನು 15ಕ್ಕೆ ಏರಿಸಲು ಕ್ರಮವಹಿಸಿದ್ದಾರೆ. ಜತೆಗೆ ಸಂಚಾರಿ ಡಯಾಲಿಸಿಸ್ ಘಟಕ ಪ್ರಾರಂಭಕ್ಕೆ ಸಿದ್ದತೆ ನಡೆಸಿದ್ದಾರೆ.
ಕ್ಲಿಕ್ ಮಾಡಿ ಓದಿ: https://chitradurganews.com/anemia-is-a-problem-for-pregnant-women/
ಈ ಬಗ್ಗೆ ಮಾತನಾಡಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ‘ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆ 100 ವರ್ಷಗಳಷ್ಟು ಹಳೆಯದಾಗಿದೆ. ಅಕ್ಕ ಪಕ್ಕದ ಜಿಲ್ಲೆಯ ಜೊತೆಗೆ ಹೊರ ರಾಜ್ಯಗಳಿಂದ ರೋಗಿಗಳು ಬರುತ್ತಾರೆ. ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈ ಘಟಕಗಳನ್ನು 15ಕ್ಕೆ ಏರಿಸಲು ಕ್ರಮವಹಿಸಲಾಗಿದೆ. ಇದರೊಂದಿಗೆ ಸಿಎಸ್‌ಆರ್ ನಿಧಿಯಲ್ಲಿ ಸಂಚಾರಿ ಡಯಾಲಿಸಿಸ್ ಘಟಕ ನೀಡಲು ಖಾಸಗಿ ಕಂಪನಿಗೆ ಕೋರಲಾಗಿದೆ. ಶೀಘ್ರ ಘಟಕ ಪ್ರಾರಂಭಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.
‘ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯವಿದೆ. 2021ರಲ್ಲಿಯೇ ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ ಮಾಡಬೇಕಿತ್ತು. ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆ ಕಟ್ಟಡವನ್ನು ರೋಗಿಗಳ ಚಿಕಿತ್ಸೆಗೆ ಬಳಸಲಾಗಿತ್ತು. ಕಳೆದ 6 ತಿಂಗಳಿಂದ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯುತ್ತಿದೆ’ ಎಂದರು.