CHITRADURGA NEWS | 25 FEBRUARY 2026
ಚಿತ್ರದುರ್ಗ: ಮೊಬೈಲ್ ಸ್ಕ್ರೀನ್‌ಗಾರ್ಡ್ ಬದಲಾವಣೆ ವಿಚಾರದಲ್ಲಿ ವಾಗ್ವಾದ ನಡದು ಮೊಬೈಲ್ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿಕ್ಕಪೇಟೆಯ ಸಂತೆಹೊಂಡದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ವಿಕ್ರಮ್ ಚೌಧರಿಗೆ ಅನ್ಯ ಕೋಮಿನ ಯುವಕನೊಬ್ಬ ಚಾಕುವಿನಿಂದ ಚುಚ್ಚಿದ್ದಾನೆ.
ಇದನ್ನೂ ಓದಿ: ಅಡಿಕೆ ಧಾರಣೆ | 24 ಫೆಬ್ರವರಿ | ರಾಶಿ ಬೆಲೆಯಲ್ಲಿ ಮತ್ತೆ ತುಸು ಏರಿಕೆ
ಬೆಳಗ್ಗೆ 11.30 ಗಂಟೆ ಸುಮಾರಿಗೆ ಅಂಗಡಿಗೆ ಬಂದಿದ್ದ ಯುವಕ, ಮೊಬೈಲ್ ಸ್ಕ್ರೀನ್ ಗಾರ್ಡ್ ಬದಲಾಯಿಸಿ ಮತ್ತೊಂದು ಪಡೆಯಲು ಮುಂದಾಗಿದ್ದ. ಈ ವೇಳೆ ಬ್ಯಾಂಡೆಡ್ ಸ್ಕ್ರೀನ್ ಗಾರ್ಡ್ ನೀಡಲು ಹೆಚ್ಚುವರಿಯಾಗಿ 100 ರೂ. ಕೇಳಿದ್ದಕ್ಕೆ ವಾಗ್ವಾದ ನಡೆದಿದೆ.
ಗಾಯಾಳು ವಿಕ್ರಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದ್ದು, ಅಪಾಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಇದನ್ನೂ ಓದಿ: ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನ ಮಾರ್ಚ್ 1 ರವರೆಗೆ ವಿಸ್ತರಣೆ
ಚಾಕು ಚುಚ್ಚಿದ ವ್ಯಕ್ತಿ ಈ ಹಿಂದೆಯೂ ಹೀಗೆಯೇ ನಡೆದುಕೊಂಡಿದ್ದ ಎನ್ನುವ ಮಾಹಿತಿಯಿದ್ದು, ಸಿಸಿಟಿವಿ ಫೂಟೇಜ್ ಗಮನಿಸಿ ತಕ್ಷಣ ಆರೋಪಿ ಬಂಧಿಸಿ ಕಾನೂನು ಕ್ರಮ ಜರುಗಿಸುವುದಾಗಿ ಎಸ್ಪಿ ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಆಸ್ಪತ್ರೆ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಆರೋಪಿ ಬಂಧಿಸಿ ಎಂದು ಆಗ್ರಹ ಮಾಡಿದರು.
ಇದನ್ನೂ ಓದಿ:ಶಿಕ್ಷಕಿ ಶೋಭಾ ಅವರಿಗೆ ರಾಷ್ಟ್ರಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ
ಪ್ರತಿಭಟನಾಕಾರರ ಜೊತೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಗರ ಠಾಣೆಯಲ್ಲಿ ದೂರು ದಾಖಲಿಸಿ ತಲೆಮರೆಸಿಕೊಂಡಿರುವ ಆರೋಪಿಯನ್ನು ತಕ್ಷಣ ಬಂಧಿಸುವ ಭರವಸೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
