CHITRADURGA NEWS | 22 APRIL 2024
ಚಿತ್ರದುರ್ಗ: ನರೇಂದ್ರ ಮೋದಿ ಮೂರನೇ ಅವಧಿಗೆ ಈ ದೇಶದ ಪ್ರಧಾನಿಯಾಗುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭರಮಸಾಗರದಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ: ಭೀಮಸಮುದ್ರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಹೆಚ್ಚಳ
ಬಿಜೆಪಿ-ಜೆಡಿಎಸ್ ಜತೆಗೂಡಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ನಿಶ್ಚಿತ ಎಂದ ಬಿ.ಎಸ್.ವೈ, ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಎರಡು ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದರು.
ದೇಶದಲ್ಲಿ ಜನಾಭಿಪ್ರಾಯ ಸ್ಪಷ್ಟವಾಗಿ ಕಾಣುತ್ತಿದೆ. ಮೋದಿ ಅವರು ಈಗಾಗಲೇ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‍ನಂತಹ ಗ್ಯಾರೆಂಟಿಗಳಲ್ಲಿ. ಮೂರು ಕೋಟಿಗೂ ಹೆಚ್ಚು ಬಡವರಿಗೆ ಮನೆ ನಿರ್ಮಾಣ ಮಾಡಿಕೊಡುವುದು, ಬಡವರಿಗೆ ಉಚಿತ ಪಡಿತರ ಕೊಡುವುದು, 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಯೋಜನೆಯಡಿ ಉಚಿತವಾಗಿ ಆರೋಗ್ಯ ಚಿಕಿತ್ಸೆ, ಹಿಂದುಳಿದವರ ಅಭಿವೃದ್ಧಿ, ದೇಶದ 25 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲೆತ್ತುವ ಸಂಕಲ್ಪ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ | ಮತ ಚಲಾಯಿಸಿದ ಡಿಸಿ, ಜಿಪಂ ಸಿಇಓ
ಚಿತ್ರದುರ್ಗ ಜಿಲ್ಲೆಯ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 5300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುತ್ತೇನೆ ಎಂದು ಯಡಿಯೂರಪ್ಪ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಅಭ್ಯರ್ಥಿ ಗೋವಿಂದ ಕಾರಜೋಳ, ಎಂ.ಸಿ.ರಘುಚಂದನ್ ಮಾತನಾಡಿದರು.
ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಆಗಮನಕ್ಕೆ ಭರ್ಜರಿ ತಯಾರಿ | ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ
ಚುನಾವಣಾ ಸಂಚಾಲಕ ಎಸ್. ಲಿಂಗಮೂರ್ತಿ,ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ, ಪರಮೇಶ್ವರಪ್ಪ, ಶೇಖರ್, ವೆಂಕಟೇಶ್, ಶೈಲೇಶ್, ಕೋಗುಂಡೆ ಮಂಜುನಾಥ್, ಡಿ.ವಿ.ಶರಣಪ್ಪ, ಪ್ರವೀಣ್‍ಕುಮಾರ್, ಜಿಲ್ಲಾಧ್ಯಕ್ಷ ಎ.ಮುರುಳಿ, ನರೇಂದ್ರ, ಕೊಟ್ರೇಶ್, ಅಶೋಕ್ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
