Connect with us

ಕರ್ನಾಟಕಕ್ಕೆ ಮೋದಿ ಸರ್ಕಾರದ ಕೊಡುಗೆ ಚೊಂಬು | ಚುನಾವಣೆಯಲ್ಲಿ ಪಾಠ ಕಲಿಸಲು ಸುರ್ಜೆವಾಲಾ ಕರೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ

ಲೋಕಸಮರ 2024

ಕರ್ನಾಟಕಕ್ಕೆ ಮೋದಿ ಸರ್ಕಾರದ ಕೊಡುಗೆ ಚೊಂಬು | ಚುನಾವಣೆಯಲ್ಲಿ ಪಾಠ ಕಲಿಸಲು ಸುರ್ಜೆವಾಲಾ ಕರೆ

CHITRADURGA NEWS | 19 APRIL 2024

ಚಿತ್ರದುರ್ಗ: ಕಳೆದ ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಕೊಡುಗೆ ಚೊಂಬು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಕುಟುಕಿದರು.

ಇದನ್ನೂ ಓದಿ: ಇಳೆಗೆ ತಂಪೆರೆದ ಮಳೆರಾಯ | ಜಿಲ್ಲೆಯ ವಿವಿಧೆಡೆ ಮಳೆ

ನಗರದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದೆ ಚೊಂಬು ನೀಡಿರುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದು ಚಿತ್ರದುರ್ಗ ಮತದಾರರಲ್ಲಿ ಮನವಿ ಮಾಡಿದರು.

ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಡುಗೆ ನೀಡದಿದ್ದರೂ 27 ಸಂಸದರು ಪ್ರಶ್ನಿಸಲಿಲ್ಲ. ಆದರೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಿದೆ. ಈಗ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನೈದು ಗ್ಯಾರೆಂಟಿಗಳನ್ನು ನೀಡಲಿದ್ದು, ಕರ್ನಾಟಕದ ಜನತೆಗೆ ಡಬಲ್ ಗ್ಯಾರೆಂಟಿ ಸಿಗಲಿವೆ ಎಂದರು.

ಇದನ್ನೂ ಓದಿ : ನೇಹಾ ಕಗ್ಗೊಲೆ | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಾಲುವೇಹಳ್ಳಿ ಪಾಲಯ್ಯ ಖಂಡನೆ

ನಾವು ಜನ ಕಲ್ಯಾಣ ಗ್ಯಾರಂಟಿಗಳನ್ನು ಘೋಷಿಸಿದ್ದೇವೆ. ಅಂಬಾನಿ, ಅದಾನಿ ಕಲ್ಯಾಣ ಗ್ಯಾರಂಟಿ ಅಲ್ಲ. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮರ್ಥ ಆಡಳಿತ ನೀಡುತ್ತಿದ್ದಾರೆ. ಐದು ವರ್ಷಗಳ ಕಾಲ ಕಾಂಗ್ರೆಸ್ ಉತ್ತಮ ಆಡಳಿತ ನೀಡಲಿದೆ. ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು.

ನಮ್ಮ ಮುಂದೆ ಎರಡು ಮಾದರಿಗಳಿವೆ. ಒಂದು ಖರ್ಗೆ-ರಾಹುಲ್ ಗ್ಯಾರಂಟಿ, ಮತ್ತೊಂದು ಚೊಂಬು ಮಾದರಿ. ಜನತೆ ಸೂಕ್ತ ಆಯ್ಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಬೇಕೋ ಚೊಂಬು ಬೇಕೊ ಎನ್ನುವುದನ್ನು ನಿರ್ಧರಿಸಬೇಕಿದೆ ಎಂದರು.

ಇದನ್ನೂ ಓದಿ : ಕುಡಿಯುವ ನೀರಿನ ಕಾಮಗಾರಿಗಳಿಗೆ ಚುರುಕು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ದೇಶದ ಎಲ್ಲರ ಖಾತೆಗಳಿಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿ ಹತ್ತು ವರ್ಷ ಕಳೆದಿದೆ. ರೈತರ ಆದಾಯ ದ್ವಿಗುಣ ಮಾಡುವ ಭರವಸೆಯೂ ಈಡೇರಿಲ್ಲ. ರಾಜ್ಯದಲ್ಲಿ ಬರ, ನೆರೆ ಬಂದಾಗ ಇತ್ತ ತಲೆ ಹಾಕುವುದಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ : ನರೇಗಾ ಕಾಮಗಾರಿ ವೀಕ್ಷಿ ಸಿದ RDPR ಕಾರ್ಯದರ್ಶಿ

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಟಿ.ಬಿ.ಜಯಚಂದ್ರ, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವಿರೇಂದ್ರ(ಪಪ್ಪಿ), ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಪೂರ್ಣಿಮಾ, ಎ.ವಿ.ಉಮಾಪತಿ, ಜಯಮ್ಮ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮತ್ತಿತರರಿದ್ದರು.

Click to comment

Leave a Reply

Your email address will not be published. Required fields are marked *

More in ಲೋಕಸಮರ 2024

To Top
Exit mobile version