By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
    45 minutes ago
    ಸಾಂದರ್ಭಿಕ ಚಿತ್ರ
    ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    46 minutes ago
    ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ | ಬಿ.ಟಿ.ಕುಮಾರಸ್ವಾಮಿ
    47 minutes ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ಚಿತ್ರದುರ್ಗದಲ್ಲಿ ಅ.31ರಿಂದ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ
    13 hours ago
    ಜಂಗಿ ಕುಸ್ತಿ | ದಾನ್ ಜಿ ಕೋಳಿಗೆ ಚಿನ್ಮೂಲಾದ್ರಿ ಕೇಸರಿ ಬಿರುದು
    ಜಂಗಿ ಕುಸ್ತಿ | ದಾನ್ ಜಿ ಕೋಳಿಗೆ ಚಿನ್ಮೂಲಾದ್ರಿ ಕೇಸರಿ ಬಿರುದು
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    7 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    3 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 20 | ಪರಿಶ್ರಮಕ್ಕೆ ತಕ್ಕ ಫಲಿತಾಂಶ, ಶುಭಸುದ್ದಿಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    7 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    jola roti
    ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
    41 minutes ago
    Custard apple
    ಸೀತಾಫಲದ ಎಲೆ ಈ ರೋಗಗಳಿಗೆ ಅದ್ಭುತ ಪರಿಹಾರವಂತೆ
    2 hours ago
    peanuts
    ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    black grapes
    ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
    1 day ago
    itchy breast a symptom of cancer
    ಸ್ತನದಲ್ಲಿ ತುರಿಕೆ ಕ್ಯಾನ್ಸರ್‌ನ ಲಕ್ಷಣವೇ?
    2 days ago
Reading: ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 

News Desk Chitradurga News
Last updated: 2 June 2026 18:59
News Desk Chitradurga News
5 months ago
Share
ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆ
ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆ
SHARE

CHITRADURGA NEWS | 02 JUNE 2026

ಚಿತ್ರದುರ್ಗ: ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸರಬರಾಜು ಸಿದ್ಧತೆ ಕುರಿತ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಹಂಗಾಮಿನಲ್ಲಿ ರೈತರಿಗೆ ವಿತರಿಸುವ ಬಿತ್ತನೆ ಬೀಜಗಳು ಉತ್ತಮ ಗುಣಮಟ್ಟದ್ದಾಗಿರಬೇಕು. ಕೃಷಿ ಇಲಾಖೆಯಿಂದ ವಿತರಿಸುವ ಬೀಜಗಳು ಮಾತ್ರವಲ್ಲದೆ, ಖಾಸಗಿ ಡೀಲರ್‍ಗಳ ಬಳಿ ಲಭ್ಯವಿರುವ ಬೀಜಗಳ ಗುಣಮಟ್ಟದ ಮೇಲೂ ನಿಗಾ ಇಡಬೇಕು. ಕಡ್ಡಾಯವಾಗಿ ಮೊಳಕೆ ಒಡೆಯುವ ಸಾಮಥ್ರ್ಯದ ಪರೀಕ್ಷೆ ನಡೆಸಿದ ಬಳಿಕವೇ ಬಿತ್ತನೆ ಬೀಜಗಳನ್ನು ಪೂರೈಸಬೇಕು ಎಂದು ನಿರ್ದೇಶನ ನೀಡಿದರು.

ಖಾಸಗಿ ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟದ ಹಾಗೂ ಲೂಸ್ ಸೀಡ್ಸ್ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಂತಹ ಕಳಪೆ ಬೀಜಗಳಿಂದ ರೈತರಿಗೆ ನಷ್ಟ ಉಂಟಾಗದಂತೆ ತಡೆಯಲು ಜಾಗೃತರಾಗಿರಬೇಕು. ಈ ಹಿಂದೆ ಕಳಪೆ ಬೀಜ ಮಾರಾಟದ ಕುರಿತು ದೂರುಗಳು ಬಂದಿದ್ದು, ಈ ಬಾರಿ ಅಂತಹ ಯಾವುದೇ ದೂರುಗಳಿಗೆ ಆಸ್ಪದ ನೀಡಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ

ಜಿಲ್ಲೆಯ ಯಾವ ತಾಲೂಕಿನಲ್ಲಿ ಎಷ್ಟು ಪ್ರಮಾಣದ ಬಿತ್ತನೆ ಬೀಜಗಳು ಖಾಸಗಿಯವರಿಂದ ಮತ್ತು ಇಲಾಖೆಯಿಂದ ವಿತರಣೆಯಾಗುತ್ತಿವೆ. ರೈತರು ಹೊರಗಿನಿಂದ ಯಾವೆಲ್ಲಾ ಬೀಜಗಳನ್ನು ತರುತ್ತಿದ್ದಾರೆ ಎಂಬ ನಿಖರವಾದ ಅಂಕಿ-ಅಂಶಗಳ ದಾಖಲೆಯನ್ನು ಕೃಷಿ ಅಧಿಕಾರಿಗಳು ಹೊಂದಿರಬೇಕು. ಫಸಲು ಬಾರದಿದ್ದಾಗ ರೈತರು ಆಕ್ಷೇಪಣೆ ಎತ್ತಿದರೆ, ಸೂಕ್ತ ತಾಂತ್ರಿಕ ವಿವರಣೆ ನೀಡಲು ಈ ಡೇಟಾ ಸಹಕಾರಿಯಾಗಲಿದೆ. ಇದು ತಾಲ್ಲೂಕು ಕೃಷಿ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಈ ಬಾರಿ ಮುಂಗಾರು ಮತ್ತು ಪೂರ್ವ ಮುಂಗಾರು ಎರಡೂ ಹಂಗಾಮುಗಳಿಗೆ ಸಂಬಂಧಿಸಿದಂತೆ ಕೆ-ಕಿಸಾನ್ ತಂತ್ರಾಂಶದ ಆ್ಯಪ್ ಮೂಲಕವೇ ಬೀಜ ವಿತರಣೆ ಪ್ರಕ್ರಿಯೆ ನಡೆಯಲಿದ್ದು, ಆರಂಭದಲ್ಲಿ ತಾಂತ್ರಿಕ ಗೊಂದಲಗಳು ಉಂಟಾಗುವ ಸಾಧ್ಯತೆ ಇರುತ್ತದೆ. 

ಆ್ಯಪ್ ಡೌನ್‍ಲೋಡ್, ನೋಂದಣಿ, ಭೂಮಿ ದಾಖಲೆಗಳ ಅಪ್‍ಲೋಡ್ ವಿಷಯದಲ್ಲಿ ರೈತರಿಗೆ ಯಾವುದೇ ಗೊಂದಲಗಳಾಗದಂತೆ ತಾಲೂಕು ಮಟ್ಟದ ಅಧಿಕಾರಿಗಳು ಮುಂಚಿತವಾಗಿಯೇ ಸೂಕ್ತ ಮಾರ್ಗದರ್ಶನ ನೀಡಬೇಕು. ನಿಯಮಾವಳಿಗಳ ಪ್ರಕಾರ ಪ್ರತಿಯೊಬ್ಬ ರೈತರ ಬೇಡಿಕೆಯನ್ನು ಆ್ಯಪ್‍ನಲ್ಲಿ ಸರಿಯಾಗಿ ನೋಂದಾಯಿಸಿಕೊಂಡು ವಿತರಣೆ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಎನ್.ವೈ.ಗೋಪಾಲಕೃಷ್ಣಗೆ ಮಂತ್ರಿಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡರ ಒತ್ತಾಯ 

ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಕೃತಕ ಅಭಾವ ಸೃಷ್ಠಿಯಾಗದಂತೆ ಜಾಗ್ರತೆ ವಹಿಸಬೇಕು. ರೈತರಲ್ಲಿ ಅನಗತ್ಯ ಭೀತಿ ಉಂಟುಮಾಡಿ ದಾಸ್ತಾನು ಮಾಡಿಕೊಳ್ಳುವ ಪರಿಸ್ಥಿತಿ ಬರಬಾರದು. ಸ್ಥಳೀಯವಾಗಿ ಯಾವುದೇ ರೀತಿಯ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಮುಂಗಾರು ಆರಂಭವಾಗುವ ಮುನ್ನವೇ ಕಡ್ಡಾಯವಾಗಿ ಪೂರ್ವಸಿದ್ಧತಾ ಸಭೆಗಳನ್ನು ನಡೆಸಬೇಕು. ರಸಗೊಬ್ಬರ ವಿತರಕರು ನಿಗದಿತ ದರದಲ್ಲಿಯೇ ಗೊಬ್ಬರ ಪೂರೈಸುತ್ತಿದ್ದಾರೆಯೇ, ನಿಗದಿಪಡಿಸಿದ ಗುರಿ ತಲುಪಿಸಿದ್ದಾರೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ತಹಶೀಲ್ದಾರ್‍ಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ ಒಟ್ಟು 189 ಗ್ರಾಮ ಪಂಚಾಯಿತಿಗಳು, 22 ಹೋಬಳಿಗಳು ಹಾಗೂ 1,009 ಗ್ರಾಮಗಳಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಹೃದಯ ಉಚಿತ ತಪಾಸಣೆ

ಪೂರ್ವ ಮುಂಗಾರಿನಲ್ಲಿ ಸುಮಾರು 25,000 ದಿಂದ 30,000 ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳ ಬಿತ್ತನೆಯಾಗುವ ನಿರೀಕ್ಷೆ ಇದೆ. ಜಿಲ್ಲೆಯ ಮತ್ತೊಂದು ಪ್ರಮುಖ ಬೆಳೆಯಾದ ಮೆಕ್ಕೆಜೋಳವನ್ನು ಸುಮಾರು 95,000 ದಿಂದ 1,00,000 ಹೆಕ್ಟೇರ್ ಪ್ರದೇಶದಲ್ಲಿ ಹಾಗೂ ಶೇಂಗಾ ಬೆಳೆಯನ್ನು ಸುಮಾರು 95,000 ದಿಂದ 1,15,000 ಹೆಕ್ಟೇರ್ ಪ್ರದೇಶದವರೆಗೆ ಬಿತ್ತನೆ ಮಾಡಲು ಉದ್ದೇಶಿಸಲಾಗಿದೆ. ಇನ್ನು ರಾಗಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿರುವುದರಿಂದ ಕಳೆದ ವರ್ಷ 58,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಈ ಬಾರಿ ರಾಗಿ ಬಿತ್ತನೆ ಪ್ರದೇಶ ಮತ್ತಷ್ಟು ಹೆಚ್ಚಾಗುವ ಸಂಭವವಿವಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 3,01,562 ರೈತರಿದ್ದು, ಈ ಪೈಕಿ ಪರಿಶಿಷ್ಟ ಜಾತಿಯ 47,395 ರೈತರು, ಪರಿಶಿಷ್ಟ ಪಂಗಡದ 47,765 ರೈತರು ಹಾಗೂ ಸಾಮಾನ್ಯ ವರ್ಗದ 2,06,402 ರೈತರಿದ್ದಾರೆ. ಚಿತ್ರದುರ್ಗ ಜಿಲ್ಲೆಯು ಕೇಂದ್ರ ಒಣ ವಲಯಕ್ಕೆ ಒಳಪಡಲಿದ್ದು, ಇಲ್ಲಿನ ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳು ಅತ್ಯಂತ ಒಣ ಹವಮಾನ ಹೊಂದಿರುವ ಪ್ರದೇಶಗಳಾಗಿವೆ. 

ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ ಪ್ರಮಾಣ 540 ಮಿ.ಮೀ ಆಗಿದೆ. ತಾಲ್ಲೂಕುವಾರು ವಾಡಿಕೆ ಮಳೆ ವಿವರಗಳನ್ನು ಗಮನಿಸಿದರೆ ಚಳ್ಳಕೆರೆಯಲ್ಲಿ 484 ಮಿ.ಮೀ, ಹೊಳಲ್ಕೆರೆಯಲ್ಲಿ 722 ಮಿ.ಮೀ, ಹಿರಿಯೂರಿನಲ್ಲಿ 578 ಮಿ.ಮೀ, ಹೊಸದುರ್ಗದಲ್ಲಿ 648 ಮಿ.ಮೀ, ಚಿತ್ರದುರ್ಗದಲ್ಲಿ 665 ಮಿ.ಮೀ ಹಾಗೂ ಮೊಳಕಾಲ್ಮೂರಿನಲ್ಲಿ 545 ಮಿ.ಮೀ ವಾಡಿಕೆ ಮಳೆಯಾಗಬೇಕಿದೆ.

ಇದನ್ನೂ ಓದಿ: ಮಕ್ಕಳ ಹಬ್ಬ | ಮರಳಿ ಶಾಲೆಗೆ ಬಂದ ಮಕ್ಕಳಿಗೆ ಸಂಭ್ರಮದ ಸ್ವಾಗತ

ಜನವರಿ 1 ರಿಂದ ಮೇ 1 ರವರೆಗಿನ ಮಳೆ ವಿವರಗಳನ್ನು ಪರಿಶೀಲಿಸಿದಾಗ, ಚಳ್ಳಕೆರೆ ತಾಲ್ಲೂಕಿನಲ್ಲಿ ಈ ಅವಧಿಯಲ್ಲಿ 102 ಮಿ.ಮೀ ವಾಡಿಕೆ ಮಳೆಗೆ ಬದಲಾಗಿ 113 ಮಿ.ಮೀ ಮಳೆಯಾಗಿದ್ದು, ಶೇ. 10 ರಷ್ಟು ಹೆಚ್ಚಿನ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 127 ವಾಡಿಕೆ ಮಳೆಗೆ ಬದಲಾಗಿ 113 ವಾಸ್ತವಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 126 ವಾಡಿಕೆ ಮಳೆಗೆ ಬದಲಾಗಿ 73 ಮಿ.ಮೀ ವಾಸ್ತವಿಕ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 132 ವಾಡಿಕೆ ಮಳೆಗೆ ಬದಲಾಗಿ 86 ವಾಸ್ತವಿಕ ಮಳೆಯಾಗಿದೆ. 

ಹೊಸದುರ್ಗ ತಾಲ್ಲೂಕಿನಲ್ಲಿ 135 ವಾಡಿಕೆ ಮಳೆಗೆ ಬದಲಾಗಿ 100 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 102 ಮಿ.ಮೀ ವಾಡಿಕೆ ಮಳೆಗೆ ಬದಲಾಗಿ 100 ಮಿ.ಮೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಈಗಾಗಲೇ ಭೂಮಿ ಸಿದ್ಧತೆ ಚಟುವಟಿಕೆಗಳು ಚುರುಕಿನಿಂದ ಸಾಗುತ್ತಿದ್ದು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಹಿರಿಯೂರು ಭಾಗದಲ್ಲೂ ಇತ್ತೀಚೆಗೆ ಉತ್ತಮ ಮಳೆಯಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ಹವಾಮಾನಕ್ಕೆ ಹೊಂದಿಕೊಳ್ಳುವಂತೆ 130 ರಿಂದ 140 ದಿನಗಳ ಅವಧಿಯ ತೊಗರಿ ತಳಿಗಳನ್ನು ಪರಿಚಯಿಸಲಾಗಿದ್ದು, ಈ ವರ್ಷವೂ ಇದನ್ನು ಮುಂದುವರಿಸಲಾಗುವುದು. ಶೇಂಗಾ ಬೆಳೆಯು 120 ದಿನಗಳ ಅವಧಿಯದ್ದಾಗಿದ್ದು, ತೊಗರಿ ಬೆಳೆಯು 130-140 ದಿನಗಳ ಅವಧಿಯನ್ನು ಹೊಂದಿರುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಂ.ಬಾಬು, ಕೃಷಿ ಇಲಾಖೆ ಚಿತ್ರದುರ್ಗ ವಿಭಾಗ ಉಪನಿರ್ದೇಶಕ ಕೆ.ಎಸ್.ಶಿವಕುಮಾರ್ ಸೇರಿದಂತೆ ತಹಶೀಲ್ದಾರ್‍ಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFertilizerMonsoonsowing seedsಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿತ್ತನೆ ಬೀಜಮುಂಗಾರುರಸಗೊಬ್ಬರ
Share This Article
Facebook Email Print
Previous Article ಜಿಲ್ಲಾಸ್ಪತ್ರೆ ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಹೃದಯ ಉಚಿತ ತಪಾಸಣೆ
Next Article Adike rate ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
Leave a Comment

Leave a Reply Cancel reply

Your email address will not be published. Required fields are marked *

jola roti
ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
Life Style
ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
ಮುಖ್ಯ ಸುದ್ದಿ
ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ | ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up