
CHITRADURGA NEWS | 15 APRIL 2026
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕುಂಚಿಗನಾಳು ಗ್ರಾಮದ ಬಳಿ ಇರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.98.57ರಷ್ಟು ಫಲಿತಾಂಶ ಲಭಿಸಿದೆ.
ಇದನ್ನೂ ಓದಿ: ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ಈ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಸಂಯೋಜನೆಗಳಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 39 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಕಾಲೇಜಿನಿಂದ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 70 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಉತ್ತೀರ್ಣಗೊಂಡು ಕಾಲೇಜಿಗೆ ಶೇ.98.57 ಫಲಿತಾಂಶ ತಂದಿದ್ದಾರೆ.
ಎರಡೂ ವಿಭಾಗದ 12 ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಬಿ.ಅಂಕಿತ (581 ಅಂಕಗಳೊಂದಿಗೆ ಶೇ.96.83), ದ್ವಿತೀಯ ಸ್ಥಾನ ಆರ್.ಪೂರ್ಣಿಮ (567 ಅಂಕಗಳೊಂದಿಗೆ ಶೇ.94.5), ತೃತೀಯ ಸ್ಥಾನ ಆರ್.ಚಂದನ(563 ಅಂಕಗಳೊಂದಿಗೆ ಶೇ.93.83), ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಬಿ.ಅರ್ಪಿತ (581 ಅಂಕಗಳೊಂದಿಗೆ ಶೇ.96.83), ದ್ವಿತೀಯ ಸ್ಥಾನ ಬಿ.ಎಮ್.ಮಾನಸಗಂಗೋತ್ರಿ (578 ಅಂಕಗಳೊಂದಿಗೆ ಶೇ.96.33), ತೃತೀಯ ಸ್ಥಾನ ವಿ.ಕೀರ್ತನ (568 ಅಂಕಗಳೊಂದಿಗೆ ಶೇ.94.67) ಅಂಕಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಾಂಶುಪಾಲ ಬಿ.ಲಿಂಗರಾಜು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
