
CHITRADURGA NEWS | 20 JANUARY 2026
ಚಿತ್ರದುರ್ಗ: ಜಿಲ್ಲೆಯಲ್ಲಿ 2025 ರ ಏಪ್ರಿಲ್‍ನಿಂದ ಡಿಸೆಂಬರ್ ಅಂತ್ಯದವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು 4948 ಹೆರಿಗೆಗಳಾಗಿವೆ ಎಂಬ ವಿಷಯ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವರದಿಯಾಯಿತು.
ಇದನ್ನೂ ಓದಿ: ಜಲಜೀವನ ಮಿಷನ್ | ಚಿತ್ರದುರ್ಗ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಕಳಪೆ ಕಾಮಗಾರಿ
ಇದರಲ್ಲಿ 3499 ಸಿಸೇರಿಯನ್ ಹಾಗೂ 1449 ಮಾತ್ರ ಸಾಮಾನ್ಯ ಹೆರಿಗೆಗಳಾಗಿವೆ. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿಯಂತೂ ಶೇ. 80 ಕ್ಕಿಂತಲೂ ಹೆಚ್ಚಿನ ಹೆರಿಗೆಗಳನ್ನು ಸಿಸೇರಿಯನ್ ಮಾಡಲಾಗುತ್ತಿದೆ. ಇಡೀ ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಸಿಸೇರಿಯನ್ ಹೆರಿಗೆ ಆಗುತ್ತಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆಕಾಶ್ ಮಾಹಿತಿ ನೀಡಿದರು.
ಈ ಕುರಿತಂತೆ ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಎಲ್ಲ ಶಾಸಕರುಗಳು ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೋವಿಡ್ ಸಂಕಟದಲ್ಲೇ ನಡೆಯಿತೇ ಹಗರಣ | ಮಾನವೀಯತೆ ಸತ್ತೋದ ವರದಿ ಬಹಿರಂಗ
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಳ ಕುರಿತಂತೆ ಸೂಕ್ತ ತನಿಖೆ ನಡೆಸಿ ವರದಿ ಪಡೆಯಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

