
CHITRADURGA NEWS | 19 MARCH 2024
ಚಿತ್ರದುರ್ಗ: ಬೇಲಿಯ ಬೆಂಕಿಗೆ ತಾಯಿ ಹಾಗೂ ಇಬ್ಬರು ಮಕ್ಕಳು ಬಲಿಯಾಗಿರುವ ಧಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ.
24 ವರ್ಷದ ಮಾರಕ್ಕ ಹಾಗೂ ಆಕೆಯ ಮಕ್ಕಳಾದ 4 ವರ್ಷದ ನಯನ್, 2 ವರ್ಷದ ಹರ್ಷವರ್ಧನ್ ಮೃತ ದುರ್ದೈವಿಗಳು.
ಬೇಲಿಗೆ ಬೆಂಕಿ ಹಚ್ಚಿ ಬೆಂಕಿಗೆ ಮಕ್ಕಳನ್ನು ಹಾಕಿ ತಾಯಿಯೂ ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬಹಿರ್ದೆಸೆಗೆ ತೆರಳಿದ್ದಾಗ ಬೇಲಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಅನುಮಾನವಿದೆ.
ತಳುಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
