
CHITRADURGA NEWS | 19 NOVEMBER 2024
ಹೊಳಲ್ಕೆರೆ: ತಾಯಿ ಮಗಳು ಆತ್ಮಹತ್ಯೆ(suicide) ಮಾಡಿಕೊಂಡಿರುವ ಧಾರುಣ ಘಟನೆ ಹೊಳಲ್ಕೆರೆ ತಾಲ್ಲೂಕು ಚಿಕ್ಕಂದವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಮಂಗಳವಾರದ ಹತ್ತಿ ರೇಟ್ ಇಲ್ಲಿದೆ…

52 ವರ್ಷದ ಪುಷ್ಪ ಹಾಗೂ 16 ವರ್ಷದ ಮಗಳು ಲಾವಣ್ಯ ಮೃತರು. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪುಷ್ಪ ಅವರ ಪತಿ ಬಸವರಾಜಪ್ಪ ಮೂರು ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ನಿಧನ ಹೊಂದಿದ್ದರು. ಪತಿಯ ಸಾವಿನಿಂದ ತಾಯಿ ಮಗಳು ಖಿನ್ನತೆಗೆ ಒಳಗಾಗಿದ್ದರು.
ಕ್ಲಿಕ್ ಮಾಡಿ ಓದಿ: ಭದ್ರಾದಿಂದ ಮುಂದುವರೆದ ಒಳಹರಿವು | ವಿವಿ ಸಾಗರ ಜಲಾಶಯ ಮಟ್ಟ ಎಷ್ಟಾಯ್ತು ?
ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಕೊಳೆತ ರೀತಿಯಲ್ಲಿ ಶವ ಪತ್ತೆಯಾಗಿವೆ. ಘಟನಾ ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
