CHITRADURGA NEWS | 12 MAY 2025
ಚಿತ್ರದುರ್ಗ: ಇಲ್ಲಿನ ಕೋಟೆ ಮುಂಭಾಗವಿರುವ ಮದಕರಿನಾಯಕ ವಿದ್ಯಾಸಂಸ್ಥೆ ಮದರ್ ತೆರೆಸಾ ನರ್ಸಿಂಗ್ ಸ್ಕೂಲ್‍ನಲ್ಲಿ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಆಚರಿಸಲಾಯಿತು.

Also Read: ಸೌತೆಕಾಯಿ ತಿಂದ ತಕ್ಷಣ ಇವುಗಳನ್ನು ತಿನ್ನಬಾರದು?
ಈ ವೇಳೆ ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್ ಮಾತನಾಡಿ, ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಸಲ್ಲಿಸಿ.
ನರ್ಸ್‍ಗಳನ್ನು ಸಮಾಜದಲ್ಲಿ ದೇವರಂತೆ ಕಾಣಲಾಗುವುದು. ನರ್ಸಿಂಗ್ ವೃತ್ತಿ ಅತ್ಯಂತ ಪವಿತ್ರವಾದುದು. ಪ್ಲೊರೆಂನ್ಸ್ ನೈಟಿಂಗೇಲ್‍ರವರ ಆದರ್ಶ, ತತ್ವ ಹಾಗೂ ಅವರಲ್ಲಿದ್ದ ಸೇವಾ ಮನೋಭಾವನೆಯನ್ನು ಜೀವನದಲ್ಲಿ ರೂಢಿಸಿಕೊಂಡಾಗ ಮಾತ್ರ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಗೆ ಗೌರವ ಕೊಟ್ಟಂತಾಗುತ್ತದೆ.
ನರ್ಸಿಂಗ್ ವೃತ್ತಿಯಲ್ಲಿ ಅಪ್ಪಿ ತಪ್ಪಿಯೂ ತಪ್ಪು ಮಾಡಬೇಡಿ. ಆತ್ಮವಿಶ್ವಾಸ ಮೂಡಿಸಿಕೊಳ್ಳಿ. ನಮ್ಮ ನರ್ಸಿಂಗ್ ಕಾಲೇಜಿನಲ್ಲಿ ಓದಿದವರು ದೇಶ-ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆಂದು ಹೇಳಿದರು.
Also Read: ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಇದ್ದರೆ, ಈ 5 ಹಣ್ಣುಗಳನ್ನು ತಿನ್ನಿ
ಮದರ್ ತೆರೆಸಾ ಸ್ಕೂಲ್ ಆಫ್ ನರ್ಸಿಂಗ್ ಪ್ರಾಂಶುಪಾಲರಾದ ಆರ್.ಮಂಜುಳ, ಉಪನ್ಯಾಸಕರಾದ ಕೆ.ಪೂಜಾ, ಎನ್. ವಿದ್ಯಾ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎಸ್.ಸಾಗರ್, ನರ್ಸಿಂಗ್ ಸ್ಕೂಲ್‍ನ ಹಿರಿಯ ಉಪನ್ಯಾಸಕಿ ವಿ.ಎಸ್.ಪೋತದಾರ್, ಎಂ.ಎನ್.ರೂಪ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
