CHITRADURGA NEWS | 22 JULY 2026
ಚಿತ್ರದುರ್ಗ: ಆರೋಗ್ಯಕರ ಗರ್ಭಧಾರಣೆ ಹಾಗೂ ಮಕ್ಕಳ ನಡುವೆ ಕನಿಷ್ಠ 3 ವರ್ಷಗಳ ಅಂತರ ಕಾಯ್ದುಕೊಳ್ಳುವುದರಿಂದ ಅನಗತ್ಯ ಗರ್ಭಧಾರಣೆ ತಡೆಗಟ್ಟಬಹುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
ನಗರದ ಬೃಹನ್ಮಠ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಈಚೆಗೆ ಹಮ್ಮಿಕೊಂಡಿದ್ದ “ವಿಶ್ವ ಜನಸಂಖ್ಯಾ ದಿನಾಚರಣೆ – 2026” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಯಿ ಮತ್ತು ಮಗುವಿನ ಮರಣ ಪ್ರಮಾಣವನ್ನು ತಗ್ಗಿಸಲು ಸೂಕ್ತ ವಯಸ್ಸಿನಲ್ಲಿ ಗರ್ಭಧರಿಸಿ, ಆರೋಗ್ಯ ಇಲಾಖೆಯ ಸೇವೆಗಳನ್ನು ತಾಯಂದಿರು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಬೇಕು. ಸದೃಢ ಮಕ್ಕಳನ್ನು ಪಡೆಯಲು ಎರಡು ಮಕ್ಕಳ ನಡುವೆ ಕನಿಷ್ಠ ಮೂರು ವರ್ಷ ಅಂತರ ಕಾಪಾಡಿಕೊಳ್ಳುವುದು ಅಗತ್ಯವಾಗಿದ್ದು, ಇದಕ್ಕಾಗಿ ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್, ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಹೆಣ್ಣು ಮಕ್ಕಳಿಗೆ 18 ವರ್ಷ ಹಾಗೂ ಗಂಡು ಮಕ್ಕಳಿಗೆ 21 ವರ್ಷ ತುಂಬಿದ ನಂತರವೇ ಮದುವೆಯಾಗಬೇಕು ಎಂದರು.
ಇದನ್ನೂ ಓದಿ: KDP ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಡ್ಡಿ ಕೊಣ್ಣೂರ ಪ್ರಾಸ್ತಾವಿಕವಾಗಿ ಮಾತನಾಡಿ, ದಿನಾಂಕ 11.07.1987 ರಂದು ಯುಗೋಸ್ಲಾವಿಯಾದಲ್ಲಿ ಜನಿಸಿದ ಮಗುವಿನೊಂದಿಗೆ ವಿಶ್ವದ ಜನಸಂಖ್ಯೆ 500 ಕೋಟಿ ತಲುಪಿತು. ಈ ದಿನದ ನೆನಪಿನಲ್ಲಿ ಜನಸಂಖ್ಯಾ ಏರಿಕೆಯ ಸಮಸ್ಯೆಗಳ ಕುರಿತು ಅರಿವು ಮೂಡಿಸಲು ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ ಮಾತನಾಡಿ, ಭಾರತದಲ್ಲಿ ಪ್ರತಿ ವರ್ಷ ಸುಮಾರು 2.44 ಕೋಟಿ ಮಕ್ಕಳು ಜನಿಸುತ್ತಿದ್ದಾರೆ (ಪ್ರತಿ ನಿಮಿಷಕ್ಕೆ 46 ಮಕ್ಕಳು). ಇದನ್ನು ತಡೆಯಲು ಕನಿಷ್ಠ ಮದುವೆ ವಯಸ್ಸಿನ ಪಾಲನೆ, ಎರಡು ಮಕ್ಕಳ ನಡುವೆ 4 ವರ್ಷಗಳ ಅಂತರ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮಗಳಲ್ಲಿ ಪುರುಷರ ಭಾಗವಹಿಸುವಿಕೆ ಅತ್ಯಗತ್ಯ ಎಂದು ತಿಳಿಸಿದರು.
ಉಪನ್ಯಾಸಕ ಶಿವಕುಮಾರ್ ಮಾತನಾಡಿ, ಜನಸಂಖ್ಯಾ ಹೆಚ್ಚಳದಿಂದ ಆಹಾರ, ನೀರು, ವಸತಿ, ಅರಣ್ಯ ಸಂಪತ್ತಿನ ಕೊರತೆ ಹಾಗೂ ಬಡತನ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರಾಂಶುಪಾಲ ಪಿ. ಎಂ. ಈ ರಾಜೇಶ್ ಮಾತನಾಡಿ, ಭಾರತವು ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನಕ್ಕೆ ತಲುಪುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜಾಗೃತರಾಗಬೇಕು. ಭವಿಷ್ಯದಲ್ಲಿ ಹಿತಮಿತವಾಗಿ ಮಕ್ಕಳನ್ನು ಪಡೆದು, ಅವರಿಗೆ ಉತ್ತಮ ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಕಾರ್ಯಕ್ರಮದಲ್ಲಿ ಡಾ. ರೇಖಾ, ಪ್ರವೀಣ್, ರೋಷ್ನಾಹರ, ಸರಸ್ವತಿ, ಆಶಾ ಕಾರ್ಯಕರ್ತೆಯರಾದ ಆಶಾ, ಶೋಭಾ ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ ಬಿ. ಕಾರ್ಯಕ್ರಮ ನಿರೂಪಿಸಿದರು. ನಂದೀಶ್ ಸ್ವಾಗತಿಸಿ, ಕೇಶವ್ ವಂದಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

