
CHITRADURGA NEWS | 08 APRIL 2026
ಚಿತ್ರದುರ್ಗ: ಬೇಸಿಗೆಯಲ್ಲಿ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ನೀರು ಕಡಿಮೆಯಾಗಿ ಪರದಾಡುತ್ತಿದ್ದಾರೆ. ಈ ನಡುವೆ ಜಮೀನಿಲ್ಲಿದ್ದ ಬೋರ್‌ವೆಲ್‌ಗಳಲ್ಲಿನ ರೈತರ ಪಂಪ್‌ಸೆಟ್‌ಗಳ ಕೇಬಲ್ ಕಳ್ಳತನವಾಗಿದ್ದು ಸೂಕ್ತ ಕಾನೂನುಕ್ರಮ ಪಂಪ್‌ಸೆಟ್, ಕೇಬಲ್ ಕಳ್ಳತನ ಮಾಡುತ್ತಿರುವುದು ಆತಂಕಕ್ಕೀಡು ಮಾಡಿದೆ ಎಂದು ರೈತ ಮುಖಂಡರು ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ: ನಿರ್ಮಿತಿ ಕೇಂದ್ರದ ನಿವೃತ್ತ ಅಕೌಂಟೆಂಟ್ ಸುಶೀಲಮ್ಮ ಮನೆಯಲ್ಲಿ ಸಿಕ್ಕ ಆಸ್ತಿ ಎಷ್ಟು ಗೊತ್ತಾ ?
ತಾಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಜಮೀನುಗಳಲ್ಲಿ ಏ.5 ಮತ್ತು 6 ರಂದು ಪಂಪ್‌ಸೆಟ್ ಹಾಗೂ ಕೇಬಲ್ ಕಳವು ಮಾಡಲಾಗಿದೆ. ಈ ಹಿಂದೆಯೂ ಇಂತಹ ಘಟನೆ ನಡೆದಿದ್ದು, ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಈಗ ಮತ್ತೆ ಅದೇ ಕೃತ್ಯ ಮುಂದುವರೆದಿದೆ. ರೈತರು ಬೇಸಿಗೆಯಲ್ಲಿ ನೀರಿಲ್ಲದೆ ಸಂಕಷ್ಟದಲ್ಲಿರುವಾಗ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು.
ತಕ್ಷಣ ಕಳ್ಳರನ್ನು ಬಂಧಿಸಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 7 ಏಪ್ರಿಲ್ | ಯಾವ ಅಡಿಕೆಗೆ ಎಷ್ಟು ರೇಟ್
ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಸೇರಿದಂತೆ ರೈತರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
