Connect with us

Muda scam: ಜನ ನಿಮ್ಮನ್ನು ಕ್ಷಮಿಸುವುದಿಲ್ಲ | ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ

bjp

ಮುಖ್ಯ ಸುದ್ದಿ

Muda scam: ಜನ ನಿಮ್ಮನ್ನು ಕ್ಷಮಿಸುವುದಿಲ್ಲ | ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ

CHITRADURGA NEWS | 04 AUGUST 2024
ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ದಿ ನಿಗಮದ 187 ಕೋಟಿ ರೂ.ಗಳ ಭ್ರಷ್ಠಾಚಾರ, ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಚಿತ್ರದುರ್ಗದ ಬಿಜೆಪಿ ಮುಖಂಡರು, ಕಾರ್ಯಕರ್ತರ ಭಾನುವಾರ ತೆರಳಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಬಳಸಬೇಕಾಗಿರುವ ಹಣವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ಯ ಉದ್ದೇಶಗಳಿಗೆ ಬಳಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಗಳನ್ನು ಅಕ್ರಮವಾಗಿ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ಜತೆಗೆ ಮುಡಾ ನಿವೇಶನ ಹಗರಣದಲ್ಲಿ ಸಿಲುಕಿದ್ದು, ಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯದ ಜನ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.
ಜಿಲ್ಲೆಯಿಂದ ಒಂದು ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಆರು ತಾಲ್ಲೂಕುಗಳಿಂದ ಕಾರ್ಯಕರ್ತರು ಪಾದಯಾತ್ರೆಗೆ ಹೊರಟಿದ್ದು, ನಾವುಗಳು ಬಿಡದಿಯಲ್ಲಿ ಸೇರಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಹೆತ್ತವರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಿ | ಡಾ.ಶ್ರೀ ಬಸವಕುಮಾರ ಸ್ವಾಮೀಜಿ

ವಿಧಾನಸಭೆ ಅಧಿವೇಶನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚಿಸಲು ಸ್ಪೀಕರ್‌ ಯು.ಟಿ.ಖಾದರ್‌ ಅವಕಾಶ ಕೊಡಲಿಲ್ಲ. ದಲಿತರು, ರೈತರಿಗೆ ದ್ರೋಹವೆಸಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ತೋರುವ ಬದಲು ರಾಜೀನಾಮೆ ನೀಡಬೇಕು. ಇಲ್ಲವಾದರೆ ಅಧಿಕಾರದಿಂದ ಕೆಳಗಿಳಿಯುವತನಕ ಹೋರಾಟ ನಿಲ್ಲುವುದಿಲ್ಲ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಆಗದೆ ಬೇರೆ ಬೇರೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಮತದಾರರು ಸಹಿಸುವುದಿಲ್ಲ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‌ ಸಿದ್ದಾಪುರ, ಸಂಪತ್‌ ಕುಮಾರ್‌, ಖಜಾಂಚಿ ಮಾಧುರಿ ಗಿರೀಶ್‌, ನಗರ ಮಂಡಲ ಅಧ್ಯಕ್ಷ ನವೀನ್‌ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ಶರತ್‌ ಪಾಟೀಲ್‌, ಕಿರಣ್, ಚಂದ್ರಿಕಾ ಲೋಕನಾಥ್‌, ಕವನ, ಕಾಂಚನ, ಸುಮಾ, ವೀಣಾ, ಶೀಲಾ, ಸರಸ್ವತಿ, ಮಮತ, ಪೂರ್ಣಿಮ, ರಾಜೇಶ್ವರಿ, ಶಾಂತಮ್ಮ, ರಜಿನಿ, ಬಸಮ್ಮ, ಭಾರತಿ, ಶ್ರೀನಿವಾಸ್‌, ಪ್ರವೀಣ್, ಶಂಭು, ವೆಂಕಟೇಶ್‌, ನಾಗರಾಜ್‌, ರಾಘವೇಂದ್ರ, ಯಶವಂತ್‌, ಪ್ರವೀಣ್‌, ಲೋಕೇಶ್‌, ಪ್ರಕಾಶ್‌, ಸಾರಂಗ ಮಠ ಪ್ರಸಾದ್‌, ಬಾಬು, ಕುಮಾರ್‌ ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version