
CHITRADURGA NEWS | 04 NOVEMBER 2024
ಚಿತ್ರದುರ್ಗ: ಚಿತ್ರದುರ್ಗ ಹಾಗೂ ಚಳ್ಳಕೆರೆ ನಗರಸಭೆ ಮತ್ತು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಚಿತ್ರದುರ್ಗ(Chitradurga) ನಗರಸಭೆಯ 15ನೇ ವಾರ್ಡ್-ಹಿಂದುಳಿದ ವರ್ಗ-(ಎ), ಚಳ್ಳಕೆರೆ ನಗರಸಭೆಯ 4ನೇ ವಾರ್ಡ್-ಸಾಮಾನ್ಯ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯ ಜಾಗನೂರುಹಟ್ಟಿಯ 1ನೇ ವಾರ್ಡ್-ಪರಿಶಿಷ್ಟ ಜಾತಿಗೆ ಮೀಸಲಾತಿ ನಿಗಧಿಯಾಗಿದೆ.
ಇದನ್ನೂ ಓದಿ: ಸರ್ಕಾರಿ ವಕೀಲ ಜಗದೀಶ್ ಕಾರು ಭೀಕರ ಅಪಘಾತ | ಹಿಂಬದಿಯಿಂದ ಬಸ್ ಡಿಕ್ಕಿ
2024ರ ನ.4 ಸೋಮವಾರದಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ನ.11 ಸೋಮವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.
ನ.12 ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.14 ಗುರುವಾರ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ನ.23 ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ?
ವಿಜೇತ ಅಭ್ಯರ್ಥಿಯ ಘೋಷಣೆ ತರುವಾಯ ಚುನಾವಣೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲಾಗುವುದು. ನ.04 ರಿಂದ 26 ರವರೆಗೆ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
