ಮುಖ್ಯ ಸುದ್ದಿ
RESERVATION: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ
Published on
CHITRADURGA NEWS | 05 AUGUST 2024
ಚಿತ್ರದುರ್ಗ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಗರಾಭಿವೃದ್ಧಿ ಇಲಾಖೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದೆ.
ಚಿತ್ರದುರ್ಗ ಜಿಲ್ಲೆಯ ಮೂರು ನಗರಸಭೆ, ಎರಡು ಪಟ್ಟಣ ಪಂಚಾಯಿತಿ ಹಾಗೂ ಎರಡು ಪುರಸಭೆಗಳಿಗೆ ಮೀಸಲಾತಿ ಪ್ರಕಟವಾಗಿದೆ.
ಇದನ್ನೂ ಓದಿ: ಆಗಸ್ಟ್ 6 ರಿಂದ ಹತ್ತಿ ಮಾರುಕಟ್ಟೆ ಬಂದ್ | ನಾಳೆಯಿಂದ ರೈತರು ಮಾರುಕಟ್ಟೆಗೆ ಹತ್ತಿ ತರದಂತೆ ಸೂಚನೆ
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಳ ಅಧ್ಯಕ್ಷ, ಉಪಾಧ್ಯಕ್ಷರ ಮೊದಲನೇ ಅವಧಿ ಮುಗಿದಿದ್ದು, ಎರಡನೇ ಅವಧಿಗೆ ಮೀಸಲಾತಿಗಾಗಿ ಸದಸ್ಯರು ಸುಮಾರು ಒಂದೂವರೆ ವರ್ಷದಿಂದ ಕಾಯುತ್ತಿದ್ದರು.
ನಗರಸಭೆಗಳ ಮೀಸಲಾತಿ ವಿವರ:
- ಚಿತ್ರದುರ್ಗ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಬಿಸಿಎ ಮಹಿಳೆಗೆ ಬಂದಿದೆ.
- ಚಳ್ಳಕೆರೆ ನಗರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ ಬಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ(ಎಸ್ಟಿ) ಮಹಿಳೆ.
- ಹಿರಿಯೂರು ನಗರಸಭೆ ಅಧ್ಯಕ್ಷ ಸ್ಥಾನ ಬಿಸಿಎ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ(ಎಸ್ಸಿ) ಮಹಿಳೆಗೆ.
ಪುರಸಭೆ ಮೀಸಲಾತಿ ವಿವರ:
- ಹೊಸದುರ್ಗ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ(ಎಸ್ಟಿ), ಉಪಾಧ್ಯಕ್ಷ ಸ್ಥಾನ ಬಿಸಿಎ ಮಹಿಳೆ.
- ಹೊಳಲ್ಕೆರೆ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ(ಎಸ್ಸಿ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಒಲಿದು ಬಂದಿದೆ.
ಪಟ್ಟಣ ಪಂಚಾಯಿತಿ ಮೀಸಲಾತಿ ವಿವರ:
- ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
- ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ(ಎಸ್ಸಿ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
Continue Reading
Related Topics:Challakere, Chitradurga, Hiriyur, Holalkere, Hosadurga, Local Bodies, Molakalmuru, Municipal Council, Nayakanahatti, Reservation, Town Panchayat, Urban Development Department, ಚಳ್ಳಕೆರೆ, ಚಿತ್ರದುರ್ಗ, ನಗರಸಭೆ, ನಗರಾಭಿವೃದ್ಧಿ ಇಲಾಖೆ, ನಾಯಕನಹಟ್ಟಿ, ಪಟ್ಟಣ ಪಂಚಾಯಿತಿ, ಪುರಸಭೆ, ಮೀಸಲಾತಿ, ಮೊಳಕಾಲ್ಮೂರು, ಸ್ಥಳೀಯ ಸಂಸ್ಥೆಗಳು, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ
Click to comment