ಮುಖ್ಯ ಸುದ್ದಿ
RESERVATION: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ
CHITRADURGA NEWS | 05 AUGUST 2024
ಚಿತ್ರದುರ್ಗ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಗರಾಭಿವೃದ್ಧಿ ಇಲಾಖೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದೆ.
ಚಿತ್ರದುರ್ಗ ಜಿಲ್ಲೆಯ ಮೂರು ನಗರಸಭೆ, ಎರಡು ಪಟ್ಟಣ ಪಂಚಾಯಿತಿ ಹಾಗೂ ಎರಡು ಪುರಸಭೆಗಳಿಗೆ ಮೀಸಲಾತಿ ಪ್ರಕಟವಾಗಿದೆ.
ಇದನ್ನೂ ಓದಿ: ಆಗಸ್ಟ್ 6 ರಿಂದ ಹತ್ತಿ ಮಾರುಕಟ್ಟೆ ಬಂದ್ | ನಾಳೆಯಿಂದ ರೈತರು ಮಾರುಕಟ್ಟೆಗೆ ಹತ್ತಿ ತರದಂತೆ ಸೂಚನೆ
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಳ ಅಧ್ಯಕ್ಷ, ಉಪಾಧ್ಯಕ್ಷರ ಮೊದಲನೇ ಅವಧಿ ಮುಗಿದಿದ್ದು, ಎರಡನೇ ಅವಧಿಗೆ ಮೀಸಲಾತಿಗಾಗಿ ಸದಸ್ಯರು ಸುಮಾರು ಒಂದೂವರೆ ವರ್ಷದಿಂದ ಕಾಯುತ್ತಿದ್ದರು.
ನಗರಸಭೆಗಳ ಮೀಸಲಾತಿ ವಿವರ:
- ಚಿತ್ರದುರ್ಗ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಬಿಸಿಎ ಮಹಿಳೆಗೆ ಬಂದಿದೆ.
- ಚಳ್ಳಕೆರೆ ನಗರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ ಬಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ(ಎಸ್‌ಟಿ) ಮಹಿಳೆ.
- ಹಿರಿಯೂರು ನಗರಸಭೆ ಅಧ್ಯಕ್ಷ ಸ್ಥಾನ ಬಿಸಿಎ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ(ಎಸ್ಸಿ) ಮಹಿಳೆಗೆ.
ಪುರಸಭೆ ಮೀಸಲಾತಿ ವಿವರ:
- ಹೊಸದುರ್ಗ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ(ಎಸ್ಟಿ), ಉಪಾಧ್ಯಕ್ಷ ಸ್ಥಾನ ಬಿಸಿಎ ಮಹಿಳೆ.
- ಹೊಳಲ್ಕೆರೆ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ(ಎಸ್ಸಿ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಒಲಿದು ಬಂದಿದೆ.
ಪಟ್ಟಣ ಪಂಚಾಯಿತಿ ಮೀಸಲಾತಿ ವಿವರ:
- ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
- ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ(ಎಸ್ಸಿ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.