CHITRADURGA NEWS | 20 JULY 2025
ಚಿತ್ರದುರ್ಗ: ತಾಲೂಕಿನ ಜಾನುಕೊಂಡ ಬಳಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ ಎಸೆದು ಹೋಗಿರುವ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ನಿವಾಸಿ ರವಿಕುಮಾರ್(50) ಕೊಲೆಯಾದ ವ್ಯಕ್ತಿಯಾಗಿದ್ದು, ಕೊಲೆ ಬಳಿಕ ಜಾನುಕೊಂಡ ಹೊರವಲಯದಲ್ಲಿ ಬೆಡ್‌ಶೀಟ್‌ನಲ್ಲಿ ಮೂಟೆ ಕಟ್ಟಿ ಎಸೆದು ಹೋಗಿರುವ ಬಗ್ಗೆ ಅನುಮಾನಿಸಲಾಗಿದೆ.
ಇದನ್ನೂ ಓದಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಹೋಮ್ ಗಾರ್ಡ್ ಆತ್ಮ*ಹತ್ಯೆ
ಚಿತ್ರದುರ್ಗದಲ್ಲಿ ಆಟೋ ಓಡಿಸುತ್ತಿದ್ದ ರವಿಕುಮಾರ್ ಕೊಲೆಯಾಗಿದ್ದು, ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
