Connect with us

    ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಆಡಳಿತಕ್ಕೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ನಿರ್ದೇಶನ | ಆಡಳಿತದಲ್ಲಿ ಶರಣರ ಹಸ್ತಕ್ಷೇಪ ಪ್ರಶ್ನಿಸಿದ್ದ ಎಚ್.ಏಕಾಂತಯ್ಯ

    ಮುರುಘರಾಜೇಂದ್ರ ಬೃಹನ್ಮಠ

    ಮುಖ್ಯ ಸುದ್ದಿ

    ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಆಡಳಿತಕ್ಕೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ನಿರ್ದೇಶನ | ಆಡಳಿತದಲ್ಲಿ ಶರಣರ ಹಸ್ತಕ್ಷೇಪ ಪ್ರಶ್ನಿಸಿದ್ದ ಎಚ್.ಏಕಾಂತಯ್ಯ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 27 FEBRUARY 2024

    ಚಿತ್ರದುರ್ಗ: ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಕಾನೂನು ಸಂಕಷ್ಟ ಬಂದೊದಗಿದೆ.

    ಮಠ ಹಾಗೂ ವಿದ್ಯಾಪೀಠದ ಆಡಳಿತದ ವಿಚಾರದಲ್ಲಿ ಶ್ರೀಗಳ ವಿರುದ್ಧ ದಾಖಲಾಗಿದ್ದ ಅರ್ಜಿಯ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್‍ನಲ್ಲಿ ನಡೆಯಿತು.

    ಇದನ್ನೂ ಓದಿ: ಆಟೋ ಡ್ರೈವರ್ ಮಗಳು ಸಿವಿಲ್ ಜಡ್ಜ್

    ಈ ವೇಳೆ ಸರ್ವೋಚ್ಛ ನ್ಯಾಯಾಲಯ, ಚಿತ್ರದುರ್ಗದ ಮುರುಘಾ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳಲು ಮೂರು ದಿನಗಳಲ್ಲಿ ಸಮಿತಿ ರಚಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

    ಮುರುಘಾ ಮಠದ ಆಡಳಿತದಲ್ಲಿ ಶ್ರೀ ಶಿವಮೂರ್ತಿ ಮುರುಘಾ ಶರಣರು ಹಸ್ತಕ್ಷೇಪ ನಡೆಸಬಾರದು ಹಾಗೂ ಆಡಳಿತದ ಭಾಗವಾಗಿರಬಾರದು ಎಂದು ನ್ಯಾಯಾಲಯ ಸೂಚನೆ ನೀಡಿದೆ.

    ಇದನ್ನೂ ಓದಿ: ಸಂಗಮೇಶ್ವರ ಜಯಂತಿ ಸರಳ ಆಚರಣೆಗೆ ಮನವಿ

    ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅಡಿಯಲ್ಲಿ ಈ ಹಿಂದೆ ಮಠದಲ್ಲಿ ಮುರುಘಾ ಶರಣರಿಗಿದ್ದ ಅಧಿಕಾರ ಚಲಾವಣೆಗೆ ಚಿತ್ರದುರ್ಗದ ಸೆಷನ್ಸ್ ಕೋರ್ಟ್ ನಿರ್ಬಂಧ ವಿಧಿಸಿತ್ತು.

    ಈ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿ, ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳಲು ಅವಕಾಶ ಕಲ್ಪಿಸಿದಂತಾಗಿತ್ತು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

    ಇದನ್ನೂ ಓದಿ: ಬಿಎಎಂಎಸ್ ಪರೀಕ್ಷೆಯಲ್ಲಿ ಬಂಗಾರದ ಪದಕ ಪಡೆದ ಡಾ.ಸ್ನೇಹ

    ಇದೇ ವೇಳೆ ಡಿ.ರಾಜಪ್ಪ ಎಂಬುವವರು ಪೋಕ್ಸೋ ಕಾಯ್ದೆ ಅಡಿ ಆರೋಪಿಯಾಗಿರುವ ಶರಣರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

    ಈ ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಹಾಗೂ ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ ಮಠದ ಆಡಳಿತದಲ್ಲಿ ಶ್ರೀಗಳ ಹಸ್ತಕ್ಷೇಪಕ್ಕೆ ನಿರ್ಬಂಧ ವಿಧಿಸಿ, ಸರ್ಕಾರಕ್ಕೆ ಸಮಿತಿ ರಚಿಸಲು ಸೂಚನೆ ನೀಡಿದೆ.

    ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ

    ಚಿತ್ರದುರ್ಗ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‍ನಲ್ಲಿ ರಿಲೀಫ್ ಪಡೆದಿದ್ದ ಮುರುಘಾ ಶರಣರಿಗೆ ಈಗ ಸುಪ್ರೀಂಕೋರ್ಟ್ ಆದೇಶ ಸಂಕಷ್ಟ ತಂದೊಡ್ಡಿದೆ.

    ಮಾಜಿ ಸಚಿವ ಎಚ್.ಏಕಾಂತಯ್ಯ ಪರವಾಗಿ ಹಿರಿಯ ವಕೀಲರಾದ ಪಿ.ಬಿ.ಸುರೇಶ್, ಸುಘೋಷ್, ಸುಬ್ರಹ್ಮಣ್ಯ, ಚೈತನ್ಯ, ಮುರುಘಾ ಶರಣರ ವಿರುದ್ಧ ಪೋಕ್ಸೋ-2012 ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಬಾಲ ನ್ಯಾಯ ಕಾಯ್ದೆಯ ಕಲಂಗಳ ಅಡಿಯಲ್ಲಿ ದೂರು ದಾಖಲಾಗಿವೆ.

    ಕ್ಲಿಕ್ ಮಾಡಿ ಓದಿ: https://chitradurganews.com/you-know-what-will-happen-in-the-new-chitradurga-railway-station/

    ಈಗಾಗಲೇ ಸೆಷನ್ಸ್ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ಇದರಲ್ಲಿ ಶ್ರೀಗಳ ವಿರುದ್ಧ ಗುರುತರ ಆರೋಪಗಳನ್ನು ಹೊರಿಸಲಾಗಿದೆ. ಜೊತೆಗೆ ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದರಿಂದ ಆಡಳಿತ ನಿರ್ವಹಣೆ ಅವರಿಗೆ ವಹಿಸುವುದು ಸರಿಯಲ್ಲ ಎಂದು ಏಕಾಂತಯ್ಯ ಪರ ವಕೀಲರು ವಾದ ಮಂಡಿಸಿದ್ದರು.

    ಶರಣರ ಪರವಾಗಿ ಹಿರಿಯ ವಕೀಲರಾದ ಶೈಲೇಶ್ ಮಡಿಯಾಳ್ ವಾದ ಮಂಡಿಸಿ, ಈ ಹಿಂದೆ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದ್ದ ಮಠ, ಮಾನ್ಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು ಎನ್ನುವುದನ್ನು ಗಮನಕ್ಕೆ ತಂದರು.

    ಕ್ಲಿಕ್ ಮಾಡಿ ಓದಿ: https://chitradurganews.com/madara-channaiah-mutt-is-not-used-politically/

    ಈ ಹಿಂದೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಹಿಂದಿನ ಸರ್ಕಾರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಈ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

    ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು

    ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು

    ಭಾರತದ ಸರ್ವೋಚ್ಛ ನ್ಯಾಯಾಲಯದ ಪ್ರಕರಣದ ಭಾಗವಾಗಿರುವ ಎಚ್. ಏಕಾಂತಯ್ಯ ಹಾಗೂ ಶಿವಮೂರ್ತಿ ಮುರುಘಾ ಶರಣರು ಪ್ರಕರಣದ ಸರ್ವೋಚ್ಛ ನ್ಯಾಯಾಲಯದ ತೀರ್ಪು ಬರುವವರೆಗೂ ಸರ್ಕಾರ ರಚಿಸುವ ಕಮಿಟಿಯ ಭಾಗವಾಗಿರಬಾರದು ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಗೌರವಿಸುತ್ತೇವೆ.

    | ಶ್ರೀ ಶಿವಮೂರ್ತಿ ಮುರುಘಾ ಶರಣರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top