CHITRADURGA NEWS | 26 NOVEMBER 2025
ಚಿತ್ರದುರ್ಗ: ದೇಶದ ಗಮನ ಸೆಳೆದಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಿಡುಗಡೆ ಆಗಿದ್ದಾರೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಚನ್ನಬಸಪ್ಪ ಹಡಪದ ಅವರು ಇಂದು ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯದ ಕಲಾಪದಲ್ಲಿ ತೀರ್ಪು ಪ್ರಕಟಿಸಿದರು.
2022 ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾ ಶರಣರ ವಿರುದ್ಧ ಮಠದ ಹಾಸ್ಟೆಲ್ ನಲ್ಲಿದ್ದ ಇಬ್ಬರು ಬಾಲಕಿಯರು ದೂರು ದಾಖಲಿಸಿದ್ದರು.
ಸದರಿ ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. Dysp ಅನಿಲ್ ಕುಮಾರ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಮೂರು ವರ್ಷಗಳ ಸುಧೀರ್ಘ ವಿಚಾರಣೆ ನಂತರ ನ್ಯಾಯಾಲಯ ಶ್ರೀಗಳು ಸೇರಿದಂತೆ ಮೂವರನ್ನು ಬಿಡುಗಡೆ ಮಾಡಿದೆ.
ಮುರುಘಾ ಶರಣರ ಜೊತೆಗೆ ಹಾಸ್ಟೆಲ್ ವಾರ್ಡನ್ ರಶ್ಮಿ ಹಾಗೂ ಮಢದ ವ್ಯವಸ್ಥಾಪಕರಾದ ಪರಮಶಿವಯ್ಯ ಕೂಡಾ ಪ್ರಕರಣದಿಂದ ಬಿಡುಗಡೆ ಆಗಿದ್ದಾರೆ.
ಪ್ರಕರಣದಲ್ಲಿ ಶ್ರೀಗಳ ಪರವಾಗಿ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್ ಹಾಗೂ ಕೆ.ಬಿ.ಕೆ ಸ್ವಾಮಿ ವಾದ ಮಂಡಿಸಿದ್ದರು.
ಈ ಮೂಲಕ ಮುರುಘಾ ಮಠಕ್ಕೆ ಅಂಟಿದ್ದ ಕಳಂಕ ದೂರವಾದಂತಾಗಿದ್ದು, ಮಠದ ಭಕ್ತರು ನಿಟ್ಟುಸಿರು ಬಿಟ್ಟಿದ್ದಾರೆ.
ಶ್ರೀಗಳು ಗಂಗೆಯಷ್ಟೇ ಪವಿತ್ರರಾಗಿದ್ದು, ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರಗೆ ಬಂದಿದ್ದಾರೆ. ಮುರುಘೇಶನ ಶಕ್ತಿ ಏನೆಂಬುದು ಗೊತ್ತಾಗಿದೆ. ಭಕ್ತರಾದ ನಮಗೆಲ್ಲಾ ಈ ತೀರ್ಪು ಸಂತಸ ತಂದಿದೆ.
| ಜಿತೇಂದ್ರ ಎನ್.ಹುಲಿಕುಂಟೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
