CHITRADURGA NEWS | 21 SEPTEMBER 2026
ಚಿತ್ರದುರ್ಗ: ನಗರದ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕರು, ಶಿಕ್ಷಣ-ಕಲೆ-ಸಾಹಿತ್ಯ ಪ್ರೇಮಿ ಹಾಗೂ ಸಂಸ್ಕೃತಿ ಚಿಂತಕರಾಗಿದ್ದ ಡಾ. ಕೆ.ಎಂ. ವೀರೇಶ್ ಅವರ ನಿಧನಕ್ಕೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿ ಹಾಗೂ ಎಸ್ಜೆಎಂ ವಿದ್ಯಾಪೀಠದ ಮುಖ್ಯಸ್ಥರು ಮತ್ತು ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಆರ್ಯವೈಶ್ಯ ಸಮುದಾಯದ ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಹಲವು ಯೋಜನೆ
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ, ಡಾ. ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್ ಹಾಗೂ ಎಸ್ಜೆಎಂ ವಿದ್ಯಾಪೀಠದ ಶಾಲಾ-ಕಾಲೇಜುಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಡಾ. ವೀರೇಶ್ ಅವರು ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ಶ್ರೀಮಠದ ಪರಮಭಕ್ತರಾಗಿದ್ದ ಅವರು ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ರಾಜ್ಯಮಟ್ಟದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನವನ್ನೂ ಆಯೋಜಿಸಲಾಗಿತ್ತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವದ ಡಾ. ಕೆ.ಎಂ. ವೀರೇಶ್ ಅವರು ಬಾಪೂಜಿ ವಿದ್ಯಾಸಂಸ್ಥೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂರಾರು ಜನರಿಗೆ ಮಾರ್ಗದರ್ಶನ ನೀಡಿದ್ದರು. ಅವರ ಅಗಲಿಕೆಯಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಬಸವಾದಿ ಪ್ರಮಥರು ಕುಟುಂಬದವರು, ಸಂಸ್ಥೆಯ ನೌಕರರು ಹಾಗೂ ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

