CHITRADURGA NEWS | 08 MAY 2026
ಚಿತ್ರದುರ್ಗ: ಬಸವತತ್ವದ ಅನುಯಾಯಿಗಳೂ, ಉದ್ಯಮಿ ಹಾಗೂ ಚಿತ್ರದುರ್ಗ ವೀರಶೈವ ಸಮಾಜದ ಹಿರಿಯ ಮುಖಂಡರೂ ಆದ ಕೆ.ಆರ್.ಶಿವಪ್ರಕಾಶ್ ಅವರ ನಿಧನಕ್ಕೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಹುದ್ದೆಗೆ ಮೇ.22 ಕಂಪ್ಯೂಟರ್ ಪರೀಕ್ಷೆ
ಮೃತರು ಶ್ರೀಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಚಿತ್ರದುರ್ಗ ವೀರಶೈವ ಸಮಾಜ ಹಾಗೂ ಶ್ರೀಮಠದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಶ್ರೀ ಜಯಪದ್ಮ ಮೋಟಾರ್ ಸರ್ವೀಸ್ ಮೂಲಕ ಮರ್ನಾಲ್ಕು ದಶಕಗಳಿಂದ ನಾಡಿಗೆ ಸಲ್ಲಿಸಿದ ಸೇವೆ ಸ್ಮರಣೀಯ ಎಂದಿದ್ದಾರೆ.
ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು, ಡಾ. ಪಿ.ಎಸ್. ಶಂಕರ್ ಹಾಗೂ ಎಸ್.ಎನ್. ಚಂದ್ರಶೇಖರ್ ಅವರು ಮೃತರ ಅಗಲಿಕೆಯಿಂದ ಉಂಟಾಗಿರುವ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

