ಮುಖ್ಯ ಸುದ್ದಿ
ಚಿತ್ರದುರ್ಗಕ್ಕೆ ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ

Published on
CHITRADURGA NEWS | 29 APRIL 2024
ಚಿತ್ರದುರ್ಗ: ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು.
ಪೋಕ್ಸೋ ಪ್ರಕರಣದಡಿ ಕಳೆದ ವರ್ಷ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಆನಂತರ ಹೈಕೋರ್ಟಿನಿಂದ ಜಾಮೀನು ಪಡೆದು ಬಿಡುಗಡೆಯಾಗಿ ದಾವಣಗೆರೆಯಲ್ಲಿದ್ದರು.
ಸದರಿ ಜಾಮೀನು ಪ್ರಶ್ನಿಸಿ ಸಂತ್ರಸ್ಥ ಬಾಲಕಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಶ್ರೀಗಳ ವಿರುದ್ಧ ಸಲ್ಲಿಕೆ ಆಗಿದ್ದ ಅರ್ಜಿಯನ್ನು ಏಪ್ರಿಲ್ 22 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಒಂದು ವಾರದೊಳಗೆ ಚಿತ್ರದುರ್ಗದ ವಿಚಾರಣಾ ನ್ಯಾಯಾಲಯದ ಎದುರು ಹಾಜರಾಗಲು ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಏ.29 ಸೋಮವಾರ ಮಧ್ಯಾಹ್ನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾದರು.
Continue Reading
Related Topics:Chitradurga, Court, judicia, murughashree, supreem court, surender, ಚಿತ್ರದುರ್ಗ, ಜಿಲ್ಲಾ ನ್ಯಾಯಾಧೀಶರು, ನ್ಯಾಯಾಂಗ ಬಂಧನ, ಪೋಕ್ಸೋ, ಮುರುಘಾಶ್ರೀ

Click to comment