CHITRADURGA NEWS | 20 APRIL 2026
ಚಿತ್ರದುರ್ಗ: ಶ್ರೀ ಮುರುಘಾಮಠವು ಬಸವಾದಿ ಶರಣರ ತತ್ವ ಚಿಂತನೆಗಳ ಪ್ರಯೋಗಶಾಲೆ ಯಾಗಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಸಾಂಸ್ಕೃತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ನಿಮಿತ್ತ ಮುರುಘಾಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 12ನೇ ಶತಮಾನದ ಬಸವಾದಿ ಶಿವಶರಣರ ವೇಷಭೂಷಣ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿ,
ವೇಷಭೂಷಣ ಸ್ಪರ್ಧೆಯು ಕೇವಲ ವಿನೋದಕ್ಕಾಗಿ ಅಥವಾ ವಿವಿಧ ಬಟ್ಟೆಗಳನ್ನು ಧರಿಸುವುದಕ್ಕೆ ಮಾತ್ರವಲ್ಲ. ಈ ನೆಲದ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ ಪರಂಪರೆಯ ಜೊತೆಗೆ 12ನೇ ಶತಮಾನದಲ್ಲಿ ಬಾಳಿ ಬದುಕಿದ ಬಸವಾದಿ ಶರಣರ ವಿಚಾರಧಾರೆಗಳನ್ನು ಬಿತ್ತುವುದಾಗಿದೆ. ಈ ನಿಟ್ಟಿನಲ್ಲಿ ಶ್ರೀ ಮಠವು ಬಸವಾದಿ ಶರಣರ ವಿಚಾರಧಾರೆಗಳ ಪ್ರಯೋಗ ಶಾಲೆಯಾಗಿದೆ.
ಈ ಸ್ಪರ್ಧೆಯಲ್ಲಿ ಐದು ವರ್ಷದ ಮಗುವಿನಿಂದ 70 ವರ್ಷದ ವಯೋಮಾನದವರು ಸಹ ಭಾಗವಹಿಸಿರುವುದು ಒಂದು ವಿಶೇಷ. ಆಧುನಿಕತೆಯ ಪ್ರಭಾವಕ್ಕೆ ಒಳಗಾಗುತ್ತಿರುವ ಹಿಂದಿನ ಕಾಲಘಟ್ಟದಲ್ಲಿ ನಮ್ಮ ನೆಲದ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು ನೆನೆಪಿಸುವ ಕಾರ್ಯ ಈ ಸ್ಪರ್ಧೆಯಿಂದ ಸಾಧ್ಯವಾಗುತ್ತಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಮಕ್ಕಳಿಂದ ಹಿಡಿದು ಹಿರಿಯರವರೆಗೆ ಬಸವಣ, ಅಲ್ಲಮಪ್ರಭು, ಸತ್ಯಕ್ಕ, ಆಯ್ದಕ್ಕಿ ಲಕ್ಕಮ್ಮ, ಅಕ್ಕಮಹಾದೇವಿ ಮುಂತಾದ ಶರಣರ ಉಡುಗೆ ತೊಡುಗೆಗಳನ್ನು ಧರಿಸಿದಾಗ ಆ ಕಾಲದ ಸಾಮಾಜಿಕ, ಸಾಂಸ್ಕೃತಿಕ ಬದುಕು ನಮ್ಮ ಕಣ್ಣ ಮುಂದೆ ಕಟ್ಟಿದಂತಾಗುತ್ತದೆ. ಇದು ಕೇವಲ ಬಾಹ್ಯ ವೇಷದ ಬದಲಾವಣೆಯಲ್ಲ, ಅಂತರಂಗದ ಪರಿವರ್ತನೆಯೂ ಕೂಡ ಎಂದು ತಿಳಿಸಿದರು.
ರಂಗೋಲಿ ಸ್ಪರ್ಧೆಯಲ್ಲಿ ಬಾಗಲಕೋಟೆ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಒಳಗೊಂಡಂತೆ ವಿವಿಧ ಜಿಲ್ಲೆಗಳ ಸ್ಪರ್ಧಾಳುಗಳು ಭಾಗವಹಿಸಿದ್ದರು. ಚುಕ್ಕಿ ರಂಗೋಲಿ. ಶಿವಶರಣರ ಭಾವಚಿತ್ರಗಳ ರಂಗೋಲಿ ಮತ್ತು ಇತರೆ ಸಾಂಸ್ಕೃತಿಕ ಕಲೆಗಳನ್ನು ಒಳಗೊಂಡ 30ಕ್ಕೂ ಹೆಚ್ಚು ರಂಗೋಲಿಗಳು ರಚನೆಯಾಗಿದ್ದವು. ಬಸವಾದಿ ಶಿವಶರಣರ ವೇಷಭೂಷಣ ಸ್ಪರ್ಧೆಯಲ್ಲಿ 35ಕ್ಕೂ ಹೆಚ್ಚು ಸ್ಪರ್ಧೆಗಳು ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
