ಮುಖ್ಯ ಸುದ್ದಿ
ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ ತರಬೇತಿ

CHITRADURGA NEWS | 25 JANUARY 2024
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜ.31ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಕೃಷಿ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಹಿರಿಯ ತಾಂತ್ರಿಕ ಅಧಿಕಾರಿ ಕೆ.ಬಿ.ವಿದ್ಯಾವತಿ ಅವರು ಉತ್ತಮ ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಮತ್ತು ಅವುಗಳ ಮೌಲ್ಯವರ್ಧನೆ ಬಗ್ಗೆ ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮಾಡಲಿದ್ದಾರೆ.
ಇದನ್ನೂ ಓದಿ: 21 ಅಡಿ ಎತ್ತರದ ಮುಳ್ಳಿನ ದೇಗುಲ | ಪುರ್ಲಹಳ್ಳಿಯಲ್ಲಿ ಬುಡಕಟ್ಟು ವೈಭವ
ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ-8277931058, ಕೃಷಿ ಅಧಿಕಾರಿ ಟಿ.ಪಿ.ರಂಜಿತಾ-8277930959 ಮತ್ತು ಎಂ.ಜೆ.ಪವಿತ್ರಾ-9535412286 ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
