CHITRADURGA NEWS | 02 JULY 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದೇ ಜುಲೈ 4ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲೆಯ ರೈತರಿಗೆ ‘ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: BLO ಗಳಿಗೆ ಮತದಾರರ ಛಾಯಾಚಿತ್ರ ಸ್ಪರ್ಧೆ | ಡಾ.ಎಸ್.ಆಕಾಶ್
ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಕೃಷಿ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಗೊರಪ್ಪನವರ ಭರಮಪ್ಪ, ಸಹಾಯಕ ಪ್ರಾಧ್ಯಪಕರು ಅವರು ಉತ್ತಮ ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಬಗ್ಗೆ ವಿಷಯ ಮಂಡನೆ ಮತ್ತು ಅಣಬೆ ಮೌಲ್ಯವರ್ಧನೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ನಂತರ ಚಿತ್ರದುರ್ಗದ ಗ್ರೀನ್ ಹುಡ್ಸ್ ಮಶ್ರೂಮ್ ಸಂಸ್ಥೆಯ ವಿಶ್ವನಾಥ್ ಜಿಎ ಇವರು ಅಣಬೆ ಕೃಷಿಯ ಪ್ರಾತ್ಯಕ್ಷಿಕೆಯ ಮೂಲಕ ತಮ್ಮ ಅನುಭವವನ್ನು ರೈತರೊಂದಿಗೆ ಹಂಚಿಕೊಳ್ಳುವರು.
ಆದ ಪ್ರಯುಕ್ತ ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಇದನ್ನೂ ಓದಿ: DOCTORS DAY | ವೈದ್ಯರಂತೆ ಪೋಸು ಕೊಟ್ಟ ಪುಟಾಣಿಗಳು
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಪ್ರಕಟಣೆ ಕೋರಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
