Connect with us

ಕಾಶ್ಮೀರದ ಉಗ್ರ ದಾಳಿ ಖಂಡಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ | ಬಗ್ಗು ಬಡಿಯಲು ಪ್ರಧಾನಿಗೆ ಮನವಿ

ಮುಖ್ಯ ಸುದ್ದಿ

ಕಾಶ್ಮೀರದ ಉಗ್ರ ದಾಳಿ ಖಂಡಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ | ಬಗ್ಗು ಬಡಿಯಲು ಪ್ರಧಾನಿಗೆ ಮನವಿ

CHITRADURGA NEWS | 25 APRIL 2025

ಚಿತ್ರದುರ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಬಲಿ ತೆಗೆದುಕೊಂಡಿರುವುದನ್ನು ವಿರೋಧಿಸಿ ಮುಸ್ಲಿಂರು ಪ್ರತಿಭಟನೆ ನಡೆಸಿದರು.

Also Read: ಘೋರಿ ಉಸಿರಾಡುತ್ತಿದೆ | ಚಾದರದೊಳಗಿನಿಂದ ಉಸಿರಾಟ | ಫಕೃಲ್ಲಾ ಶಾ ಖಾದ್ರಿ ಸಮಾಧಿ

ಇಲ್ಲಿನ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.

ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ ನಂತರ ಗಾಂಧಿವೃತ್ತದಿಂದ ಮೆರವಣಿಗೆ ಮೂಲಕ ಆಗಮಿಸಿದ ಅವರು ಭಯೋತ್ಪಾದಕರನ್ನು ಪತ್ತೆ ಮಾಡಿ ಹೊಡೆದುರುಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ನ್ಯಾಯವಾದಿ ಸಾಧಿಕ್‍ವುಲ್ಲಾ ಪ್ರತಿಭಟನೆಯಲ್ಲಿ ಮಾತನಾಡಿ, ಭಾರತದ ಸ್ವರ್ಗ ಎಂದೆ ಪ್ರಸಿದ್ದಿ ಪಡೆದಿರುವ ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿ 26 ಮಂದಿಯನ್ನು ಭೀಕರವಾಗಿ ಕೊಂದಿರುವುದು ಅತ್ಯಂತ ಹೇಯ ಕೃತ್ಯ.

ದೇಶದ ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್‍ಷಾ, ರಕ್ಷಣಾ ಮಂತ್ರಿ ರಾಜನಾಥ್‍ಸಿಂಗ್ ಇವರುಗಳು ಭಯೋತ್ಪಾದಕರನ್ನು ಸದೆಬಡಿದು ಇನ್ನು ಮುಂದೆ ಇಂತಹ ಅಮಾನವೀಯ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕೆಂದು ವಿನಂತಿಸಿದರು.

Also Read: ಚಿತ್ರದುರ್ಗ ನಗರಸಭೆ ಸದ್ಯಕ್ಕೆ ಮಹಾನಗರ ಪಾಲಿಕೆ ಆಗದು | ಪೌರಾಯುಕ್ತೆ ಎಂ.ರೇಣುಕಾ

ಜಿಲ್ಲಾ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಇಕ್ಬಾಲ್ ಹುಸೇನ್(ಎಂ.ಸಿ.ಓ.ಬಾಬು) ಮಾತನಾಡಿದರು.

ಪ್ರತಿಭಟನೆಯಲ್ಲಿ ಸುಲ್ತಾನಿ ಜಾಮಿಯಾ ಮಸ್ಜಿದ್ ಮರ್ಕಜೆ-ಎ-ಅಹಲೆ ಸುನ್ನತ್ ಅಧ್ಯಕ್ಷ ಸಾಧಿಕ್‍ಭಾಷ, ಕಾರ್ಯದರ್ಶಿ ಮುಹಿಬ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ ಸೇರಿದಂತೆ ವಿವಿಧ ಮಸೀದಿಗಳ ಮುತುವಲ್ಲಿಗಳು ಪಾಲ್ಗೊಂಡಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version