
CHITRADURGA NEWS | 04 OCTOBER 2025
ಚಿತ್ರದುರ್ಗ: ಮೈಸೂರು ದಸರಾ ಉತ್ಸವದಲ್ಲಿ ನಡೆದ ಸ್ಥಬ್ದ ಚಿತ್ರ ಪ್ರದರ್ಶನದಲ್ಲಿ ಚಿತ್ರದುರ್ಗ ಜಿಲ್ಲೆಯ ರಾಜಾವೀರ ಮದಕರಿ ನಾಯಕ ಸ್ಥಬ್ದಚಿತ್ರ ಪ್ರಥಮ ಸ್ಥಾನ ಪಡೆದಿದೆ.
ರಾಜಾವೀರ ಮದಕರಿ ನಾಯಕ ಮದಿಸಿದ ಆನೆಯನ್ನು ಮದವಡಗಿಸಿದ ಪರಿಕಲ್ಪನೆಯಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯಿತಿಯಿಂದ ರಚಿಸಲಾಗಿತ್ತು.

ಇದನ್ನೂ ಓದಿ: ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ | ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ | ಜಿಲ್ಲಾಧಿಕಾರಿ
ಈ ಸ್ಥಬ್ದ ಚಿತ್ರಕ್ಕೆ ಬೆಂಗಳೂರು ವಿಭಾಗ ಮಟ್ಟದಲ್ಲಿ ಮೊದಲ ಸ್ಥಾನ ಲಭಿಸಿದೆ. ಈ ಸ್ತಬ್ಧ ಚಿತ್ರ ನಿರರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಸಿಇಓ ಡಾ.ಎಸ್.ಆಕಾಶ್ ಪರಿಕಲ್ಪನೆ ನೀಡಿದ್ದರು.
ಸ್ತಬ್ಧ ಚಿತ್ರ ತಯಾರಿಕೆ ಹಾಗೂ ಪ್ರದರ್ಶನದಲ್ಲಿ ಶ್ರಮವಹಿಸಿದ ಎಲ್ಲಾ ಕಲಾವಿದರಿಗೂ ಹಾಗೂ ಸಹಕರಿಸಿದ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿಯಿಂದ ಅಭಿನಂದನೆ ಸಲ್ಲಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
