By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    6 hours ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    6 hours ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    7 hours ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    10 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    19 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    11 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    18 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    18 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    3 days ago
Reading: ಅನಧಿಕೃತ ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಎನ್.ಆರ್.ಮಹೇಶ್ವರಪ್ಪ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅನಧಿಕೃತ ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಎನ್.ಆರ್.ಮಹೇಶ್ವರಪ್ಪ ಸೂಚನೆ

News Desk Chitradurga News
Last updated: 6 May 2026 19:43
News Desk Chitradurga News
4 months ago
Share
ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ
ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ
SHARE

CHITRADURGA NEWS | 06 MAY 2026

ಚಿತ್ರದುರ್ಗ: ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ನಡೆಯುತ್ತಿರುವ ಅನಧಿಕೃತ ಶಾಲೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಶಿಕ್ಷಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.    

ಇದನ್ನೂ ಓದಿ: ವೀರಶೈವ ಸಮುದಾಯದ ರುದ್ರಭೂಮಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೇಟಿ, ಪರಿಶೀಲನೆ

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನೇಕ ಶಾಲೆಗಳು ರಾಜ್ಯ ಪಠ್ಯಕ್ರಮದ ಅನುಮತಿ ಪಡೆದು, ಸಿಬಿಎಸ್‍ಇ ಅಥವಾ ಐಸಿಎಸ್‍ಇ ಎಂದು ಪ್ರಚಾರ ಮಾಡುತ್ತಿವೆ. ಇದು ಫೋಷಕರಿಗೆ ಮಾಡುವ ವಂಚನೆಯಾಗಿದೆ. ಶೈಕ್ಷಣಿಕ ವರ್ಷದ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನಧಿಕೃತ ಶಾಲೆಗಳ ಪಟ್ಟಿಯನ್ನು ಬಹಿರಂಗಪಡಿಸಬೇಕು ಎಂದು ಸಲಹೆ ನೀಡಿದರು.

ಶಾಲೆ ನಡೆಸಲು ಇರಬೇಕಾದ ಕನಿಷ್ಠ ಜಮೀನು, ಕಟ್ಟಡದ ಸುರಕ್ಷತೆ ಮತ್ತು ಇತರೆ ನಿಯಮಗಳ ಪಾಲಿಸದ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಕೆಲವು ಶಾಲೆಗಳು ಒಂದೇ ಆವರಣದಲ್ಲಿ ವಿವಿಧ ಪಠ್ಯಕ್ರಮಗಳನ್ನು ನಡೆಸುತ್ತಾ ನಿಯಮಗಳನ್ನು ಉಲ್ಲಂಘಿಸುತ್ತಿವೆ. ಇಂತಹ ಶಾಲೆಗಳ ಪಟ್ಟಿಯನ್ನು ಪತ್ರಿಕೆಗಳ ಮೂಲಕ ಪ್ರಕಟಿಸಬೇಕು ಎಂದು ತಿಳಿಸಿದ ಅವರು, ಫೋಷಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆಯು ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ ಎಂದರು.

ಶಾಲಾ ಆಸ್ತಿ ಸಂರಕ್ಷಣೆಗೆ ಕ್ರಮವಹಿಸಿ: 

ಶಾಲಾ ಜಾಗವನ್ನು ಒತ್ತುವರಿ ಮಾಡಿಕೊಳ್ಳುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಖಜಾಂಚಿ ಭಕ್ತ ಪ್ರಹ್ಲಾದ್ ಸಲಹೆ ನೀಡಿದರು.

ಇದನ್ನೂ ಓದಿ: ಮೇ.17 ರಂದು ಜಿಲ್ಲಾ ಯಾದವ (ಗೊಲ್ಲರ) ಸಂಘದ ಚುನಾವಣೆ | ಗುರುತಿನ ಚೀಟಿ ಪಡೆಯಲು AC ಕಾಂತರಾಜ್ ಸೂಚನೆ

ಸರ್ಕಾರಿ ಶಾಲೆಗಳಿಗೆ ಈ ಹಿಂದೆ ಅನೇಕರು ಭೂದಾನ ಮಾಡಿರುತ್ತಾರೆ. ಈ ನಿಟ್ಟಿನಲ್ಲಿ ಶಾಲೆಯ ದಾಖಲೆಗಳನ್ನು ಕ್ರಮಬದ್ಧಗೊಳಿಸಿ ನೋಂದಣಿ ಮಾಡಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಸಮಗ್ರ ಸುತ್ತೋಲೆ ತಂದು ದಾಖಲಾತಿ ಸಂರಕ್ಷಣೆಗೆ ಮಾಡುವುದು ಒಳಿತು ಅಭಿಪ್ರಾಯಪಟ್ಟ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಜಾನುವಾರುಗಳಿಗೆ ಆಧಾರ್ ಮಾದರಿಯ ಟ್ಯಾಗಿಂಗ್: ಜಿಲ್ಲೆಯಲ್ಲಿ ಇದೇ ಎಪ್ರಿಲ್ 27 ರಿಂದ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಆರಂಭವಾಗಿದ್ದು, ಈಗಾಗಲೇ 90,000 ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಕುಮಾರ್ ಸಭೆಗೆ ಮಾಹಿತಿ ನೀಡಿದರು.

 ಈ ಬಾರಿ ಲಸಿಕೆ ನೀಡಿದ ತಕ್ಷಣವೇ ಜಾನುವಾರುಗಳಿಗೆ ‘ಇನಾಫ್’ ತಂತ್ರಾಂಶದಡಿ 12 ಅಂಕಿಯ ಆಧಾರ್ ಸಂಖ್ಯೆಯ ಟ್ಯಾಗ್ ಅಳವಡಿಸಿ ನೋಂದಾಯಿಸಲಾಗುತ್ತಿದೆ. ಇದರಿಂದ ಲಸಿಕೆ ಪಡೆದ ಜಾನುವಾರುಗಳ ನಿಖರ ಮಾಹಿತಿ ಲಭ್ಯವಾಗಲಿದ್ದು, ನಕಲಿ ದಾಖಲಾತಿಗೆ ಅವಕಾಶವಿರುವುದಿಲ್ಲ. ಜೂನ್ ತಿಂಗಳಿನಿಂದ ಕುರಿ ಮತ್ತು ಮೇಕೆಗಳಿಗೆ ಬರುವ ‘ಗಳಲೆ ರೋಗ’ ತಡೆಗೆ ರಾಷ್ಟ್ರೀಯ ಕಾರ್ಯಕ್ರಮದಡಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಸಾವಿರ ಬಸ್, 50 ಸಾವಿರ ಕಾರು | 2 ಕೃತಿ ಬಿಡುಗಡೆ

ಅನಿವಾರ್ಯ ಕಾರಣಗಳಿಂದ ಜಾನುವಾರುಗಳು ಮೃತಪಟ್ಟರೆ ನೀಡಲಾಗುತ್ತಿದ್ದ ವಿಮಾ ಪರಿಹಾರದ ಮೊತ್ತವನ್ನು ಹೆಚ್ಚಿಸಲಾಗಿದ್ದು, ದನ ಅಥವಾ ಎತ್ತುಗಳಿಗೆ ರೂ.15,000 ಹಾಗೂ ಕುರಿ-ಮೇಕೆಗಳಿಗೆ ಅವುಗಳ ವಯಸ್ಸಿಗೆ ಅನುಗುಣವಾಗಿ ರೂ.5,000 ದಿಂದ ರೂ.7,000 ವರೆಗೆ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಚಿತ್ರದುರ್ಗ ಜಿಲ್ಲೆಗೆ ಪ್ರತ್ಯೇಕ ಹಾಲುಒಕ್ಕೂಟಕ್ಕೆ ಪ್ರಸ್ತಾವನೆ ಸಲ್ಲಿಸಿ: ಶಿವಮೊಗ್ಗ ಹಾಲು ಒಕ್ಕೂಟದಿಂದ ಚಿತ್ರದುರ್ಗ ಜಿಲ್ಲೆಯನ್ನು ಪ್ರತ್ಯೇಕಿಸಿ, ಕೆಎಂಇಆರ್‍ಸಿ ಅನುದಾನದಡಿಯಲ್ಲಿ ಚಿತ್ರದುರ್ಗ ಹಾಲು ಒಕ್ಕೂಟ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಕೃಷಿಕ ಸಮಾಜದ ಸದಸ್ಯರು ಸಭೆಯಲ್ಲಿ ತೀರ್ಮಾನಿಸಿದರು.

ರೇಷ್ಮೆ ಕೃಷಿ ಕುರಿತು ವಿಚಾರ ಸಂಕಿರಣ ಆಯೋಜಿಸಿ: 

ರೇಷ್ಮೆ ಕೃಷಿಯ ಕುರಿತು ಜಿಲ್ಲೆಯ ರೈತರಿಗೆ ತರಬೇತಿ, ಕ್ಷೇತ್ರೋತ್ಸವ, ವಿಚಾರ ಸಂಕಿರಣ ಆಯೋಜಿಸುವ ಮೂಲಕ ರೇಷ್ಮೆ ಕೃಷಿ ಉತ್ತೇಜಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ರಾಗಿ ಶಿವಮೂರ್ತಪ್ಪ ಸಲಹೆ ನೀಡಿದರು.

ಜಿಲ್ಲೆಯ ಒಟ್ಟು 3,238 ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಬೆಳೆಯಲಾಗುತ್ತಿದ್ದು, ಒಟ್ಟು 3,830 ರೇಷ್ಮೆ ಬೆಳೆಗಾರರು ಜಿಲ್ಲೆಯಲ್ಲಿದ್ದಾರೆ. ಕಳೆದ ಮಾರ್ಚ್ ತಿಂಗಳೊಂದರಲ್ಲೇ 18 ಲಕ್ಷ ಚಾಕಿ ವಿತರಿಸಲಾಗಿದ್ದು, 1,500 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆಯ ಗುರಿ ತಲುಪಲಾಗಿದೆ. ರೈತರಿಗೆ ರೇಷ್ಮೆ ಕೃಷಿ ಸುಲಭಗೊಳಿಸಲು ಇಲಾಖೆ ಕಳೆದ ವರ್ಷದಿಂದ ಹಲವಾರು ನೆರವು ನೀಡಿದೆ. ಜಿಲ್ಲೆಯಾದ್ಯಂತ 35 ರೇಷ್ಮೆ ಹುಳು ಸಾಕಾಣಿಕೆ ಮನೆಗಳಿಗೆ ಸಹಾಯಧನ ನೀಡಲಾಗಿದ್ದು, ಕಡಿಮೆ ವೆಚ್ಚದಲ್ಲಿ ಕೃಷಿ ಮಾಡಲು ಬಯಸುವವರಿಗಾಗಿ 10 ಗರಿ ಶೆಡ್‍ಗಳನ್ನು ನಿರ್ಮಿಸಿಕೊಡಲಾಗಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…

150 ಹೆಕ್ಟೇರ್ ರೇಷ್ಮೆ ಪ್ರದೇಶಕ್ಕೆ ಹನಿ ನೀರಾವರಿ ಅಳವಡಿಸಲು ಆರ್ಥಿಕ ನೆರವು ಒದಗಿಸಲಾಗಿದೆ. ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಸೌರ ದೀಪ ವಿತರಿಸಲಾಗುತ್ತಿದೆ. ಹಿರಿಯೂರು ತಾಲ್ಲೂಕಿನಲ್ಲಿ 600 ಹೆಕ್ಟೇರ್, ಚಳ್ಳಕೆರೆ 400 ಹೆಕ್ಟೇರ್, ಚಿತ್ರದುರ್ಗ 350 ಹೆಕ್ಟೇರ್, ಹೊಸದುರ್ಗ 320 ಹೆಕ್ಟೇರ್, ಮೊಳಕಾಲ್ಮೂರು 300 ಹೆಕ್ಟೇರ್ ಹಾಗೂ ಹೊಳಲ್ಕೆರೆ 120 ಹೆಕ್ಟೇರ್ ಪ್ರದೇಶವನ್ನು ರೇಷ್ಮೆ ಕೃಷಿ ಹೊಂದಿದೆ ಎಂದು ರೇಷ್ಮೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಿಥುನ್ ಕುಮಾರ್, ಜಿಲ್ಲಾ ಕೃಷಿಕ ಸಮಾಜದ ಸದಸ್ಯರಾದ ಭಕ್ತ ಪ್ರಹ್ಲಾದ್, ಚಂದ್ರಶೇಖರಪ್ಪ, ಶಿವಲಿಂಗಪ್ಪ, ಪರಮೇಶ್ವರಪ್ಪ, ಧರಣೇಶ್, ಕಾಂತರಾಜು, ರಮೇಶಪ್ಪ, ರಾಗಿ ಶಿವಮೂರ್ತಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsLegal ActionUnauthorized schoolಅನಧಿಕೃತ ಶಾಲೆಕಾನೂನು ಕ್ರಮಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ರಶೈವ ಸಮುದಾಯದ ರುದ್ರಭೂಮಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೇಟಿ ವೀರಶೈವ ಸಮುದಾಯದ ರುದ್ರಭೂಮಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೇಟಿ, ಪರಿಶೀಲನೆ
Next Article arecanut price list ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
Leave a Comment

Leave a Reply Cancel reply

Your email address will not be published. Required fields are marked *

ನೈಸರ್ಗಿಕ ಕೃಷಿ ಕಾರ್ಯಾಗಾರ
ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
ಮುಖ್ಯ ಸುದ್ದಿ
DC ramya
ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
ಮುಖ್ಯ ಸುದ್ದಿ
ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಮುಖ್ಯ ಸುದ್ದಿ
ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up