By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುಂದಿನ ಚುನಾವಣೆಯಲ್ಲೂ ಚಿತ್ರದುರ್ಗದಿಂದಲೇ ಸ್ಪರ್ಧೆ | ಕೋಲಾರಕ್ಕೆ ಹೋಗುವುದಿಲ್ಲ | ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುಂದಿನ ಚುನಾವಣೆಯಲ್ಲೂ ಚಿತ್ರದುರ್ಗದಿಂದಲೇ ಸ್ಪರ್ಧೆ | ಕೋಲಾರಕ್ಕೆ ಹೋಗುವುದಿಲ್ಲ | ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಮುಖ್ಯ ಸುದ್ದಿ

ಮುಂದಿನ ಚುನಾವಣೆಯಲ್ಲೂ ಚಿತ್ರದುರ್ಗದಿಂದಲೇ ಸ್ಪರ್ಧೆ | ಕೋಲಾರಕ್ಕೆ ಹೋಗುವುದಿಲ್ಲ | ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

chitradurganews.com
Last updated: 4 November 2023 17:28
chitradurganews.com
2 years ago
Share
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭೆಗೆ ಪಕ್ಷವೇ ಹೇಳಿದರೂ ಕೋಲಾರಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
2019ರ ಲೋಕಸಭೆ ಚುನಾವಣೆಗೆ ಚಿತ್ರದುರ್ಗಕ್ಕೆ ಬಂದಾಗ ಅನೇಕರಿಗೆ ನನ್ನ ಮುಖವನ್ನೇ ನೋಡಲು ಆಗಿರಲಿಲ್ಲ. ಆದರೂ ಈ ಕ್ಷೇತ್ರದ ಜನತೆ ಮತ ಕೊಟ್ಟು ಗೆಲ್ಲಿಸಿದ್ದಾರೆ. ಅವರ ವಿಶ್ವಾಸ ಉಳಿಸಿಕೊಳ್ಳುವುದಷ್ಟೇ ಮುಖ್ಯ ಎಂದರು.

ಇನ್ನೂ ಸ್ಥಳೀಯರಿಗೆ ಟಿಕೇಟ್ ನೀಡಬೇಕು ಎನ್ನುವ ಕೂಗಿಗೆ ನನ್ನ ವಿರೋಧವಿಲ್ಲ. ಈ ಅಭಿಪ್ರಾಯವನ್ನು ಗೌರವಿಸುತ್ತೇನೆ. ಇದು ಮತದಾರರ ಪ್ರಜ್ಞಾವಂತಿಕೆಯನ್ನು ತೋರಿಸುತ್ತದೆ. ಈ ಚಳುವಳಿಯನ್ನು ಗೌರವಿಸುತ್ತೇನೆ. ಸ್ಥಳೀಯರಿಗೆ ಪಕ್ಷ ಅವಕಾಶ ನೀಡಿದರೆ ನಾನು ಬೆಂಬಲ ನೀಡುತ್ತೇನೆ ಎಂದು ನಾರಾಯಣಸ್ವಾಮಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಸೌಭಾಗ್ಯ-ಬಸವರಾಜನ್ ವಿರುದ್ಧದ ಪಿತೂರಿ ಪ್ರಕರಣ ರದ್ದು

ಇಂದು ಚುನಾವಣೆ, ಅಧಿಕಾರ ಎನ್ನುವುದು ಹಣ ಮಾಡುವ ವ್ಯವಸ್ಥೆಯಾಗುತ್ತಿದೆ. ಗೆದ್ದವರಿಗೆ ರಾಜನ ಮನಸ್ಥಿತಿ ಬರುತ್ತಿರುವುದು ವಿಪರ್ಯಾಸ. ಇವತ್ತಿಗೂ ಮತದಾರರು ಸೌಲಭ್ಯಗಳನ್ನು ಅಂಗಲಾಚುವ ಪರಿಸ್ಥಿತಿಯಿದೆ. ರಾಜಕಾರಣಿಗಳು ಎಲ್ಲವನ್ನೂ ಲಾಭದ ದೃಷ್ಟಿಯಿಂದಲೇ ನೋಡುತ್ತಿದ್ದಾರೆ. ಇದನ್ನೆಲ್ಲಾ ನೋಡಿ ರಾಜಕಾರಣದ ಬಗ್ಗೆ ಬೇಸರ ಮೂಡಿದೆ.

ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವವರು ಚುನಾವಣೆಗೆ ಬರಬೇಕು. ವ್ಯವಹಾರಕ್ಕಾಗಿ ರಾಜಕಾರಣ, ಚುನಾವಣೆ ಹಾಗೂ ಅಧಿಕಾರವನ್ನು ಬಳಸಿಕೊಳ್ಳುವುದು ಒಳ್ಳೆದಲ್ಲ ಎಂದು ನಾರಾಯಣಸ್ವಾಮಿ ಹೇಳಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:A. NarayanaswamyChitradurgaChitradurga newsElectionKannada UpdatesLok SabhaMPUnion Ministerಎ.ನಾರಾಯಣಸ್ವಾಮಿಕನ್ನಡ ಅಪ್ಡೇಟ್ಸ್ಕೇಂದ್ರ ಸಚಿವಚಿತ್ರದುರ್ಗಚಿತ್ರದುರ್ಗ ನ್ಯೂಸ್ಚುನಾವಣೆಲೋಕಸಭೆಸಂಸದ
Share This Article
Facebook Email Print
Previous Article ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸಭೆ ಚಿತ್ರದುರ್ಗದಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸಭೆ | ಎಬಿವಿಪಿಯಿಂದ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ- ಡಾ.ಎಂ.ಎನ್.ರವಿ ಮಂಡ್ಯ
Next Article ಚಿಂತಕ ಜಿ.ಬಿ.ಹರೀಶ್ ಎಬಿವಿಪಿ ರಾಜ್ಯ ಕಾರ್ಯಕಾರಿಣಿ | ಜಾಗತಿಕ ವಿದ್ಯಮಾನಗಳನ್ನು ಭಾರತೀಯ ದೃಷ್ಟಿಕೋನದಲ್ಲಿ ನೋಡಿ | ಚಿಂತಕ ಜಿ.ಬಿ.ಹರೀಶ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up