
CHITRADURGA NEWS | 29 AUGUST 2026
ಚಿತ್ರದುರ್ಗ: ಮಹಾನ್ ಚೇತನಗಳಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಕಾಯಕಯೋಗಿ ಶ್ರೀ ನುಲಿಯ ಚಂದಯ್ಯ ಅವರ ತತ್ವ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.
ಇದನ್ನೂ ಓದಿ: ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ನುಲಿಯ ಚಂದಯ್ಯ ಜಯಂತಿ ಆಚರಣೆ ಸಮಾರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
19 ಮತ್ತು 20ನೇ ಶತಮಾನದ ಸಂಕೀರ್ಣ ಕಾಲಘಟ್ಟದಲ್ಲಿ ಅಸ್ಪøಶ್ಯತೆ ಹಾಗೂ ಸಾಮಾಜಿಕ ಕೇಡುಗಳ ವಿರುದ್ಧ ಧ್ವನಿ ಎತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಶಿಕ್ಷಣ ಪಡೆಯಿರಿ;ನೀವು ಸ್ವತಂತ್ರರಾಗುತ್ತೀರಿ. ಸಂಘಟಿತರಾಗಿರಿ; ನೀವು ಬಲಿಷ್ಟರಾಗುತ್ತೀರಿ. ಔದ್ಯೋಗಿಕವಾಗಿ ಉದ್ದಿಮೆಗಳನ್ನು ಸ್ಥಾಪಿಸಿ; ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುತ್ತದೆ ಎಂದು ಸಂದೇಶ ನೀಡುವ ಮೂಲಕ ಸಮಾಜವನ್ನು ಜಾಗೃತಗೊಳಿಸಿದರು.
ಹಿಂದುಳಿದ ಸಮಾಜದ ಸುಧಾರಕರು, ಆಧ್ಯಾತ್ಮ ಚಿಂತಕರು, ಶೈಕ್ಷಣಿಕ ಸಾಧನೆಯಲ್ಲಿ ಅತ್ಯುನ್ನತ ಪ್ರಗತಿಯ ರೂವಾರಿಗಳು. ಶೋಷಿತರು ಪರ ಹೋರಾಡಿ ಕೇರಳದಲ್ಲಿ ಕಾಂತ್ರಿಯನ್ನು ಮಾಡಿದರು. ಇಂದು ಕೇರಳ ರಾಜ್ಯವು ಶೇ.100ರಷ್ಟು ಸಾಕ್ಷರತೆ ಸಾಧಿಸಲು ನಾರಾಯಣ ಗುರುಗಳ ಶ್ರಮ ಹಾಗೂ ಸಮಾಜ ಸುಧಾರಣಾ ಚಿಂತನೆಗಳೇ ಮೂಲ ಕಾರಣ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್
ಶರಣ ನುಲಿಯ ಚಂದಯ್ಯನವರು ಕಲ್ಯಾಣ ರಾಜ್ಯದ ಹೊರವಲಯದ ಕೆರೆಯ ಹಿನ್ನಿರ ದಡದಲ್ಲಿ ಬೆಳೆದ ಸೊಗಸಾದ ಹುಲ್ಲು ತಂದು ಹಗ್ಗ ಹೊಸೆದು, ಮಾರಿ ಬಂದ ಹಣದಿಂದ ಜಂಗಮ ದಾಸೋಹ ನಡೆಸುತ್ತಿದ್ದ ಚಂದಯ್ಯ ಅವರು ಒಬ್ಬ ಕಾಯಕಯೋಗಿ ಎಂದು ಹೇಳಿದರು.
‘ಕಾಯಕವೇ ಕೈಲಾಸ’ ಎಂಬ ತತ್ವವನ್ನು ಅಕ್ಷರಶಃ ಜೀವಿಸಿ ಸಮಾಜಕ್ಕೆ ಮುನ್ನಡೆ ತೋರಿದವರು ಶ್ರೀ ನುಲಿಯ ಚಂದಯ್ಯನವರು. ಕಾಯಕ ಸಿದ್ಧಾಂತದ ಮೂಲಕ ಪ್ರತಿಯೊಬ್ಬರಿಗೂ ಶ್ರಮದ ಮಹತ್ವ ತಿಳಿಸಿಕೊಟ್ಟ ಧೀಮಂತ ಶರಣರು ಎಂದರು.
ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ತಮ್ಮ ಯಾವುದೇ ರೀತಿಯ ಕುಂದುಕೊರತೆಗಳಿದ್ದಲ್ಲಿ ನೇರವಾಗಿ ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತರಬಹುದು. ಸಚಿವನಾಗಿ ನಾನು ಮತ್ತು ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು, ಸಮಸ್ಯೆಗಳನ್ನು ಪರಿಹರಿಸಲು ಬದ್ಧರಾಗಿದ್ದೇವೆ ಎಂದು ಸಚಿವರ ಟಿ.ರಘುಮೂರ್ತಿ ಆಶ್ವಾಸನೆ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಮಾತನಾಡಿ, ಕೇರಳದಲ್ಲಿ ಜಾತಿ ಪದ್ಧತಿಯ ವಿಷಬೀಜ ಆವರಿಸಿದ್ದ ಕಾಲದಲ್ಲಿ ಅಸ್ಪøಶ್ಯತೆ, ಅನಕ್ಷರತೆ ಹಾಗೂ ಅಸಮಾನತೆ ಹೋಗಲಾಡಿಸಲು ನಾರಾಯಣ ಗುರುಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ. ವೈಯಕ್ತಿಕ ಜೀವನ ತೊರೆದು, ಮದುವೆಯಾಗದೆ ಸಂಸಾರ ತ್ಯಾಗ ಮಾಡಿದ ಅವರು, ತಾರತಮ್ಯಕ್ಕೆ ಒಳಗಾಗಿದ್ದ ಕೆಳವರ್ಗದ ಮತ್ತು ನೊಂದ ಸಮುದಾಯದ ಪರವಾಗಿ ನಿಂತು ಧ್ವನಿಯಾದರು ಎಂದು ಸ್ಮರಿಸಿದರು.
ಇದನ್ನೂ ಓದಿ: ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
12ನೇ ಶತಮಾನದಲ್ಲಿ ಬಸವಣ್ಣನವರು ನಾಡಿಗೆ ನೀಡಿದ ಕಾಯಕ ತತ್ವವನ್ನು ಕೆಳವರ್ಗದ ಶರಣರು ಅಕ್ಷರಶಃ ಪಾಲಿಸಿದರು. ಬಸವಕಲ್ಯಾಣದ ಅನುಭವ ಮಂಟಪದಲ್ಲಿ ನುಲಿಯ ಚಂದಯ್ಯ, ಮೋಳಿಗೆ ಮಾರಯ್ಯ, ಹಡಪದ ಅಪ್ಪಣ್ಣ, ಅಂಬಿಗರ ಚೌಡಯ್ಯ, ಆಯ್ದಕ್ಕಿ ಲಕ್ಕಮ್ಮ ಮುಂತಾದ ಶರಣರು ತಮ್ಮ ಕಾಯಕದ ಮೂಲಕ ಸಮಾಜಕ್ಕೆ ದೊಡ್ಡ ಚಡಿಯೇಟು ನೀಡಿದ್ದರು. ಇವರ ಕಾಯಕ ನಿಷ್ಠೆ ಮತ್ತು ವಚನ ಸಾಹಿತ್ಯದ ಕೊಡುಗೆಗಳು ಇಂದಿಗೂ ನಮಗೆ ಹೆಮ್ಮೆಯ ಸಂಗತಿಯಾಗಿವೆ ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಆರ್.ಶಿವಣ್ಣ ಗಂಜಿಗಟ್ಟೆ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಆರ್ಯ ಈಡಿಗರ ಸಮಾಜದ ಹೆಚ್.ಜೀವನ್, ಟಿ.ಮಂಜುನಾಥ್, ಅನುರಾಧ ರವಿಕುಮಾರ್, ಹೆಚ್.ಓ.ಜಗದೀಶ ಗುಂಡೇರಿ, ಇ.ಎನ್.ಲಕ್ಷ್ಮಿಕಾಂತ್, ಕೊರಮ ಸಮಾಜದ ಕೆ.ಕೃಷ್ಣಪ್ಪ, ದ್ವಾರಕನಾಥ್, ಕುಮಾರ್, ರಾಮಚಂದ್ರಪ್ಪ ಸೇರಿದಂತೆ ಮತ್ತಿತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

